
ಬೆಂಗಳೂರು(ಫೆ.11): 'ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರು ಸದನದಲ್ಲಿ ನಮ್ಮ ತಂದೆಯನ್ನು ನೆನಪಿಸಿಕೊಂಡರು. ಅದಕ್ಕಾಗಿ ಈಗಾಗಲೇ ಒಂದು ಸುತ್ತಿನ ಸೆಟ್ಲಮೆಂಟ್ ಆಗಿದೆ. ಡಿ.ಕೆ. ಸುರೇಶ್ ಅವರನ್ನು ಗುಂಡಿಟ್ಟು ಕೊಲ್ಲುವುದಾದರೆ ಕೊಲ್ಲಲಿ ಬಿಡಿ. ಡಿ.ಕೆ. ಸುರೇಶ್ ಮೈಯಲ್ಲಿರುವುದು ಈಶ್ವರಪ್ಪನ ಗುಂಡಿನ ಬೆದರಿಕೆಗೆ ಹೆದರುವ ರಕ್ತವಲ್ಲ’ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ.
ಕೆ.ಎಸ್. ಈಶ್ವರಪ್ಪ ಹೇಳಿಕೆ ಕುರಿತು ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸುದ್ದಿಗೆ ಬಂದವರಿಗೆಲ್ಲಾ ಒಂದೊಂದಾಗಿ ಸೆಟ್ಲಮೆಂಟ್ ಆಗಿದೆ. ಈಶ್ವರಪ್ಪನಿಗೂ ಈಗಾಗಲೇ ಒಂದು ಸುತ್ತಿನ ಸೆಟ್ಲಮೆಂಟ್ ಆಗಿದೆ. ಈಗ ಈಶ್ವರಪ್ಪ ಎಲ್ಲಿದ್ದಾರೆ ಎಂದು ಗೊತ್ತಿದೆಯೆಲ್ಲಾ? ಎಂದು ಹೇಳಿದರು.
ಬರಪರಿಹಾರಕ್ಕೆ ಶಬರಿಯಂತೆ ಕಾದರೂ ಪ್ರಯೋಜನವಾಗಿಲ್ಲ; ಕೇಂದ್ರದಿಂದ ಕರ್ನಾಟಕದ ಜನರ ಶೋಷಣೆ ಆಗ್ತಿದೆ: ಸಿಎಂ ಕಿಡಿ
ಕೆಂಪೇಗೌಡರ ಇತಿಹಾಸ ಗೊತ್ತಿದೆಯಲ್ಲವೇ? ಬೆಂಗಳೂರಿನಲ್ಲಿ ನಮ್ಮದೇ ಆದ ಇತಿಹಾಸ ಇದೆ. ನಾವು ರಾಜಕಾರಣ ಮಾಡಬೇಕಾದವರು. ನಾವೇನು ಕಿವಿ ಮೇಲೆ ಹೂವು ಇಟ್ಟುಕೊಂಡು ಬಂದಿಲ್ಲ. ಎಲ್ಲದಕ್ಕೂ ಸೆಟ್ಲಮೆಂಟ್ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.