
ಬೆಂಗಳೂರು (ಆ.15): ‘ನವರಂಗಿ ನಾರಾಯಣ, ಅಶೋಕ ಚಕ್ರವರ್ತಿ ಸೇರಿದಂತೆ ಎಲ್ಲರ ಅಕ್ರಮವನ್ನೂ ಬಿಚ್ಚಿಡುತ್ತೇವೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಜೆಪಿ ನಾಯಕರ ವಿರುದ್ಧ ಗುಡುಗಿದ್ದಾರೆ. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಮಗೆ ನವರಂಗಿ ನಾರಾಯಣ, ಅಶೋಕ ಚಕ್ರವರ್ತಿ ಸೇರಿದಂತೆ ಎಲ್ಲರದ್ದೂ ಗೊತ್ತಿದೆ. ಶಾರ್ಕ್ ಮೀನಿನಂತಹ ಶಾಸಕರು ಕಾಮಗಾರಿಯನ್ನೇ ಮಾಡದೆ ಬಿಲ್ ಬಿಡುಗಡೆಗೆ ಕೇಳುತ್ತಿದ್ದಾರೆ. ದಾಖಲೆಗಳನ್ನೆಲ್ಲಾ ಒಮ್ಮೆಗೆ ಬಿಚ್ಚಿಟ್ಟರೆ ಅರಗಿಸಿಕೊಳ್ಳಲು ಕಷ್ಟವಾಗುತ್ತದೆ. ಸತ್ಯ ಶೋಧನೆ ವರದಿ ಬರಲಿ ಎಲ್ಲವನ್ನೂ ಬಹಿರಂಗಪಡಿಸುತ್ತೇವೆ’ ಎಂದು ಹೇಳಿದರು.
ಗುತ್ತಿಗೆದಾರರು ನೋವಿನಲ್ಲಿದ್ದಾರೆ. ಅವರ ಬಗ್ಗೆ ನಾನು ಮಾತನಾಡುವುದಿಲ್ಲ. ಗುತ್ತಿಗೆದಾರರು ತಮ್ಮ ಹೇಳಿಕೆಗಳನ್ನು ಹಿಂಪಡೆದಿದ್ದಾರೆ. ಆದರೆ ಅವರನ್ನು ಬಳಸಿಕೊಂಡ ಅಶೋಕ ಚಕ್ರವರ್ತಿ (ಆರ್. ಅಶೋಕ್), ನವರಂಗಿ ನಾರಾಯಣ (ಡಾ.ಸಿ.ಎನ್.ಅಶ್ವತ್ಥನಾರಾಯಣ), ಸಿ.ಟಿ. ರವಿ, ಗೋಪಾಲಯ್ಯ ಅವರು ಮೊದಲು ಉತ್ತರ ನೀಡಲಿ ಎಂದು ಆಗ್ರಹಿಸಿದರು.
ಸೇವಾ ಮನೋಭಾವದ ವೈದ್ಯರು ಸಂಖ್ಯೆ ಹೆಚ್ಚಾಗಲಿ: ಸಚಿವ ಪರಮೇಶ್ವರ್
ಅಜ್ಜಯ್ಯನ ಸಹವಾಸ ಗೊತ್ತಿಲ್ಲ: ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಬಿಜೆಪಿ ನಾಯಕರ ಅಕ್ರಮಗಳ ಬಗ್ಗೆ ದಾಖಲೆಗಳು ಇದೆಯೋ ಇಲ್ಲವೋ ಎಲ್ಲವೂ ಗೊತ್ತಾಗುತ್ತದೆ. ನಮ್ಮ ಅಜ್ಜಯ್ಯನ ಸಹವಾಸ ಏನು ಎಂದು ಅವರಿಗೆಲ್ಲಾ ಗೊತ್ತಿಲ್ಲ. ನಾನೀಗ ತಕ್ಷಣಕ್ಕೆ ಉತ್ತರ ನೀಡಲು ಹೋಗಲ್ಲ. ಯಾರಾರಯರು ಏನೇನು ಮಾಡಿದ್ದಾರೆ ಎಂಬುದೆಲ್ಲಾ ಗೊತ್ತಿದೆ. ನಮಗೆ ಜನರ ಹಣದ ಮೇಲೆ ಜವಾಬ್ದಾರಿ ಇದೆ. ಕಾಮಗಾರಿಯೇ ಆಗದೆ ಹಣ ಬಿಡುಗಡೆ ಮಾಡಲು ಸಾಧ್ಯವಿಲ್ಲ. ಹೀಗಾಗಿ ಸತ್ಯ ಶೋಧನೆ ವರದಿ ಬಂದ ಮೇಲೆ ಪ್ರಾಮಾಣಿಕ ಗುತ್ತಿಗೆದಾರರಿಗೆ ಹಣ ನೀಡುತ್ತೇವೆ. ಜತೆಗೆ ನವರಂಗಿ ನಾರಾಯಣ, ಅಶೋಕ್ ಚಕ್ರವರ್ತಿ ಸೇರಿ ಎಲ್ಲರದ್ದೂ ಬಿಚ್ಚಿಡುತ್ತೇವೆ ಎಂದರು.
ಕೆಂಪಣ್ಣಗೆ ಧನ್ಯವಾದ: ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣ ಅವರು ಕಾಂಗ್ರೆಸ್ ಸರ್ಕಾರ ಯಾವುದೇ ಕಮಿಷನ್ ಕೇಳಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅವರಿಗೆ ಧನ್ಯವಾದಗಳನ್ನು ಹೇಳುತ್ತೇನೆ. ರಾಜ್ಯಪಾಲರಿಗೆ ಪತ್ರ ಬರೆದಿದ್ದ ಬಿಬಿಎಂಪಿ ಗುತ್ತಿಗೆದಾರರ ಸಂಘದ ಸದಸ್ಯರು ನನ್ನನ್ನು ಭೇಟಿಯಾಗಿದ್ದರು. ನಾವು ಬಿಜೆಪಿಯವರ ಮಾತು ಕೇಳಿ ಈ ಕೆಲಸ ಮಾಡಿದೆವು, ನಮ್ಮದು ಯಾವುದೇ ಆರೋಪಗಳಿಲ್ಲ ಎಂದು ಹೇಳಿದ್ದಾರೆ ಎಂದು ಶಿವಕುಮಾರ್ ಸ್ಪಷ್ಟಪಡಿಸಿದರು.
ಮಂಗಳೂರು: ಗ್ರಾಮಸಭೆಯಲ್ಲಿ ಗ್ರಾಮಸ್ಥರ ಒತ್ತಡಕ್ಕೆ ವೈದ್ಯಾಧಿಕಾರಿಗೆ ಗರ್ಭಪಾತ: ಪೊಲೀಸ್‌ಗೆ ದೂರು
ಕೊಳ್ಳೆ ಹೊಡೆದವರಿಗೆ ಹಣವಿಲ್ಲ: ಕರ್ನಾಟಕ ಗುತ್ತಿಗೆದಾರರ ಸಂಘದವರನ್ನು ನಾನು ಇದುವರೆಗೂ ಭೇಟಿಯಾಗಿಲ್ಲ. ಆದರೆ ಯಾರು ಪ್ರಾಮಾಣಿಕವಾಗಿ ಕೆಲಸ ಮಾಡಿದ್ದಾರೋ ಅಂತಹವರು ತಮ್ಮ ಹಣ ಪಡೆಯಲಿದ್ದಾರೆ. ನಾನು ಕರ್ನಾಟಕದ ಜನರಿಗೆ ಉತ್ತರ ನೀಡುವ ಜವಾಬ್ದಾರಿ ಹೊಂದಿದ್ದೇನೆ. ಹೀಗಾಗಿ ಕಾಮಗಾರಿ ಮಾಡದೆಯೇ ಹಣ ಕೊಳ್ಳೆ ಹೊಡೆಯಲು ನಿಂತವರಿಗೆ ಹಣ ನೀಡಲಾಗುವುದಿಲ್ಲ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.