ಸ್ವಾತಂತ್ರ್ಯ ನಂತರ ಕಾಂಗ್ರೆಸ್ ಪಕ್ಷವನ್ನು ವಿಸರ್ಜನೆ ಮಾಡಬೇಕೆಂದು ಮಹಾತ್ಮ ಗಾಂಧಿಯವರೇ ಹೇಳಿದ್ದರು, ಆದರೂ ರಾಜಕೀಯ ಕಾರಣಗಳಿಗಾಗಿ ಕಾಂಗ್ರೆಸ್ ಪಕ್ಷ ವಿಸರ್ಜನೆಯಾಗಿಲ್ಲ ಎಂದ ಡಿಸಿಎಂಂ ಡಾ. ಅಶ್ವಥ್ ನಾರಾಯಣ್
ಬೆಂಗಳೂರು(ಆ.24): ಕಾಂಗ್ರೆಸ್ ಪಕ್ಷ ವಿಸರ್ಜನೆ ಆದರೆ ಒಳ್ಳೆಯದು. ಸ್ವಾತಂತ್ರ್ಯ ಹೋರಾಟದ ಕಾರಣಕ್ಕೆ ಕಾಂಗ್ರೆಸ್ ಪಕ್ಷ ಹುಟ್ಟಿಕೊಂಡಿತ್ತು. ಸ್ವಾತಂತ್ರ್ಯ ನಂತರ ಈ ಪಕ್ಷವನ್ನು ವಿಸರ್ಜನೆ ಮಾಡಬೇಕೆಂದು ಮಹಾತ್ಮ ಗಾಂಧಿಯವರೇ ಹೇಳಿದ್ದರು. ಆದರೂ ರಾಜಕೀಯ ಕಾರಣಗಳಿಗಾಗಿ ಕಾಂಗ್ರೆಸ್ ಪಕ್ಷ ವಿಸರ್ಜನೆಯಾಗಿಲ್ಲ ಎಂದು ಉಪಮುಖ್ಯಮಂತ್ರಿ ಡಾ. ಅಶ್ವಥ್ ನಾರಾಯಣ್ ಹೇಳಿದ್ದಾರೆ.
ಇಂದು(ಸೋಮವಾರ) ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಈಗ ಕಾಂಗ್ರೆಸ್ ಪಕ್ಷ ವಿಸರ್ಜನೆ ಆದರೆ ಒಳ್ಳೆಯದು. ಈಗಲಾದರೂ ಕಾಂಗ್ರೆಸ್ ಪಕ್ಷದಲ್ಲಿ ಪ್ರಶ್ನೆ ಮಾಡುವ ಪರಿಸ್ಥಿತಿ ಉಂಟಾಗಿರುವುದು ಒಳ್ಳೆಯ ಬೆಳವಣಿಗೆ ಎಂದು ತಿಳಿಸಿದ್ದಾರೆ.
undefined
ಕಾಂಗ್ರೆಸ್ ಪಕ್ಷ ಒಗ್ಗಟ್ಟಾಗಿಡಲು ಗಾಂಧಿ ಕುಟುಂಬದಿಂದ ಮಾತ್ರ ಸಾಧ್ಯ: ಡಿಕೆಶಿ
ನವದೆಹಲಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆಯುತ್ತಿದೆ. ಕಾಂಗ್ರೆಸ್ ಪಕ್ಷವನ್ನ ಸೋನಿಯಾ ಗಾಂಧಿಯವರೇ ಮನ್ನೆಡೆಸುತ್ತಾರಾ?, ಪಕ್ಷದ ಅಧ್ಯಕ್ಷ ಸ್ಥಾನವನ್ನ ಮತ್ತೆ ರಾಹುಲ್ ಗಾಂಧಿ ಅವರಿಗೆ ಬಿಟ್ಟು ಕೊಡುತ್ತಾರಾ? ಅಥವಾ ಗಾಂಧಿಯೇತರ ಕುಟುಂಬಕ್ಕೆ ಎಐಸಿಸಿ ಅಧ್ಯಕ್ಷ ಸ್ಥಾನ ಸಿಗುತ್ತಾ ಎಂಬುದನ್ನ ಕಾದು ನೋಡಬೇಕಿದೆ.
ಕಾಂಗ್ರೆಸ್ ಪಕ್ಷವನ್ನ ಮುನ್ನೆಡಸಲು ರಾಹುಲ್ ಗಾಂಧಿ ಸಮರ್ಥ ನಾಯಕ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದರೆ, ಕೆಪಿಸಿಸಿ ಅಧ್ಯಕ್ಷ ಡಿ. ಕೆ.ಶಿವಕುಮಾರ್ ಅವರು ಕಾಂಗ್ರೆಸ್ ಪಕ್ಷ ಒಗ್ಗಟ್ಟಾಗಿಡಲು ಗಾಂಧಿ ಕುಟುಂಬದಿಂದ ಮಾತ್ರ ಸಾಧ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ.
ಇದೆಲ್ಲದರ ಮಧ್ಯೆ ಕಾಂಗ್ರೆಸ್ ವಿಸರ್ಜನೆ ಅದರೆ ಒಳ್ಳೆಯದು ಎಂದು ಡಿಸಿಎಂ ಡಾ. ಅಶ್ವಥ್ ನಾರಾಯಣ್ ಅಭಿಪ್ರಾಯಪಟ್ಟಿದ್ದಾರೆ.