
ಬೆಂಗಳೂರು(ಅ.28): ಕಾಂಗ್ರೆಸ್ ಶಾಸಕರಿಗೆ ಆಫರ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ.ಕೆ. ಶಿವಕುಮಾರ್, ಬಹಳ ದೊಡ್ಡ ಷಡ್ಯಂತ್ರ ನಡೀತಾ ಇದೆ. ಯಾವುದೇ ಫಲ ಕೂಡ ಅವರಿಗೆ ಸಿಗಲ್ಲ. ಪ್ರತಿಯೊಬ್ಬರ ನಡೆ ಕೂಡ ನಮಗೆ ಗೊತ್ತಿದೆ. ದೊಡ್ಡವರು ಇದರಲ್ಲಿ ಪ್ರಯತ್ನ ಮಾಡ್ತಾ ಇದ್ದಾರೆ ಅಂತ ತಿಳಿಸಿದ್ದಾರೆ.
ಯಾರು ಯಾವುದೇ ರೀತಿ ಹೇಳಿಕೆ ಕೊಡಬಾರದು. ಪಕ್ಷದ ವಿಚಾರವಾಗಿ ಯಾವುದೇ ಹೇಳಿಕೆ ಕೊಡಬಾರದು. ಕೈಮುಗಿದು ಕೇಳಿಕೊಳ್ಳುತ್ತೇನೆ ಯಾವುದೇ ಹೇಳಿಕೆ ನೀಡಬೇಡಿ. ಇಲ್ಲದೆ ಹೊದ್ರೆ ನೋಟೀಸ್ ನೀಡಬೇಕಾಗುತ್ತೆ ಎಂದು ಡಿ.ಕೆ. ಶಿವಕುಮಾರ್ ತಮ್ಮ ಶಾಸಕರಿಗೆ ಎಚ್ಚರಿಕೆ ನೀಡಿದ್ದಾರೆ.
ಡಿಕೆಶಿ ಬೆಂಗಳೂರು ಪ್ಲ್ಯಾನ್: ರಾಮನಗರಕ್ಕೇನು ಲಾಭ?
ಉದ್ಯಮಿ ಮೋಹನ್ ದಾಸ್ ಪೈ ಟ್ವೀಟ್ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು, ಯಾವ ಕಂಪನಿ ರಾಜ್ಯ ಬಿಟ್ಟು ಹೋಗಿದೆ. ಇದರ ಬಗ್ಗೆ ಮಾಹಿತಿ ನನಗೆ ಇಲ್ಲ. ಈ ಬಗ್ಗೆ ವಿಚಾರಿಸುತ್ತೇನೆ ಎಂದು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.