ಬಿಜೆಪಿ ಜಾತಿ, ಧರ್ಮ ಒಡೆಯೋ ಕೆಲಸ ಮಾಡಿದೆ: ಡಿ.ಕೆ. ಶಿವಕುಮಾರ್

Published : May 03, 2024, 08:17 PM IST
ಬಿಜೆಪಿ ಜಾತಿ, ಧರ್ಮ ಒಡೆಯೋ ಕೆಲಸ ಮಾಡಿದೆ: ಡಿ.ಕೆ. ಶಿವಕುಮಾರ್

ಸಾರಾಂಶ

ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ಮಾಡಿದರು. ನಾವು ಪ್ರಜಾಧ್ವನಿ ಯಾತ್ರೆ ಪ್ರಾರಂಭ ಮಾಡಿದ್ದೇವೆ. ನಾವು ಯಾರೂ ಮೋಸ ಮಾಡಿಲ್ಲ. ನಾವು ಯಾವುದೇ ಗ್ಯಾರಂಟಿ ಯೋಜನೆಗಳನ್ನ ಜಾತಿ ಧರ್ಮದ ಮೇಲೆ ನೀಡಿಲ್ಲ. ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಮಹಾಲಕ್ಷ್ಮಿ ಯೋಜನೆ ನೀಡುತ್ತಿದ್ದೇವೆ. ವರ್ಷಕ್ಕೆ 1 ಲಕ್ಷ ರೂಪಾಯಿಯನ್ನು ಮಹಿಳೆಯರಿಗೆ ನೀಡುತ್ತೇವೆ ಎಂದ ಡಿಕೆಶಿ 

ಕಾರವಾರ(ಮೇ.03):  ಕುಮಟಾದಲ್ಲಿ ಸಚಿವ ಮಂಕಾಳ ವೈದ್ಯ ಮತ್ತು ನಮ್ಮ ಅಭ್ಯರ್ಥಿ ಅಂಜಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಲೇಬೇಕೆಂಬ ಸಂಕಲ್ಪ ಮಾಡಿದ್ದಾರೆ. ಪ್ರಣಾಳಿಕೆಯಲ್ಲೂ ಹೇಳಿದ್ದೇವೆ, ಕುಮಟಾದಲ್ಲಿ ಆಸ್ಪತ್ರೆ ಮಾಡೇ ಮಾಡುತ್ತೇವೆ. ನಿಮ್ಮ ಸಮಸ್ಯೆಗಳನ್ನು ನಾವು ಅರಿತಿದ್ದೇವೆ. ಗ್ಯಾರಂಟಿ ಕೊಟ್ಟು ಬದುಕನ್ನು ಕಾಂಗ್ರೆಸ್ ಹಸನಾಗಿಸಿದೆ ಎಂದು ಬಿಜೆಪಿಗೆ ಮತ ಹಾಕಿದವರಿಗೆ ತಿಳಿಸಲೇಬೇಕು. ಮಾರ್ಗರೇಟ್ ಆಳ್ವಾ ನಂತರ ಮತ್ತೊಬ್ಬ ಮಹಿಳೆಯನ್ನ ಆರಿಸಿ ಕಳಿಸುತ್ತೀರಿ ಎನ್ನುವ ನಂಬಿಕೆ ಇದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಇಂದು(ಶುಕ್ರವಾರ) ಜಿಲ್ಲೆಯ ಕುಮಟಾದಲ್ಲಿ ನಡೆದ ಕಾಂಗ್ರೆಸ್‌ ಸಮಾವೇಶದಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್ ಅವರು, ಕಾಂಗ್ರೆಸ್‌ನ ಆಚಾರ ವಿಚಾರ ಪ್ರಚಾರ ಮಾಡೋಕೆ ಬಂದಿದ್ದೇವೆ. ನೀವು ಈ ಬಾರಿ ಇತಿಹಾಸ ನಿರ್ಮಿಸುತ್ತೀರಿ ಎಂಬ ನಂಬಿಕೆ ಇದೆ. ಕೊಟ್ಟ ಮಾತನ್ನ ಬಿಜೆಪಿ ಉಳಿಸಿಕೊಂಡಿಲ್ಲ. ಜಾತಿ, ಧರ್ಮ ಒಡೆಯೋ ಕೆಲಸ ಮಾಡಿದೆ ಎಂದು ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. 

ಉತ್ತರ ಕನ್ನಡ: ರೂಪಾಲಿ ನಾಯ್ಕ ಬಿರುಸಿನ ಪ್ರಚಾರ, ಬಿಜೆಪಿಗೆ ಬಲ

ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ಮಾಡಿದರು. ನಾವು ಪ್ರಜಾಧ್ವನಿ ಯಾತ್ರೆ ಪ್ರಾರಂಭ ಮಾಡಿದ್ದೇವೆ. ನಾವು ಯಾರೂ ಮೋಸ ಮಾಡಿಲ್ಲ. ನಾವು ಯಾವುದೇ ಗ್ಯಾರಂಟಿ ಯೋಜನೆಗಳನ್ನ ಜಾತಿ ಧರ್ಮದ ಮೇಲೆ ನೀಡಿಲ್ಲ. ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಮಹಾಲಕ್ಷ್ಮಿ ಯೋಜನೆ ನೀಡುತ್ತಿದ್ದೇವೆ. ವರ್ಷಕ್ಕೆ 1 ಲಕ್ಷ ರೂಪಾಯಿಯನ್ನು ಮಹಿಳೆಯರಿಗೆ ನೀಡುತ್ತೇವೆ ಎಂದ ಡಿಕೆಶಿ ಹೇಳಿದ್ದಾರೆ. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

Internal Reservation Row: ಸಿಎಂ ನೇತೃತ್ವದಲ್ಲಿ ದಲಿತ ಸಚಿವರ ಮಹತ್ವದ ಸಭೆ, ಮೂರು ಮಹತ್ವದ ನಿರ್ಧಾರ, ರಾಜಭವನಕ್ಕೆ ಸಚಿವರ ನಿಯೋಗ ದೌಡು!
ಪ್ರಧಾನಿ ಮೋದಿ ಅಪಹಾಸ್ಯ ಮಾಡಿದ್ದ ಕೈ ಕಾರ್ಯಕರ್ತೆ ವಿರುದ್ಧ ದೂರು!