ರಾಮನ ಹೆಸರಿನಲ್ಲಿ ಬಿಜೆಪಿ ಮತಯಾಚನೆ, ನಾವು ಹಿಂದೂಗಳಲ್ಲವೇ?: ಡಿ.ಕೆ.ಶಿವಕುಮಾರ್

By Kannadaprabha News  |  First Published Feb 14, 2024, 11:03 PM IST

ನನ್ನನ್ನು ಜೈಲಿಗೆ ಕಳುಹಿಸಲು ದೊಡ್ಡ ಷಡ್ಯಂತ್ರ ನಡೆಯುತ್ತಿದೆ. ಈ ಬಗ್ಗೆ ನಮ್ಮ ಜಿಲ್ಲೆಯವರು ಸೇರಿ ಅನೇಕರು ಮಾತನಾಡಿದ್ದಾರೆ. ನಾನು ಎಲ್ಲದಕ್ಕೂ ಸಿದ್ಧನಿದ್ದೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದರು.


ರಾಮನಗರ (ಫೆ.14): ನನ್ನನ್ನು ಜೈಲಿಗೆ ಕಳುಹಿಸಲು ದೊಡ್ಡ ಷಡ್ಯಂತ್ರ ನಡೆಯುತ್ತಿದೆ. ಈ ಬಗ್ಗೆ ನಮ್ಮ ಜಿಲ್ಲೆಯವರು ಸೇರಿ ಅನೇಕರು ಮಾತನಾಡಿದ್ದಾರೆ. ನಾನು ಎಲ್ಲದಕ್ಕೂ ಸಿದ್ಧನಿದ್ದೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದರು. ನಿಮ್ಮನ್ನು ಜೈಲಿಗೆ ಕಳುಹಿಸುತ್ತೇವೆ ಎಂದು ಮಾಜಿ ಸಚಿವ ಈಶ್ವರಪ್ಪ ಪದೇ ಪದೇ ಹೇಳುತ್ತಿರುವ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಡಿ.ಕೆ.ಶಿವಕುಮಾರ್ , ನನ್ನನ್ನು ಜೈಲಿಗೆ ಕಳುಹಿಸುವುದಾಗಿ ಅನೇಕರು ಮಾತನಾಡಿದ್ದಾರೆ. ನಮ್ಮ ಜಿಲ್ಲೆಯವರೂ ಮಾತನಾಡಿದ್ದಾರೆ. ನಾನು ಎಲ್ಲದಕ್ಕೂ ಸಿದ್ಧನಿದ್ದೇನೆ. ದೊಡ್ಡ ಷಡ್ಯಂತ್ರ ನಡೆಯುತ್ತಿದೆ. 

ಸಿಬಿಐ ಮೂಲಕ ಏನೇನು ಮಾಡಿಸುತ್ತಿದ್ದಾರೆ, ಬೇರೆಯವರ ಮೂಲಕ ಏನು ಮಾಡಿಸುತ್ತಿದ್ದಾರೆ ಎಂದು ನನಗೂ ಗೊತ್ತಿದೆ. ಸಮಯ ಬಂದಾಗ ಮಾತನಾಡುತ್ತೇನೆ ಎಂದರು. ಮೋದಿ ಪ್ರಧಾನಿಯಾಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂಬ ಕುಮಾರಸ್ವಾಮಿ ಹೇಳಿಕೆ ಬಗ್ಗೆ ಕೇಳಿದಾಗ, ಕುಮಾರಸ್ವಾಮಿ ಈ ಹಿಂದೆ ಹೇಳಿದ್ದೆಲ್ಲಾ ಮತ್ತೆ ನೆನಪಿಸಿಕೊಳ್ಳಿ. ಅವರು ಪ್ರಧಾನಿಯಾದರೆ ದೇಶ ಬಿಟ್ಟು ಹೋಗುವುದಾಗಿ ದೇವೇಗೌಡರೇ ಹೇಳಿದ್ದರು. ಅದಕ್ಕೆ ಪ್ರಧಾನಿಗಳು ನನ್ನ ಮನೆಯಲ್ಲೇ ಜಾಗ ನೀಡುತ್ತೇನೆ ಬನ್ನಿ ಎಂದಿದ್ದರು. ಕುಮಾರಸ್ವಾಮಿಯವರ ಮಾತುಗಳ ದಾಖಲೆ ನಿಮ್ಮ ಬಳಿ ಇಲ್ಲವೇ ಎಂದು ಟಾಂಗ್ ನೀಡಿದರು. 

Tap to resize

Latest Videos

ಡಿ.ಕೆ.ಶಿವಕುಮಾರ್ ಮತ್ತೆ ತಿಹಾರ್ ಜೈಲು ಸೇರಲಿದ್ದಾರೆ: ಕೆ.ಎಸ್.ಈಶ್ವರಪ್ಪ

ಡಿ.ಕೆ ಸಹೋದರರನ್ನು ರಾಮನಗರದಲ್ಲಿ ಕಟ್ಟಿಹಾಕಲು ಬದ್ಧವೈರಿಗಳು ಒಂದಾಗಿದ್ದಾರೆ ಎಂಬ ಪ್ರಶ್ನೆಗೆ ಡಿ.ಕೆ.ಶಿವಕುಮಾರ್ ರವರು , ಯಾರು ಏನಾದರೂ ಮಾಡಲಿ. ಅವರು ಅವರ ಕರ್ತವ್ಯ ಮಾಡುತ್ತಿದ್ದಾರೆ. ರಾಜಕಾರಣ ಮಾಡುವವರನ್ನು ನಾವು ಬೇಡ ಎನ್ನಲು ಸಾಧ್ಯವೇ ಎಂದರು. ಈ ಹಿಂದೆಯೂ ಸುರೇಶ್ ಅವರು ಚುನಾವಣೆಗೆ ನಿಂತಾಗ ದಳ ಮತ್ತು ಬಿಜೆಪಿಯವರು ಒಪ್ಪಂದ ಮಾಡಿಕೊಂಡು ಅನಿತಾ ಕುಮಾರಸ್ವಾಮಿಯವರನ್ನು ಮಾತ್ರ ಕಣಕ್ಕಿಳಿಸಿದ್ದರು. ಅವರು ಏನಾದರೂ ರಾಜಕಾರಣ ಮಾಡಲಿ. ರಾಜ್ಯದ 28 ಸಂಸದರ ಪೈಕಿ ಸುರೇಶ್ ಅವರು ಮಾಡಿರುವ ಕೆಲಸ ಬೇರೆ ಯಾವುದೇ ಸಂಸದರೂ ಮಾಡಿಲ್ಲ. 

ಅದಕ್ಕೆ ದಾಖಲೆಗಳಿವೆ. ಕುಡಿಯುವ ನೀರಿನ ವಿಚಾರ, ಅರಣ್ಯ ಜಮೀನು ಕೊಡಿಸಿರುವುದು, ಕೆರೆ ತುಂಬಿಸಿರುವುದು, ನಿವೇಶನ ಹಂಚಿಕೆ ಸೇರಿ ಅನೇಕ ಕೆಲಸ ಮಾಡಿದ್ದಾರೆ. ಈಗ ಚುನಾವಣೆಯಲ್ಲಿ ಸ್ಪರ್ಧಿಸುವವರು ತಮ್ಮ ಬಳಿ ಅಧಿಕಾರ ಇದ್ದಾಗ ಏನು ಮಾಡಿದ್ದಾರೆ ಎಂದು ಪ್ರಶ್ನಿಸಿದರು. ರಾಜ್ಯಪಾಲರಿಂದ ಸರ್ಕಾರ ಸುಳ್ಳು ಹೇಳಿಸಿದೆ ಎಂಬ ಬಿಜೆಪಿ ನಾಯಕರ ಆರೋಪದ ಬಗ್ಗೆ ಕೇಳಿದಾಗ, ರಾಜ್ಯದ ಮಹಿಳೆಯರಿಗೆ 2 ಸಾವಿರ ಕೊಟ್ಟಿರುವುದು ಸುಳ್ಳೇ?, ಮಹಿಳೆಯರು ಬಸ್ ಗಳಲ್ಲಿ ಉಚಿತವಾಗಿ ಸಂಚರಿಸುತ್ತಿರುವುದು ಸುಳ್ಳೇ?, ಯುವಕರಿಗೆ ನಿರುದ್ಯೋಗ ಭತ್ಯೆ ಸಿಗುತ್ತಿರುವುದು ಸುಳ್ಳಾ?. ಬಡವರಿಗೆ 5 ಕೆ.ಜಿ ಅಕ್ಕಿ ಹಾಗೂ ಉಳಿದ 5 ಕೆ.ಜಿ ಅಕ್ಕಿಯ ಹಣ ನೀಡುತ್ತಿರುವುದು ಸುಳ್ಳಾ? 200 ಯೂನಿಟ್ ವರೆಗೂ ಉಚಿತ ವಿದ್ಯುತ್ ನೀಡುತ್ತಿರುವುದು ಸುಳ್ಳಾ? ಎಂದು ಪ್ರಶ್ನಿಸಿದರು.

ಲೂಟಿಕೋರರನ್ನ ಲೋಕಸಭೆಗೆ ಕಳಿಸಿದರೆ ಇನ್ನೇನಾಗುತ್ತೆ?: ಡಿಕೆಸು ವಿರುದ್ಧ ಎಚ್‌ಡಿಕೆ ವಾಗ್ದಾಳಿ

ರಾಮ ಬಿಜೆಪಿಯವರ ಮನೆ ಆಸ್ತಿಯೇ..?: ಕೇಸರಿ ಶಾಲು ಧರಿಸಿ ಸದನಕ್ಕೆ ಪ್ರವೇಶ ವಿಷಯಕ್ಕೆ ಪ್ರತಿಕ್ರಿಯಿಸಿದ ಅವರು, ಬಿಜೆಪಿ ಅವರು ಏನೇನ್ ಬೇಕೋ ಮಾಡಲಿ, ಬಣ್ಣ ಹಾಕಿಕೊಳ್ಳಲಿ ನಮ್ಮ ಅಭ್ಯಂತರವಿಲ್ಲ. ಬಿಜೆಪಿಯವರು ರಾಮನ ಹೆಸರಲ್ಲಿ ಮತ ಕೇಳಲು ಹೊರಟಿದ್ದಾರೆ. ರಾಮ ಭಕ್ತ ಆಂಜನೇಯನ ದೇವಾಲಯವನ್ನು ಕೆಂಗಲ್ ಹನುಮಂತಯ್ಯ ಅವರು ಕಟ್ಟಿಸಿಲ್ವಾ? ರಾಮ ಅವರ ಮನೆ ಆಸ್ತಿಯೇ?. ರಾಮ ನಮ್ಮ ಆಸ್ತಿಯಲ್ಲವೇ?. ನಾವು ಹಿಂದೂಗಳಲ್ಲವೇ? ಎಂದು ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದರು.

click me!