ಆಂಧ್ರದಲ್ಲಿ ಜನ ಇಲ್ಲ. ಬರೋರಿದ್ದರೆ ಕರ್ಕೊಂಡು ಹೋಗಲಿ: ಡಿ.ಕೆ.ಶಿವಕುಮಾರ್‌

Published : Sep 19, 2025, 07:59 AM IST
DK Shivakumar

ಸಾರಾಂಶ

ಆಂಧ್ರದವರಿಗೆ ಜನ ಇಲ್ಲ. ಅದಕ್ಕೆ ಕರೆಯುತ್ತಿದ್ದಾರೆ. ಬರುವವರಿದ್ದರೆ ಕರೆದುಕೊಂಡು ಹೋಗಲಿ, ಯಾರು ಬೇಡ ಅಂತ ಹೇಳುತ್ತಾರೆ. ವಿಧಾನಸೌಧದ ಪಕ್ಕದಲ್ಲೇ 20 ಗುಂಡಿ ಬಿದ್ದಿವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಬೆಂಗಳೂರು (ಸೆ.19): ಆಂಧ್ರದವರಿಗೆ ಜನ ಇಲ್ಲ. ಅದಕ್ಕೆ ಕರೆಯುತ್ತಿದ್ದಾರೆ. ಬರುವವರಿದ್ದರೆ ಕರೆದುಕೊಂಡು ಹೋಗಲಿ, ಯಾರು ಬೇಡ ಅಂತ ಹೇಳುತ್ತಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಬೆಂಗಳೂರಿನ ಉದ್ಯಮಿಗಳಿಗೆ ಆಂಧ್ರಪ್ರದೇಶ ರಾಜ್ಯದವರು ಪತ್ರ ಬರೆದು ಆಹ್ವಾನ ನೀಡುತ್ತಿರುವ ಕುರಿತ ಪ್ರಶ್ನೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ನಾವು ರಸ್ತೆ ಗುಂಡಿ ಮುಚ್ಚಲು ಅಧಿಕಾರಿಗಳಿಗೆ ಗಡುವು ನೀಡಿದ್ದೇವೆ. ಎಲ್ಲರಿಗೂ ಹೊಣೆಗಾರಿಕೆ ನಿಗದಿ ಮಾಡಿದ್ದೇವೆ. ರಾತ್ರಿ ಕೂಡ ಮಳೆ ಬಂದಿದೆ.

ವಿಧಾನಸೌಧದ ಪಕ್ಕದಲ್ಲೇ 20 ಗುಂಡಿ ಬಿದ್ದಿವೆ. ಮುಖ್ಯಮಂತ್ರಿ ಅವರು ಶನಿವಾರ ಸಭೆ ಮಾಡುತ್ತಾರೆ. ಈಗಾಗಲೇ ನಗರದ ಶಾಸಕರಿಗೆ ನೀಡಿರುವ ಅನುದಾನವನ್ನು ರಸ್ತೆ ದುರಸ್ತಿಗೇ ಬಳಸಲು ಸೂಚಿಸಿದ್ದೇವೆ ಎಂದರು. ಯಾರಿಗೆ ಬೆಂಗಳೂರಿನಲ್ಲಿ ವ್ಯಾಪಾರ ಮಾಡುವುದರಿಂದ ಲಾಭ ಆಗುತ್ತದೆಯೋ ಅವರು ಇಲ್ಲೇ ಉಳಿಯುತ್ತಾರೆ. ವಿಶ್ವದ ಪ್ರತಿಷ್ಠಿತ ಕಂಪನಿಗಳು ಬೆಂಗಳೂರಿನಲ್ಲೇ ಏಕಿವೆ? ಕ್ಯಾಲಿಫೋರ್ನಿಯಾದಲ್ಲಿ ಕೆಲಸ ಮಾಡುತ್ತಿರುವ ಎಂಜಿನಿಯರ್‌ಗಳ ಸಂಖ್ಯೆ ಕೇವಲ 13 ಲಕ್ಷ. 25 ಲಕ್ಷ ಎಂಜಿನಿಯರ್‌ಗಳು ಬೆಂಗಳೂರಿನಲ್ಲೇ ಕೆಲಸ ಮಾಡುತ್ತಿದ್ದಾರೆ.

2 ಲಕ್ಷಕ್ಕೂ ಹೆಚ್ಚು ಜನ ವಿದೇಶಿ ಪಾಸ್‌ಪೋರ್ಟ್‌ದಾರರು ಇಲ್ಲಿ ಏಕೆ ಕೆಲಸ ಮಾಡುತ್ತಿದ್ದಾರೆ? ಇಲ್ಲಿನ ವ್ಯವಸ್ಥೆ ಚೆನ್ನಾಗಿದೆ ಅಂತ ತಾನೆ. ರಸ್ತೆ ಗುಂಡಿ ವಿಚಾರದಲ್ಲಿ ಷಡ್ಯಂತ್ರ ನಡೆಯುತ್ತಿದೆಯಾ ಎಂಬ ಪ್ರಶ್ನೆಗೆ, ಕೆಲ ಶಿಕ್ಷಣ ಸಂಸ್ಥೆಗಳು ಮಕ್ಕಳ ಕೈಯಲ್ಲಿ ಪ್ರಧಾನಿಗೆ ಪತ್ರ ಬರೆಸುತ್ತಾರೆ. ಇನ್ಯಾರೋ ನಾಲ್ಕು ಜನ ಟ್ವೀಟ್‌ ಮಾಡುತ್ತಾರೆ. ಮಾಧ್ಯಮದವರು ಅದನ್ನು ಪಿಕ್‌ ಮಾಡುತ್ತಾರೆ. ಅದನ್ನಿಟ್ಟುಕೊಂಡು ಇನ್ಯಾರೋ ರಾಜಕೀಯ ಮಾಡುತ್ತಾರೆ. ಅವರಿಗೆ ರಾಜಕೀಯ ಮಾಡುವ ಆಸೆ ಇದ್ದರೆ ಚುನಾವಣೆಗೆ ಸ್ಪರ್ಧಿಸಲಿ. ಆಗ ಗೊತ್ತಾಗುತ್ತದೆ ಎಂದರು.

ಬೆಂಗಳೂರು ಬಗ್ಗೆ ಕಾಳಜಿ ಇದ್ದರೆ 10,000 ಕೋಟಿ ಕೊಡಿಸಲ

ಕಾಂಗ್ರೆಸ್‌ ಸರ್ಕಾರ ಬೆಂಗಳೂರಿನ ರಸ್ತೆಗಳನ್ನೆಲ್ಲ ಗುಂಡಿ ಬೀಳಿಸಿ ಕಂಪನಿಗಳು ವಲಸೆ ಹೋಗುವಂತೆ ಮಾಡಿದೆ ಎಂದಿರುವ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಏಕವಚನದಲ್ಲೇ ತಿರುಗೇಟು ನೀಡಿದ್ದು, ‘ನೀನು ರಾಜ್ಯದ ಸಂಸದ, ಕೇಂದ್ರ ಸಚಿವನಿದ್ದೀಯ, ಬೆಂಗಳೂರಿಗೆ ನಿನ್ನ ಕೊಡುಗೆ ಏನು ಹೇಳಪ್ಪ, ಬೆಂಗಳೂರು ರಸ್ತೆ ಬಗ್ಗೆ ಅವರಿಗೆ ಕಾಳಜಿ ಇದ್ದರೆ ಕೇಂದ್ರ ಸರ್ಕಾರದಿಂದ 10 ಸಾವಿರ ಕೋಟಿ ರು. ಅನುದಾನ ಕೊಡಿಸಲಿ’ ಎಂದು ಕೇಳಿದ್ದಾರೆ.

ವಿಧಾನಸೌಧದಲ್ಲಿ ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿ ಕುಮಾರಸ್ವಾಮಿ ಅವರ ಟ್ವೀಟ್‌ ಟೀಕೆ ಕುರಿತ ಪ್ರಶ್ನೆಗೆ, ಸುಮ್ಮನೆ ಒಂದು ಟ್ವಿಟ್‌ ಮಾಡಿದರೆ ಸಮಸ್ಯೆ ಬಗೆಹರಿಯುವುದಿಲ್ಲ. ಸಂಸದರಾಗಿ, ಕೇಂದ್ರ ಸಚಿವರಾಗಿ ಬೆಂಗಳೂರಿಗೆ ನಿನ್ನ ಕೊಡುಗೆ ಏನು? ಯುಪಿಎ ಸರ್ಕಾರ ಇದ್ದಾಗ ಜೆಎನ್‌ ನರ್ಮ್‌ ಯೋಜನೆ ಮೂಲಕ ಸಾಕಷ್ಟು ಅನುದಾನ ನೀಡಲಾಗಿತ್ತು. ಪ್ರಧಾನಿ ಮೋದಿ ಅವರಿಗೆ ಬಲಗೈ ಆಗಿರುವ ಅವರು ಬೆಂಗಳೂರಿನ ಬಗ್ಗೆ ಕಾಳಜಿ ಇದ್ದರೆ ಕೇಂದ್ರ ಸರ್ಕಾರದಿಂದ ನಗರದ ಅಭಿವೃದ್ಧಿಗೆ 10 ಸಾವಿರ ಕೋಟಿ ರು. ಕೊಡಿಸಲಿ. ಮೇಕೆದಾಟುಗೆ ಒಂದೇ ನಿಮಿಷದಲ್ಲಿ ಪರ್ಮಿಷನ್ ಕೊಡುಸ್ತಿವಿ ಅಂದ್ರಿ ಯಾಕೆ ಮಾಡಲಿಲ್ಲ? ಮಹದಾಯಿಗೆ ಅನುಮತಿ ಕೊಡ್ತೀವಿ ಅಂದ್ರೆ ಯಾಕೆ ಮಾಡಲಿಲ್ಲ. ರೈತರ ಪರವಾಗಿ ಧ್ವನಿ ಎತ್ತಿಲ್ಲ ಏಕೆ ಎಂದು ಪ್ರಶ್ನಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅಡಕೆ ಬೆಳೆಗಾರರ ನೆರವಿಗೆ ಕೇಂದ್ರ ತುರ್ತಾಗಿ ಮಧ್ಯಪ್ರವೇಶಿಸಲಿ: ಸಂಸದ ಬಿ.ವೈ.ರಾಘವೇಂದ್ರ
ರಾಜ್ಯದಲ್ಲಿ ರಾಜಕೀಯ ಹೊಲಸೆದ್ದು, ಎಲ್ಲ ಪಕ್ಷಗಳು ಗಬ್ಬೆದ್ದು ಹೋಗಿವೆ: ಕೆ.ಎಸ್.ಈಶ್ವರಪ್ಪ