ಜೆಡಿಎಸ್‌ಗೆ ಬಹುಮತ ಸಿಕ್ಕರೆ ದಲಿತರು ಡಿಸಿಎಂ: ಕುಮಾರಸ್ವಾಮಿ

ಎರಡು ಬಾರಿ ಮುಖ್ಯಮಂತ್ರಿ ಆಗಿದ್ದೆ. ಆದರೆ ಎರಡು ಬಾರಿ ಮುಖ್ಯಮಂತ್ರಿಯಾದರೂ ಸರ್ಮಿಶ್ರ ಸರ್ಕಾರದ ಹಿನ್ನೆಲೆಯಲ್ಲಿ ಉತ್ತಮ ನಿರ್ಧಾರಗಳನ್ನು ಕೈಗೊಳ್ಳಲು ಸಾಧ್ಯವಾಗಲಿಲ್ಲ: ಎಚ್‌ಡಿಕೆ 


ಮಾಲೂರು(ನ.22): ಜೆಡಿಎಸ್‌ ಬಹುಮತದಿಂದ ಅಧಿಕಾರಕ್ಕೆ ಬಂದರೆ ದಲಿತರಿಗೆ ಉಪ ಮುಖ್ಯಮಂತ್ರಿ ಪಟ್ಟನೀಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಘೋಷಿಸಿದ್ದಾರೆ.

ಸೋಮವಾರ ಕೋಲಾರ, ಮಾಲೂರಿನಲ್ಲಿ ರೋಡ್‌ಶೋ ನಡೆಸಿ ಮಾತನಾಡಿದ ಅವರು ಈ ಘೋಷಣೆ ಮಾಡಿದ್ದಾರೆ. ಜತೆಗೆ, ಜೆಡಿಎಸ್‌ ಅಧಿಕಾರಕ್ಕೆ ಬಂದರೆ ಮಹಿಳಾ ಸಂಘಗಳ ಸಾಲ ಮನ್ನಾ ಮಾಡುವುದಲ್ಲದೆ ಸಬ್ಸಿಡಿಯಡಿ ಇನ್ನೂ ಹೆಚ್ಚಿನ ಸಾಲ ನೀಡಲಾಗುವುದು. ಪ್ರತಿ ಪಂಚಾಯತಿಯಲ್ಲಿ ಸುಸಜ್ಜಿತ ಸರ್ಕಾರಿ ಆಸ್ಪತ್ರೆ ಹಾಗೂ ಖಾಸಗಿ ಶಾಲೆಗೆ ಸಡ್ಡು ಹೊಡೆಯುವ ರೀತಿಯಲ್ಲಿ ಸರ್ಕಾರಿ ಶಾಲೆ ನಿರ್ಮಿಸಲಾಗುವುದು ಎಂದರು.

Latest Videos

ಜೆಡಿಎಸ್ ಅಧಿಕಾರಕ್ಕೆ ಬಂದ್ರೆ ಕೋಲಾರದಲ್ಲಿ ಟಿಪ್ಪು ವಿವಿ ಸ್ಥಾಪನೆ: ಮಾತು ಕೊಟ್ಟ ಇಬ್ರಾಹಿಂ

ಎರಡು ಬಾರಿ ಮುಖ್ಯಮಂತ್ರಿ ಆಗಿದ್ದೆ. ಆದರೆ ಎರಡು ಬಾರಿ ಮುಖ್ಯಮಂತ್ರಿಯಾದರೂ ಸರ್ಮಿಶ್ರ ಸರ್ಕಾರದ ಹಿನ್ನೆಲೆಯಲ್ಲಿ ಉತ್ತಮ ನಿರ್ಧಾರಗಳನ್ನು ಕೈಗೊಳ್ಳಲು ಸಾಧ್ಯವಾಗಲಿಲ್ಲ. ಆದರೂ ಸಿಕ್ಕ ಅವಕಾಶದಲ್ಲಿ ನೀಡಿದ್ದ ಭರವಸೆಯಂತೆ ಅಧಿಕಾರಕ್ಕೆ ಬಂದ ಇಪ್ಪತ್ಕಾಲು ಗಂಟೆಯಲ್ಲಿ ರೈತರ ಸಾಲ ಮನ್ನಾ ಮಾಡಿದೆ ಎಂದರು.

ಇದೇ ವೇಳೆ ನೂತನ ಪಿಂಚಣಿ ವ್ಯವಸ್ಥೆಯಿಂದ ನೌಕರರಿಗೆ ಅನ್ಯಾಯವಾಗುತ್ತಿದೆ ಎಂದು ಕೆಎಸ್‌ಆರ್‌ಟಿಸಿ ಸಿಬ್ಬಂದಿ ನೋವಿಗೆ ಸ್ಪಂದಿಸಿದ ಕುಮಾರಸ್ವಾಮಿ, ಅವೈಜ್ಞಾನಿಕ ಪಿಂಚಣಿ ವ್ಯವಸ್ಥೆ ತಂದಿರುವುದು ನನ್ನ ಗಮನಕ್ಕೆ ಬಂದಿದೆ. ನಾನು ಅಧಿಕಾರಕ್ಕೆ ಬಂದ ತಕ್ಷಣ ಈ ಸಮಸ್ಯೆಗೆ ಪರಿಹಾರ ಒದಗಿಸಿಕೊಡುವುದಾಗಿ ಭರವಸೆ ನೀಡಿದರು.
 

click me!