Latest Videos

ಚನ್ನಪಟ್ಟಣ ಉಪಚುನಾವಣಾ ಕದನದಲ್ಲಿ ಪುತ್ರಿ ಐಶ್ವರ್ಯ ಸ್ಪರ್ಧೆ?: ಡಿ.ಕೆ. ಶಿವಕುಮಾರ್ ಹೇಳಿದ್ದಿಷ್ಟು

By Kannadaprabha NewsFirst Published Jun 28, 2024, 4:50 AM IST
Highlights

ನಮ್ಮ ಕುಟುಂಬದ ಯಾವುದೇ ಸದಸ್ಯರು ಚುನಾವಣಾ ರಾಜಕೀಯಕ್ಕೆ ಬರುವ ಪ್ರಶ್ನೆಯೇ ಇಲ್ಲ. ಈ ಬಗ್ಗೆ ನಾನು ಬಹಳ ಹಿಂದೆಯೇ ಸ್ಪಷ್ಟಪಡಿಸಿದ್ದೇನೆ. ಆದರೂ, ಈ ಬಗ್ಗೆ ಆಗಾಗ ಸೃಷ್ಟಿಯಾಗುವ ವದಂತಿಗಳಿಗೆ ಯಾರೂ ಕಿವಿಗೊಡಬಾರದು ಎಂದು ವಿನಂತಿಸುತ್ತಿದ್ದೇನೆ ಎಂದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ 

ಬೆಂಗಳೂರು(ಜೂ.28): ‘ನಮ್ಮ ಕುಟುಂಬದ ಯಾವುದೇ ಸದಸ್ಯರು ಚುನಾವಣಾ ರಾಜಕೀಯಕ್ಕೆ ಬರುವುದಿಲ್ಲ’ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. 

‘ಮಂಡ್ಯ ಲೋಕಸಭಾ ಕ್ಷೇತ್ರದಿಂದ ಎಚ್.ಡಿ.ಕುಮಾರಸ್ವಾಮಿ ಅವರು ಸಂಸದರಾಗಿ ಆಯ್ಕೆಯಾಗಿ ತೆರವಾಗಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಡಿ.ಕೆ ಶಿವಕುಮಾರ್ ಪುತ್ರಿ ಐಶ್ವರ್ಯ ಅವರು ಸ್ಪರ್ಧಿಸುತ್ತಿದ್ದಾರೆ’ ಎಂಬ ವದಂತಿ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣ ಎಕ್ಸ್‌ ಮೂಲಕ ಅವರು ಸ್ಪಷ್ಟನೆ ನೀಡಿದ್ದಾರೆ.

ಚನ್ನಪಟ್ಟಣ ಉಪ ಚುನಾವಣೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಪುತ್ರಿ ಐಶ್ವರ್ಯಾ ಸ್ಪರ್ಧೆ?

‘ನಮ್ಮ ಕುಟುಂಬದ ಯಾವುದೇ ಸದಸ್ಯರು ಚುನಾವಣಾ ರಾಜಕೀಯಕ್ಕೆ ಬರುವ ಪ್ರಶ್ನೆಯೇ ಇಲ್ಲ. ಈ ಬಗ್ಗೆ ನಾನು ಬಹಳ ಹಿಂದೆಯೇ ಸ್ಪಷ್ಟಪಡಿಸಿದ್ದೇನೆ. ಆದರೂ, ಈ ಬಗ್ಗೆ ಆಗಾಗ ಸೃಷ್ಟಿಯಾಗುವ ವದಂತಿಗಳಿಗೆ ಯಾರೂ ಕಿವಿಗೊಡಬಾರದು ಎಂದು ವಿನಂತಿಸುತ್ತಿದ್ದೇನೆ’ ಎಂದು ಅವರು ತಿಳಿಸಿದ್ದಾರೆ.

ನೀವು ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿ ಬಗ್ಗೆ ಹೇಳಿದ್ದೀರಲ್ಲ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ರಾ

click me!