
ನವದೆಹಲಿ(ಜ.07): ಊಟಕ್ಕೆ ಸೇರಿದರೆ ಅದರಲ್ಲಿ ರಾಜಕೀಯ ಯಾಕೆ ಬೆರೆಸುತ್ತೀರಿ. ಒಂದೆಡೆ ಸೇರಿ ಊಟ ಮಾಡಿದರೆ ತಪ್ಪೇನಿದೆ. ನಾನೂ ಕೆಲವು ಬಾರಿ ಊಟಕ್ಕೆ ಕರೆಯುತ್ತೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಡಿ.ಕೆ. ಶಿವಕುಮಾರ್ ಅವರು ವಿದೇಶ ಪ್ರವಾಸದಲ್ಲಿರುವಾಗ ಬೆಂಗಳೂರಲ್ಲಿ ಹೊಸ ವರ್ಷದ ಹಿನ್ನೆಲೆ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದಲ್ಲಿ ಔತಣ ಕೂಟದ ಹೆಸರಲ್ಲಿ ರಹಸ್ಯ ಸಭೆ ನಡೆಸಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ, ಹೆಚ್ಚುವರಿ ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಟಿ, ಸಂಪುಟ ಪುನಾರಚನೆ ಕುರಿತಂತೆ ಚರ್ಚಿಸಲಾಗಿದೆ ಎಂದು ಹಬ್ಬಿರುವ ಸುದ್ದಿಗಳ ಹಿನ್ನೆಲೆಯಲ್ಲಿ ಪತ್ರಕರ್ತರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಮ್ಮ ಮನೆಗೆ ನೀವು ಬರೋದು, ನಿಮ್ಮ ಮನೆಗೆ ನಾವು ಬರೋದು ಇವೆಲ್ಲ ಸಹಜ ಪ್ರಕ್ರಿಯೆಗಳು. ಇದಕ್ಕೆ ರಾಜಕೀಯ ಸೇರಿಸುವ ಅಗತ್ಯವಿಲ್ಲ ಎಂದು ಅವರು ಹೇಳಿದರು.
ಡಿಕೆ ಓಟಕ್ಕೆ ಬ್ರೇಕ್: ಬಂಡೆ ಸುತ್ತಲೂ ಬಲೆ ಹೆಣೆದಿದ್ಯಾ ಸಿದ್ದರಾಮಯ್ಯ ಪಡೆ?
ಸಂಪುಟ ಪುನರ್ ರಚನೆ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸುತ್ತಾರೆ ಎಂದ ಅವರು, ನಾಲ್ಕು ವರ್ಷದಿಂದ ಎಲ್ಲೂ ಹೊರಗೆ ಹೋಗಿರಲಿಲ್ಲ. ಹೀಗಾಗಿ ಕುಟುಂಬದ ಜೊತೆಗೆ ಹೊಸ ವರ್ಷಕ್ಕೆ ವಿದೇಶಕ್ಕೆ ತೆರಳಿದ್ದೆ ಎಂದು ಅವರು ತಿಳಿಸಿದರು.
2028ಕ್ಕೆ ನಾನೇ ಮುಖ್ಯಮಂತ್ರಿ ಅಭ್ಯರ್ಥಿ: ಸಚಿವ ಸತೀಶ್ ಜಾರಕಿಹೊಳಿ
ರಾಯಚೂರು: ರಾಜ್ಯದಲ್ಲಿ ಶೇ.60 ಪರ್ಸೇಂಟ್ ಸರ್ಕಾರವಿದೆ ಎಂದು ಬಿಜೆಪಿಗರು ಸುಳ್ಳು ಆರೋಪ ಮಾಡುವುದನ್ನು ಬಿಟ್ಟು ಅಗತ್ಯ ದಾಖಲೆಗಳೊಂದಿಗೆ ಸಾಬೀತುಪಡಿಸಬೇಕೆ ಹೊರತು ಸುಮ್ಮನೇ ಹೇಳಿಕೆಗಳನ್ನು ನೀಡಿದರೆ ಆಗುವುದಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿರುಗೇಟು ನೀಡಿದರು.
ಸ್ಥಳೀಯ ನಿಜಲಿಂಗಪ್ಪ ಕಾಲೋನಿಯಲ್ಲಿರುವ ಸಚಿವ ಎನ್.ಎಸ್.ಬೋಸರಾಜು ಅವರ ನಿವಾ ಸದಲ್ಲಿ ಉಪಹಾರ ಸೇವಿಸಿ ಮಾತನಾಡಿದ ಅವರು, ಸಚಿವ ಪ್ರಿಯಾಂಕ ಖರ್ಗೆ ರಾಜೀನಾಮೆ ನೀಡುವ ಪ್ರಶ್ನೆಯಿಲ್ಲ ಎಂದು ಅವರು ಹೇಳಿದರು.
ಬೀದರ್‌ನ ಗುತ್ತಿಗೆದಾರರ ಡೆತ್ ನೋಟ್‌ನಲ್ಲಿ ಖರ್ಗೆ ಅವರ ಆಪ್ತರ ಹೆಸರಿದೆ. ಈಶ್ವರಪ್ಪನವರದ್ದು ನೇರವಾಗಿ ಪತ್ರದಲ್ಲಿ ಹೆಸರಿತ್ತು. ಆಪ್ತರ, ಪಿಎಂಗಳ ಹೆಸರು ಇದೆ ಎಂದ ಮಾತ್ರಕ್ಕೆ ಸಚಿವರು ನೇರವಾಗಿ ಹೊಣೆಗಾರರು ಆಗುವುದಿಲ್ಲ, ಪ್ರಕರಣದ ತನಿಖೆ ನಡೆಯುತ್ತಿದೆ ಎಂದರು.
ಸಾರಿಗೆ ಬಸ್ ದರ ಹೆಚ್ಚಳ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವರು, ದರ ಏರಿಕೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ಬಿಜೆಪಿಯವರು ಕೇಂದ್ರದ ಜಿಎಸ್‌ಟಿ ಹೇರಿಕೆ ಬಗ್ಗೆಯೂ ಮಾತನಾಡಬೇಕು, ಕೇಂದ್ರ ಹಣಕಾಸು ಸಚಿವ ಹಳೆಯ ಗಾಡಿಗಳಿಗೆ ಶೇ.18 ರಷ್ಟು ಜಿಎಸ್‌ಟಿ ಹಾಕಿದ್ದಾರೆ. ಸಕ್ಕರೆ, ಕಾರ್ ಸೇರಿ ಇತರೆ ವಸ್ತುಗಳಿಗೆ ಶೇ.12 ರಷ್ಟು ಜಿಎಸ್‌ಟಿ ಹೇರಿದ್ದಾರೆ. ಇದರ ವಿರುದ್ಧ ಬಿಜೆಪಿಗರು ಮಾತ ನಾಡುವುದಿಲ್ಲ. ಬರೀ ಬಸ್ ದರದ ಕುರಿತು ವಿರೋಧ ವ್ಯಕ್ತಪಡಿಸಿದರೆ ಹೇಗೆ ಎಂದು ಪ್ರಶ್ನಿಸಿದರು.
ಜಾರಕಿಹೊಳಿ ಮನೆಯಲ್ಲಿ ಸಿಎಂ, 35 ಶಾಸಕರ ಡಿನ್ನರ್ ಮೀಟಿಂಗ್!
ಡಿಸಿಎಂ ಡಿಕೆಶಿ ಅವರನ್ನು ಬಿಟ್ಟು ರಹಸ್ಯ ಸಭೆಯನ್ನು ಮಾಡಿಲ್ಲ. ಅದು ರಹಸ್ಯ ಸಭೆಯಲ್ಲ, ಎಲ್ಲರೂ ಕೂಡಿಯೇ ಸಭೆ ಮಾಡಿದ್ದು, ಅದು ಊಟದ ಸಭೆಯಾಗಿತ್ತು. ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಬದಲಾವಣೆ, ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿಯಂತಹ ಚರ್ಚೆಗಳ್ಯಾವು ನಡೆಸಿಲ್ಲ, ಸಚಿವ ಸಂಪುಟದ ವಿಸ್ತರಣೆಯೂ ಇಲ್ಲ ಎಂದು ತಿಳಿಸಿದರು.
ರಾಜ್ಯದಲ್ಲಿ ಮುಖ್ಯಮಂತ್ರಿಗಳು ಇದ್ದು ಅವರನ್ನು ಬದಲಾಯಿಸುವ ಅವಶ್ಯಕತೆ ಬರಲ್ಲ. ಈ ಅವಧಿಗೆ ನಾನು, ಸಿಎಂ ಆಗುವುದಿಲ್ಲ, ಮುಂದಿನ ಅವಧಿಗೆ ನಾನು ಸಿಎಂ ಅಂತ ಹೇಳಿದ್ದು, 2028 ಕ್ಕೆ ನಾನೇ ಸಿಎಂ ಅಭ್ಯರ್ಥಿಯಾಗಿದ್ದು ಏನಾಗುತ್ತದೆಯೋ ಕಾದು ನೋಡಬೇಕು ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.