ಭಜರಂಗದಳ ಬ್ಯಾನ್ ಬಗ್ಗೆ ಹೇಳಿರುವ ಕಾಂಗ್ರೆಸ್ ಸರ್ವನಾಶ: ಡಿ.ವಿ. ಸದಾನಂದಗೌಡ

Published : May 03, 2023, 05:32 PM IST
ಭಜರಂಗದಳ ಬ್ಯಾನ್ ಬಗ್ಗೆ ಹೇಳಿರುವ ಕಾಂಗ್ರೆಸ್ ಸರ್ವನಾಶ: ಡಿ.ವಿ. ಸದಾನಂದಗೌಡ

ಸಾರಾಂಶ

ದೇಶಭಕ್ತ ಸಂಘಟನೆಯಾಗಿರುವ ಭಜರಂಗದಳವನ್ನು ಬ್ಯಾನ್ ಮಾಡುವುದಾಗಿ ಹೇಳಿರುವ ಕಾಂಗ್ರೆಸ್ ರಾಜ್ಯದಲ್ಲೂ ಸರ್ವನಾಶವಾಗಲಿದೆ ಎಂದು ಕಾಂಗ್ರೆಸ್ ವಿರುದ್ಧ  ಡಿ.ವಿ. ಸದಾನಂದಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವರದಿ: ರವಿ.ಎಸ್ ಹಳ್ಳಿ ಏಷ್ಯಾನೆಟ್ ಸುವರ್ಣ ನ್ಯೂಸ್

ಕೊಡಗು (ಮೇ.3): ದೇಶಭಕ್ತ ಸಂಘಟನೆಯಾಗಿರುವ ಭಜರಂಗದಳ ವನ್ನು ಬ್ಯಾನ್ ಮಾಡುವುದಾಗಿ ಹೇಳಿರುವ ಕಾಂಗ್ರೆಸ್ ರಾಜ್ಯದಲ್ಲೂ ಸರ್ವನಾಶವಾಗಲಿದೆ ಎಂದು ಕಾಂಗ್ರೆಸ್ ವಿರುದ್ಧ ಕೇಂದ್ರ ಮಾಜಿ ಸಚಿವ ಡಿ.ವಿ. ಸದಾನಂದಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಡಿಕೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಡಿ.ವಿ. ಸದಾನಂದ ಗೌಡ ಅವರು ವಿನಾಶಕಾಲೇ ವಿಪರೀತ ಬುದ್ಧಿ ಎನ್ನುತ್ತಾರೆ. ಹಾಗೆ ಕಾಂಗ್ರೆಸ್ ಕಥೆಯಾಗಿದೆ. ಕೊನೆಗಾಲದಲ್ಲಿ ದೀಪ ಪ್ರಜ್ವಲಿಸಿ ಉರಿಯುವ ಹಾಗೆ ಕಾಂಗ್ರೆಸ್ ಉರಿಯುತ್ತಿದೆ. ಎಲ್ಲಾ ರಾಜ್ಯಗಳಲ್ಲೂ ಕಾಂಗ್ರೆಸ್ ಇಲ್ಲದಂತೆ ಆಗಿದ್ದು, ರಾಜ್ಯದಲ್ಲೂ ಸರ್ವನಾಶವಾಗಲಿದೆ. ಚುನಾವಣೆ ಬಳಿಕ ಕಾಂಗ್ರೆಸ್ ನಾಯಕರುಗಳು ರಾಜ್ಯದಲ್ಲಿ ರಾಜಕೀಯ ಸನ್ಯಾಸತ್ವ ಸ್ವೀಕರಿಸಲಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ಇನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ವಿಷದ ಹಾವು ಎಂದು ಹೇಳಿರುವುದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಡಿ.ವಿ. ಸದಾನಂದಗೌಡ ಅವರು ಇದು ಖರ್ಗೆ ಅವರ ಸ್ಥಾನ, ಘನತೆಗೆ ಗೌರವ ತರುವಂತಹದ್ದು ಅಲ್ಲ. ಬಿಜೆಪಿಯವರು ಕಾಂಗ್ರೆಸ್ನವರಿಗೆ ಏನು ಬೈದಿಲ್ಲ ಎಂದು ಹೇಳುವುದಿಲ್ಲ. ಬಿಜೆಪಿಯ ಯಾರೋ ಚಿಕ್ಕಪುಟ್ಟ ಲೀಡರ್ಗಳು ಮಾತನಾಡಿರಬಹುದು. ಆದರೆ ಅಂತಹ ಮಹಾನ್ ವ್ಯಕ್ತಿಗೆ ಎಐಸಿಸಿ ಅಧ್ಯಕ್ಷ ಸ್ಥಾನದಲ್ಲಿ ಇರುವ ಖರ್ಗೆ ಅಂತಹವರು ಇಂತಹ ಮಾತನ್ನು ಆಡಬಾರದಾಗಿತ್ತು. ರಾಜ್ಯದ ಜನರು ಇದನ್ನೆಲ್ಲಾ ಗಮನಿಸುತ್ತಿದ್ದಾರೆ. ಚುನಾವಣೆಯಲ್ಲಿ ಇದಕ್ಕೆಲ್ಲಾ ಜನರು ಯೋಚಿಸಿ ಸರಿಯಾದ ಉತ್ತರ ನೀಡಲಿದ್ದಾರೆ ಎಂದಿದ್ದಾರೆ.

ಕರ್ನಾಟಕದಲ್ಲಿ ಬಿಜೆಪಿಗೆ ಇದು ಸವಾಲಿನ ಚುನಾವಣೆಯಾಗಿದ್ದು, ರಾಜ್ಯದಲ್ಲಿ ಸಂಪೂರ್ಣ ಬಹುಮತದ ಸರಕಾರ ಬರುತ್ತದೆ. ಸ್ವಂತ ಶಕ್ತಿಯಲ್ಲಿ ಬಿಜೆಪಿ ಅಧಿಕಾರ ಹಿಡಿಯಲ್ಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. 2008 ರಲ್ಲಿ 110 ಸ್ಥಾನಗಳಿಸಿದ್ದೆವು. ಆದರೆ ಆಗ ನಮ್ಮ ಪಕ್ಷದಲ್ಲಿ ಆಂತರಿಕ ಸಮಸ್ಯೆಯಿಂದ ಕೆಜೆಪಿ ಪಕ್ಷದ ಸ್ಥಾಪನೆಯಾಗಿದ್ದರಿಂದ ಆಗ ಪಕ್ಷಕ್ಕೆ ಹಿನ್ನಡೆ ಉಂಟಾಗಿತ್ತು. ನಂತರ 2018 ರ ಚುನಾವಣೆಯಲ್ಲೂ 104 ಸ್ಥಾನಕ್ಕೆ ತೃಪ್ತಿಪಟ್ಟುಕೊಂಡೆವು. ಆದರೆ ಈ ಬಾರಿ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದ್ದೇವೆ. ಅದಕ್ಕಾಗಿ ಕೇಂದ್ರ ಸರ್ಕಾರ ಎಲ್ಲಾ ವ್ಯವಸ್ಥೆಗಳನ್ನು ಮಾಡಿದೆ ಎಂದರು.

ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಕೊಟ್ಟಿರುವ ಅನುದಾನದಿಂದ ರಾಜ್ಯ ಅಭಿವೃದ್ಧಿ ಆಗಿದೆ. ಹೀಗಾಗಿ ಡಬ್ಬಲ್ ಎಂಜಿನ್ ಸರ್ಕಾರ ಸಾಕಷ್ಟು ಅಭಿವೃದ್ಧಿ ಮಾಡಿದೆ. 130 ಸ್ಥಾನಗಳಿಗೂ ಹೆಚ್ಚು ಗೆಲುವು ಸಾಧಿಸಲಿದ್ದೇವೆ ಎಂದಿದ್ದಾರೆ. ಕರ್ನಾಟಕ ಎಲ್ಲಾ ಕ್ಷೇತ್ರಗಳಲ್ಲಿ ಉನ್ನತ ಸ್ಥಾನದಲ್ಲಿದೆ. ಕೋವಿಡ್ ನಿರ್ವಹಣೆಯಲ್ಲೂ ರಾಜ್ಯ ಮೊದಲ ಸ್ಥಾನದಲ್ಲಿತ್ತು. ಕಳೆದ ಮೂರುವರೆ ವರ್ಷದಲ್ಲಿ ಕಾನೂನು ಸುವ್ಯವಸ್ಥೆ ಕೂಡ ಚೆನ್ನಾಗಿತ್ತು. ಮಳೆಹಾನಿಯಿಂದ ಆದ ನಷ್ಟಕ್ಕೆ ಪ್ರತಿ ರೈತನಿಗೆ 58 ಸಾವಿರದಂತೆ 138 ಕೋಟಿ ಕೊಟ್ಟಿದ್ದೇವೆ. ಒಂದು ಅಭಿವೃದ್ಧಿ ಮತ್ತು ಸುಶಾಸನ ಎರಡನ್ನು ನಾವು ಮಾಡಿದ್ದೇವೆ.

ಕನಕಪುರದಲ್ಲಿ ನೆಮ್ಮದಿಯ ಉಸಿರಾಟಕ್ಕೆ ಗೆದ್ದೇ ಗೆಲ್ಲುವೆ: ಆರ್ ಅಶೋಕ್

ಕಾಂಗ್ರೆಸ್ ಗೆ ಕರ್ನಾಟಕದಲ್ಲಿ ಪೂರ್ಣ ಬಹುಮತ ಬಂದಿತ್ತು. ಆದರೆ ಅವರ ಅವಧಿಯಲ್ಲಿ ಆಡಳಿತ ಹೇಗಿತ್ತು ಎನ್ನುವುದು ಗೊತ್ತಿದೆ. ಕಾಂಗ್ರೆಸ್ ನ ಅವಸಾನಕ್ಕೆ ಭಜರಂಗದಳ ವನ್ನು ನಿಷೇಧ ಮಾಡುತ್ತೇವೆ ಎಂದು ಹೇಳಿದೆ. ಆಶ್ವಾಸನೆ ಮತ್ತು ಭರವಸೆಗಳ ಆಧಾರದಲ್ಲಿ ಚುನಾವಣೆ ನಡೆಯಬಾರದು. ಆದರೆ ನೀವು ಮಾಡಿರುವ ಕೆಲಸಗಳನ್ನು ಜನರ ಮುಂದಿಟ್ಟು ಒಪ್ಪಿಗೆ ಪಡೆಯಿರಿ ಎಂದು ಕಾಂಗ್ರೆಸ್‌ ಗೆ ಸವಾಲು ಹಾಕಿದರು.

ಜೆಡಿಎಸ್ ಅಭ್ಯರ್ಥಿಯ ಸ್ವಯಂ ಕಿಡ್ನಾಪ್ ಡ್ರಾಮಾ, ಆರೋಪಿ ಪಟ್ಟದಲ್ಲಿ ಎಸ್.ಆರ್

ಉಚಿತ ಕೊಡುಗೆ ಕೊಡುವುದನ್ನು ನಾವು ಮಾಡಿ ತೋರಿಸಿ ಕೊಟ್ಟಿದ್ದೇವೆ. ಇಡೀ ದೇಶದ ಜನರಿಗೆ ಉಚಿತವಾಗಿ ವ್ಯಾಕ್ಸಿನ್ ಕೊಡಲು ಸಾಧ್ಯವಾಗಿದೆ. ಅದು ಜಿಎಸ್ ಟಿ ಸೋರಿಕೆ ಆಗದಂತೆ ಸಂಗ್ರಹಿಸುತ್ತಿದ್ದೇವೆ. ಹೀಗಾಗಿ ಉಚಿತವಾಗಿ ಕೊಡುವುದಕ್ಕೆ ಸಾಧ್ಯವಾಯಿತು. ಆದರೆ ಕಾಂಗ್ರೆಸ್ ಪಕ್ಷದ್ದು ಹಾಗಲ್ಲ ಎಂದು ಲೇವಡಿ ಮಾಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

1983ರಿಂದಲೂ ಬಸವರಾಜ ಹೊರಟ್ಟಿ, ನಾನು ದೋಸ್ತ್: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?
ಕಾಂಗ್ರೆಸ್ ಸರ್ಕಾರ ಬದುಕಿದೆಯೋ ಸತ್ತಿದೆಯೋ ಗೊತ್ತಿಲ್ಲ: ಬಿ.ವೈ.ವಿಜಯೇಂದ್ರ ವಾಗ್ದಾಳಿ