
ದಾವಣಗೆರೆ (ಏ.22): ಕಾಂಗ್ರೆಸ್ ಪಕ್ಷವೆಂದರೆ ಶಿಸ್ತುಬದ್ಧ ಪಕ್ಷವಾಗಿದ್ದು, ಪಕ್ಷದಲ್ಲಿ ಒಂದು ಸಿದ್ಧಾಂತ, ನೈತಿಕತೆ ಇರುತ್ತದೆ. ಪಕ್ಷವು ಒಂದು ನಿರ್ಧಾರ ಕೈಗೊಂಡರೆ ಅದಕ್ಕೊಂದು ಕಾರಣ ಇದ್ದೇ ಇರುತ್ತದೆ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಎಂಎಲ್‌ಸಿ ಕೆ.ಅಬ್ದುಲ್ ಜಬ್ಬಾರ್, ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮ್ಮದ್ ವಿರುದ್ಧ ಕಾಂಗ್ರೆಸ್ ಪಕ್ಷವು ಕ್ರಮ ಕೈಗೊಂಡ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
ನಗರದ ತಮ್ಮ ನಿವಾಸ ಶಿವ ಪಾರ್ವತಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಚುನಾವಣೆಗಳ ಬಗ್ಗೆ ಕೆಪಿಸಿಸಿ, ಎಐಸಿಸಿ ಮಟ್ಟದಲ್ಲಿ ಎಲ್ಲಾ ರೀತಿ ಫೀಡ್ ಬ್ಯಾಕ್ ಪಡೆದು, ಚುನಾವಣೆಯಲ್ಲಿ ಯಾರು ಕೆಲಸ ಮಾಡಿದ್ದಾರೆ, ಇಷ್ಟು ವರ್ಷ ಏನೇನಾಗಿದೆ, ರಾಜಕಾರಣದಲ್ಲಿ ಅದನ್ನೆಲ್ಲಾ ಕೂಲಂಕುಷವಾಗಿ ನೋಡಿಯೇ ಒಂದು ನಿರ್ಧಾರ ಕೈಗೊಳ್ಳಲಾಗುತ್ತದೆ. ಹಾಗಾದಾಗಲೇ ಒಂದು ಶಿಸ್ತುಬದ್ಧವಾದ ಪಕ್ಷ ಕಾಂಗ್ರೆಸ್ ಎಂಬುದು ಎಲ್ಲರಿಗೂ ಗೊತ್ತಾಗುತ್ತದೆ ಎಂದರು.
ಶಿವಮೊಗ್ಗದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಸಭೆಯಲ್ಲಿ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ಶಾಮನೂರು ಶಿವಶಂಕರಪ್ಪ ಪಾಲ್ಗೊಂಡಿದ್ದರು. ಸಭೆಯಲ್ಲಿ ಅಲ್ಲಿನ ಸಂಸದ ಬಿ.ವೈ.ರಾಘವೇಂದ್ರ ಸಹ ಉಪಸ್ಥಿತರಿದ್ದರು. ರಾಘವೇಂದ್ರ ಒಳ್ಳೆಯ ಕೆಲಸ ಮಾಡಿದ್ದಾರೆಂದಷ್ಟೇ ಅಪ್ಪಾಜಿ (ಶಾಮನೂರು ಶಿವಶಂಕರಪ್ಪ) ಹೇಳಿದ್ದಾರೆ. ಅಪ್ಪಾಜಿ, ನಾನು ಮಾತನಾಡಿರಬಹುದಾದ ಎಲ್ಲವನ್ನೂ ನೋಡಿಯೇ ಪಕ್ಷ ನಿರ್ಧಾರ ಕೈಗೊಳ್ಳುತ್ತದೆ ಎಂದು ರಾಘವೇಂದ್ರಗೆ ಗೆಲ್ಲಿಸುವಂತೆ ಕರೆ ನೀಡಿದ್ದ ಶಾಮನೂರು ವಿರುದ್ಧ ಕ್ರಮ ಕೈಗೊಳ್ಳಲಿಲ್ಲ, ಮುಸ್ಲಿಮರಿಗೆ ಟಿಕೆಟ್ ಕೇಳಿದ್ದಕ್ಕೆ ನಮ್ಮ ಮೇಲೆ ಕ್ರಮ ಏಕೆ ಎಂಬ ಮುಸ್ಲಿಂ ನಾಯಕರ ಪ್ರಶ್ನೆಗೆ ಡಾ.ಪ್ರಭಾ ಮಲ್ಲಿಕಾರ್ಜುನ ಪ್ರತಿಕ್ರಿಯಿಸಿದರು.
ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಮೆ ಬಗ್ಗೆ ನಮಗೆ ಯಾವುದೇ ಟೆನ್ಷನ್ ಇಲ್ಲ. ಜನರು ಯಾವತ್ತೂ ಕಾಂಗ್ರೆಸ್ ಪಕ್ಷದ ಪರವಾಗಿಯೇ ಇದ್ದಾರೆ. ಒಳ್ಳೆಯ ಬಹುಮತದಿಂದ ಸಮರ್ಥ ಶಾಮನೂರು ಜಯ ಸಾಧಿಸಲಿದ್ದಾರೆ. 8 ಸಾವಿರ, 15 ಸಾವಿರ, 30 ಸಾವಿರ ಮತಗಳ ಅಂತರದಲ್ಲಿ ಸಮರ್ಥ ಗೆಲ್ಲುತ್ತಾರೆಂದು ಕ್ಷೇತ್ರದ ಜನರೆ ಹೇಳುತ್ತಿದ್ದಾರೆ. ಮೇ.4ರಂದು ಗೊತ್ತಾಗುತ್ತದೆ. ಸಮರ್ಥ ಗೆದ್ದೇ ಗೆಲುತ್ತಾರೆಂಬ ಸಂಪೂರ್ಣ ವಿಶ್ವಾಸ, ನಂಬಿಕೆ ನಮಗಿದೆ ಎಂದು ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.