ದಳಪತಿಗೆ ಟ್ರಬಲ್‌ ಶೂಟರ್‌ ಮಾಸ್ಟರ್‌ ಸ್ಟ್ರೋಕ್‌..!

By Kannadaprabha NewsFirst Published Jul 10, 2024, 5:00 AM IST
Highlights

ಕಳೆದ ಎರಡು ವರ್ಷಗಳಿಂದ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆಯನ್ನಾಗಿ ಮರು ನಾಮಕರಣ ಮಾಡುವ ಕುರಿತು ಪರ ವಿರೋಧದ ಚರ್ಚೆಗಳು ನಡೆಯುತ್ತಲೇ ಇತ್ತು. ಇದೀಗ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ನೇತೃತ್ವದ ನಿಯೋಗ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರಸ್ತಾವನೆ ಸಲ್ಲಿಸುವ ಮೂಲಕ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆಯಾಗಿ ಮರು ನಾಮಕರಣ ಮಾಡುವ ಕಾರ್ಯಕ್ಕೆ ಮುನ್ನುಡಿ ಬರೆದಿದೆ.

ಎಂ.ಅಪ್ರೋಜ್ ಖಾನ್ 

ರಾಮನಗರ(ಜು.10): ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆಯನ್ನಾಗಿ ಮರುನಾಮಕರಣ ಮಾಡುವಂತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾ‌ರ್ ಪ್ರಸ್ತಾವನೆ ಸಲ್ಲಿಸುವ ಮೂಲಕ ಮಾಜಿ ಸಿಎಂ. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮಾಸ್ಟರ್ ಸ್ಟೋಕ್ ನೀಡಿದ್ದಾರೆ. 

Latest Videos

ಕಳೆದ ಎರಡು ವರ್ಷಗಳಿಂದ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆಯನ್ನಾಗಿ ಮರು ನಾಮಕರಣ ಮಾಡುವ ಕುರಿತು ಪರ ವಿರೋಧದ ಚರ್ಚೆಗಳು ನಡೆಯುತ್ತಲೇ ಇತ್ತು. ಇದೀಗ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ನೇತೃತ್ವದ ನಿಯೋಗ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರಸ್ತಾವನೆ ಸಲ್ಲಿಸುವ ಮೂಲಕ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆಯಾಗಿ ಮರು ನಾಮಕರಣ ಮಾಡುವ ಕಾರ್ಯಕ್ಕೆ ಮುನ್ನುಡಿ ಬರೆದಿದೆ.

ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ; ಡಿಕೆಶಿ ನಿಯೋಗದಿಂದ ಸಿಎಂಗೆ ಪತ್ರ

ರಾಮನಗರ ಜಿಲ್ಲೆಯ ಹೆಸರು ಬದಲಾವಣೆ ಮಾಡುವ ನಿಟ್ಟಿನಲ್ಲಿ ಡಿ.ಕೆ.ಶಿವಕುಮಾರ್ ನೇತೃತ್ವದ ನಿಯೋಗ ಸಲ್ಲಿಸಿದ ಮನವಿಗೆ ಸಿಎಂ ಸಿದ್ದರಾಮಯ್ಯ ಸಕಾರಾತ್ಮಕವಾಗಿಸ್ಪಂದಿಸಿದ್ದಾರೆ. ಎಲ್ಲಾ ಆಂದುಕೊಂಡಂತೆ ನಡೆದರೆ ಶೀಘ್ರದಲ್ಲೇ ರಾಮನಗರ ಜಿಲ್ಲೆಯ ಹೆಸರು ಬೆಂಗಳೂರು ದಕ್ಷಿಣ ಜಿಲ್ಲೆ ಆಗಲಿದೆ. ಈ ಮಧ್ಯೆ ಡಿ.ಕೆ. ಶಿವಕುಮಾರ್‌ಕೇಂದ್ರ ಸಚಿವ ಕುಮಾರಸ್ವಾಮಿ ಅವರನ್ನು ಗುರಿಯಾಗಿಟ್ಟುಕೊಂಡೇ ಮರು ನಾಮಕರಣದ ಕಾರ್ಯಕ್ಕೆ ಮುಂದೂಗಿದ್ದಾ ರೆಯೇ. ಇದರಿಂದಾಗುವ ರಾಜಕೀಯ ಲಾಭ ನಷ್ಟದ ಲೆಕ್ಕಾಚಾರಗಳ ಬಗ್ಗೆಯೂ ಚರ್ಚೆಗಳು ಆರಂಭಗೊಂಡಿದೆ. ರಾಮನಗರ ಜಿಲ್ಲೆ ಇತಿಹಾಸ: ರಾಮನಗರ ಜಿಲ್ಲೆ ಈ ಹಿಂದೆ ಬೆಂಗಳೂರು ಗ್ರಾಮಾಂತರಕ್ಕೆ ಸೇರಿತ್ತು. ಆದರೆ, ಕುಮಾರಸ್ವಾಮಿ ಮುಖ್ಯ ಮಂತ್ರಿ ಆಗಿದ್ದ ಸಂದರ್ಭದಲ್ಲಿ 2007ರಲ್ಲಿ ಬೆಂಗಳೂರು ಗ್ರಾಮಾಂತರದಲ್ಲಿದ್ದ ರಾಮನಗರ ವನ್ನು ಪ್ರತ್ಯೇಕ ಜಿಲ್ಲೆಯಾಗಿ ರಚನೆ ಮಾಡಿದ್ದರು.

ರಾಮನಗರ ಜಿಲ್ಲೆ ಘೋಷಣೆಗೂ ಮೊದಲು ದೊಡ್ಡಬಳ್ಳಾಪುರ, ನೆಲಮಂಗಲ, ಯಲಹಂಕ, ದೇವನಹಳ್ಳಿ, ಆನೇಕಲ್, ಬೆಂಗಳೂರು ದಕ್ಷಿಣ, ಬೆಂಗಳೂರು ಪೂರ್ವ, ಹೊಸಕೋಟೆ, ರಾಮ ನಗರ, ಮಾಗಡಿ, ಕನಕಪುರ ಮತ್ತು ಚನ್ನಪಟ್ಟಣ ತಾಲೂಕುಗಳು ಬೆಂಗಳೂರು ಜಿಲ್ಲೆಯ ಭಾಗ ವಾಗಿದ್ದವು. 1986ರ ಸಾಲಿನಲ್ಲಿ ದೊಡ್ಡಬಳ್ಳಾ ಪುರವನ್ನು ಕೇಂದ್ರ ಸ್ಥಾನವಾಗಿಟ್ಟುಕೊಂಡು ಹೊಸಕೋಟೆ, ನೆಲಮಂಗಲ, ದೇವನಹಳ್ಳಿ, ಚನ್ನಪಟ್ಟಣ, ರಾಮನಗರ, ಮಾಗಡಿ ಹಾಗೂ ಕನಕಪುರ ತಾಲೂಕುಗಳನ್ನು ಸೇರಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನಾಗಿ ಘೋಷಿಸ ಲಾಯಿತು.

ನಂತರ 2007ರ ಸಾಲಿನಲ್ಲಿ ದೊಡ್ಡಬಳ್ಳಾಪುರ ವನ್ನು ಕೇಂದ್ರ ಸ್ಥಾನವಾಗಿಟ್ಟುಕೊಂಡು ಹೊಸಕೋಟೆ, ನೆಲಮಂಗಲ, ದೇವನಹಳ್ಳಿ, ದೊಡ್ಡಬಳ್ಳಾಪುರ ಒಳಗೊಂಡಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನಾಗಿ ಘೋಷಿಸಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಎಂಬ ಹೆಸರನ್ನು ಹಾಗೇ ಉಳಿಸಿಕೊಳ್ಳಲಾಯಿತು. ಅದೇ ರೀತಿ ಮಾಗಡಿ, ಕನಕಪುರ, ಚನ್ನಪಟ್ಟಣ ಹಾಗೂ ರಾಮನಗರ ತಾಲೂಕುಗಳನ್ನು ಸೇರಿಸಿಕೊಂಡು ಹೊಸದಾಗಿ ರಾಮನಗರ ಜಿಲ್ಲೆಯನ್ನಾಗಿ ಘೋಷಿಸಿ, ರಾಮನಗರವನ್ನು ಜಿಲ್ಲಾ ಕೇಂದ್ರವನ್ನಾಗಿ ಘೋಷಿಸಲಾಯಿತು. ಇದೀಗ ಇದೀಗ ಹಾರೋಹಳ್ಳಿ ತಾಲೂಕು ರಚನೆಯಾಗಿದೆ.

ಚನ್ನಪಟ್ಟಣದಲ್ಲಿ ನನ್ನ ಸ್ಫರ್ಧೆಗೆ ಎಚ್.ಡಿ.ಕುಮಾರಸ್ವಾಮಿ ಗ್ರೀನ್‌ಸಿಗ್ನಲ್‌: ಸಿ.ಪಿ.ಯೋಗೇಶ್ವರ್

ರಾಜಕೀಯ ದಾಳ: ಬೆಂಗಳೂರು ನಗರದ ಅಂತಾರಾಷ್ಟ್ರೀಯ ಖ್ಯಾತಿ, ಸಾರ್ವಭೌಮತೆ ಮತ್ತು ಘನತೆ ರಾಮನಗರ, ಮಾಗಡಿ, ಕನಕಪುರ, ಚನ್ನಪಟ್ಟಣ ಹಾಗೂ ಹಾರೋಹಳ್ಳಿ ತಾಲೂಕುಗಳಿಗೆ ಲಭ್ಯ ಆಗಬೇಕೆಂಬುದು ಜನರ ಆಶಯ ಮತ್ತು ಚಿಂತನೆಯೂ ಆಗಿದೆ. ಹಾಗಾಗಿ ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಎಂದು ನಾಮಕರಣ ಮಾಡಬೇಕೆಂಬ ಪ್ರಸ್ತಾವನೆ ಸಲ್ಲಿಸುವ ಮೂಲಕ ಹೊಸತೊಂದು ರಾಜಕೀಯ ದಾಳವನ್ನು ಡಿ.ಕೆ. ಶಿವಕುಮಾ‌ರ್ ಉರುಳಿಸಿ ದ್ದಾರೆ. ರಾಮನಗರಕ್ಕೆ ಬೆಂಗಳೂರು ದಕ್ಷಿಣ ಎಂದು ಹೆಸರು ನಾಮಕರಣ ಮಾಡುವುದರಿಂದ ಜನರ ಒಲವನ್ನು ಗಳಿಸಬಹುದು. ಇದು ಮುಂದಿನ ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಲಾಭದಾಯಕವಾಗಿ ಪರಿಣಮಿಸ ಲಿದೆ ಎಂಬುದು ಕಾಂಗ್ರೆಸ್ ನಾಯಕರ ಲೆಕ್ಕಾಚಾರವಾಗಿದೆ.

ರಾಮನಗರ ಜಿಲ್ಲೆ ಮರು ನಾಮಕರಣದ ವಿವಾದವೂ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಡಿ.ಕೆ.ಸುರೇಶ್ ರವರ ಸೋಲಿಗೆ ಒಂದು ಕಾರಣ ಎಂಬುದು ಸುಳ್ಳಲ್ಲ. ಇದೀಗ ಮತ್ತೆ ಅದೇ ಅಸ್ತ್ರವನ್ನು ಹೂಡಲು ಕೈ ಪಾಳೆಯ ಮುಂದಾಗಿದೆ. ಈ ಹಿಂದೆ ಬಿಜೆಪಿ ಸರ್ಕಾರ ರಾಮನಗರ ಜಿಲ್ಲೆಯನ್ನು ನವ ಬೆಂಗಳೂರು ಜಿಲ್ಲೆಯನ್ನಾಗಿ ನಾಮಕರಣಕ್ಕೆ ಮುಂದಾಗಿತ್ತು. ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಬಿಜೆಪಿ ಹೆಸರು ಬದಲಾವಣೆ ಪ್ರಸ್ತಾವನೆ ಕೈಬಿಟ್ಟಿತ್ತು. ಇದೀಗ ರಾಮನಗರ ಜಿಲ್ಲೆ ಮರುನಾಮಕರಣಕ್ಕೆ ಪ್ರತಿರೋಧ ವ್ಯಕ್ತಪಡಿಸುತ್ತಿರುವ ಮೈತ್ರಿ ಪಕ್ಷಗಳಾದ ಬಿಜೆಪಿ ಮರು ಸಂಘರ್ಷಕ್ಕೆ ಮುಂದಾಗಿದ್ದಾರೆ. ಜೆಡಿಎಸ್ ನಾಯಕರು ರಾಜಕೀಯ ಮುಂದಾಗಿದ್ದಾರೆ. 

click me!