ಹಾಸನ ರಾಸಲೀಲೆ ರಾಜ್ಯವೇ ತಲೆ ತಗ್ಗಿಸುವ ವಿಚಾರ: ಡಿ.ಕೆ.ಶಿವಕುಮಾರ್‌

By Kannadaprabha News  |  First Published Apr 29, 2024, 10:23 AM IST

ಹಾಸನ ಸಂಸದನ ಲೈಂಗಿಕ ಹಗರಣ ರಾಜ್ಯವೇ ತಲೆ ತಗ್ಗಿಸುವ ವಿಚಾರ. ಎನ್‌ಡಿಎ ಅಭ್ಯರ್ಥಿಯ ಬಗ್ಗೆ ಬಿಜೆಪಿ ಹಾಗೂ ಜೆಡಿಎಸ್‌ ನಾಯಕರಿಗೆ ಪ್ರಶ್ನೆ ಮಾಡಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. 


ಬೆಂಗಳೂರು (ಏ.29): ಹಾಸನ ಸಂಸದನ ಲೈಂಗಿಕ ಹಗರಣ ರಾಜ್ಯವೇ ತಲೆ ತಗ್ಗಿಸುವ ವಿಚಾರ. ಎನ್‌ಡಿಎ ಅಭ್ಯರ್ಥಿಯ ಬಗ್ಗೆ ಬಿಜೆಪಿ ಹಾಗೂ ಜೆಡಿಎಸ್‌ ನಾಯಕರಿಗೆ ಪ್ರಶ್ನೆ ಮಾಡಿ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ. ಲೈಂಗಿಕ ಹಗರಣದ ಬಗ್ಗೆ ಕೇಳಲು ದೆಹಲಿಯಿಂದ ಕರೆಗಳ ಮೇಲೆ ಕರೆಗಳು ಬರುತ್ತಿವೆ. ಏನು ಮಾತನಾಡಬೇಕು ಎಂಬುದು ನಮಗೆ ಗೊತ್ತಾಗುತ್ತಿಲ್ಲ. ಇದು ಇಡೀ ರಾಜ್ಯವೇ ತಲೆ ತಗ್ಗಿಸುವ ವಿಚಾರ ಎಂದು ಕಿಡಿಕಾರಿದರು. ಈ ಬಗ್ಗೆ ನಮಗೆ ಕೇಳುವ ಬದಲು ಎನ್‌ಡಿಎ ಹಾಗೂ ಬಿಜೆಪಿ ನಾಯಕರಿಗೆ ಪ್ರಶ್ನಿಸಬೇಕು. ಶೋಭಾ ಕರಂದ್ಲಾಜೆ, ಬಿ.ಎಸ್‌. ಯಡಿಯೂರಪ್ಪ, ವಿಜಯೇಂದ್ರ, ಕುಮಾರಸ್ವಾಮಿ ಅವರು ಏನು ಹೇಳುತ್ತಾರೆ ಎಂಬುದನ್ನು ಕೇಳಬೇಕು ಎಂದು ಸುದ್ದಿಗಾರರಿಗೆ ಕರೆ ನೀಡಿದರು.

ಸಿಕ್ಕ ಹಣವೆಲ್ಲ ನನ್ನದೆಂದು ಹೇಳಲು ಐಟಿ ಒತ್ತಡ: ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಕೇವಲ ಕಾಂಗ್ರೆಸ್ ನಾಯಕರನ್ನು ಗುರಿಯಾಗಿಸಿ ದಾಳಿ ಮಾಡುತ್ತಿದ್ದಾರೆ. ನಮ್ಮ ನಾಯಕರನ್ನು ಹೆದರಿಸಿ ಅವರ ಬಳಿ ಸಿಕ್ಕ ಹಣ ಕಾಂಗ್ರೆಸ್ ಪಕ್ಷ ಹಾಗೂ ಡಿ.ಕೆ.ಶಿವಕುಮಾರ್ ಅವರ ಹಣ ಎಂದು ಹೇಳಲು ಒತ್ತಾಯ ಮಾಡುತ್ತಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ. ಸದಾಶಿವನಗರದ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಐಟಿ ಅಧಿಕಾರಿಗಳು ಬಿಜೆಪಿ ಏಜೆಂಟರಂತೆ ವರ್ತಿಸುತ್ತಿದ್ದಾರೆ. 

Tap to resize

Latest Videos

ಶಿವಾಜಿ, ಚೆನ್ನಮ್ಮರಂತಹ ರಾಜರಿಗೆ ಕಾಂಗ್ರೆಸ್‌ ಅವಮಾನ: ಮೋದಿ ಮತ್ತೆ ಮುಸ್ಲಿಂ ಅಸ್ತ್ರ

ಬೆಂಗಳೂರು ಗ್ರಾಮಾಂತರದಲ್ಲೇ ಹೆಚ್ಚಿನ ದಾಳಿ ನಡೆಸುತ್ತಿದ್ದಾರೆ. ನಮ್ಮ ನಾಯಕರ ಮೇಲೆ ದಾಳಿ ಮಾಡಿ ಇಡೀ ದಿನ ಅವರನ್ನು ಕೂರಿಸಿಕೊಂಡು ಆ ನಾಯಕರು ಚುನಾವಣೆ ಮಾಡದಂತೆ ತಡೆಯುತ್ತಿದ್ದಾರೆ ಎಂದು ಕಿಡಿ ಕಾರಿದರು. ಐಟಿ ಅಧಿಕಾರಿಗಳು ಬಿಜೆಪಿಯ ಯಾವುದಾದರೂ ಒಬ್ಬ ನಾಯಕರ ಮನೆಗೆ ಹೋಗಿದ್ದಾರಾ? ಬಿಜೆಪಿ ದುಡ್ಡು ಹಂಚುತ್ತಿರುವುದು ಗೊತ್ತಿಲ್ಲವೆ? ಆದರೂ ಬಿಜೆಪಿ ಏಜೆಂಟರಂತೆ ಕೆಲಸ ಮಾಡುತ್ತಿದ್ದಾರೆ. ಸೋಲಿನ ಭೀತಿಯಿಂದ ಬಿಜೆಪಿಯು ಸಾಂವಿಧಾನ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಟೀಕಿಸಿದರು.

click me!