ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸದನದ ಹೊರಗೆ ಸರ್ಕಾರದ ವಿರುದ್ಧ ಹೋರಾಟ ಮಾಡುವ ಬದಲು, ಯಾವುದಾದರೂ ಒಂದು ಕ್ಷೇತ್ರ ಆಯ್ಕೆ ಮಾಡಿಕೊಂಡು ಸದನಕ್ಕೆ ಬಂದು ಮಾತನಾಡಲಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಟಾಂಗ್ ನೀಡಿದ್ದಾರೆ.
ಸುವರ್ಣಸೌಧ (ಡಿ.14): ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸದನದ ಹೊರಗೆ ಸರ್ಕಾರದ ವಿರುದ್ಧ ಹೋರಾಟ ಮಾಡುವ ಬದಲು, ಯಾವುದಾದರೂ ಒಂದು ಕ್ಷೇತ್ರ ಆಯ್ಕೆ ಮಾಡಿಕೊಂಡು ಸದನಕ್ಕೆ ಬಂದು ಮಾತನಾಡಲಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಟಾಂಗ್ ನೀಡಿದ್ದಾರೆ. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಜನ ೬೫ ಬಿಜೆಪಿ ಶಾಸಕ ರನ್ನು ಆಯ್ಕೆ ಮಾಡಿರುವುದು ವಿಧಾನಸಭೆಯಲ್ಲಿ ಜನರ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡುವುದಕ್ಕಾಗಿ. ಆದರೆ ಇವರು ಸದನದಲ್ಲಿ ಚರ್ಚೆ ಮಾಡದೇ ಹೊರಗೆ ಹೋರಾಟ ಮಾಡಿದರೆ ಏನು ಪ್ರಯೋಜನ ಎಂದರು.
ಜಾತಿಗಣತಿಗೆ ನಾನೆಲ್ಲೂ ವಿರೋಧಿಸಿಲ್ಲ: ನಾನು ಜಾತಿ ಗಣತಿಗೆ ಎಲ್ಲಿಯೂ ವಿರೋಧ ವ್ಯಕ್ತಪಡಿಸಿಲ್ಲ. ಜಾತಿ ಗಣತಿಯ ಸಮೀಕ್ಷೆ ವೈಜ್ಞಾನಿಕವಾಗಿ ಹಾಗೂ ವ್ಯವಸ್ಥಿತವಾಗಿ ನಡೆಯಬೇಕು ಎಂಬುದಷ್ಟೇ ನಮ್ಮ ಅಭಿಮತ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸುವರ್ಣಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿ ಗಣತಿ ಸಮೀಕ್ಷೆ ಸರಿಯಾಗಿ ನಡೆದಿಲ್ಲ ಎಂದು ನಮ್ಮ ಅನೇಕ ಶಾಸಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮನೆ, ಮನೆಗೆ ತೆರಳಿ ಸಮೀಕ್ಷೆ ನಡೆಸಿಲ್ಲ ಎಂದು ದೂರುಗಳು ಬಂದಿವೆ. ಎಲ್ಲಾ ಸಮುದಾಯಗಳು ಅವರ ಜನಸಂಖ್ಯೆಗೆ ಅನುಗುಣವಾಗಿ ತಮ್ಮ ಹಕ್ಕನ್ನು ಪಡೆಯಬೇಕು.
ಸಭಾಪತಿ ಪೀಠಕ್ಕೆ ಅಪಮಾನಿಸಿಲ್ಲ, ಮುಂದೆಯೂ ಅವಮಾನಿಸುವುದಿಲ್ಲ: ಸಚಿವ ಜಮೀರ್ ಅಹಮದ್
ಅಲ್ಪಸಂಖ್ಯಾತರು, ಪರಿಶಿಷ್ಟರು ಸೇರಿದಂತೆ ಎಲ್ಲರೂ ತಮ್ಮ ಜನಸಂಖ್ಯೆ ಅನುಗುಣವಾಗಿ ಹಕ್ಕು ಹಾಗೂ ಅನುದಾನ ಕೇಳುತ್ತಾರೆ. ಈ ಜಾತಿ ಗಣತಿಯನ್ನು ವೈಜ್ಞಾನಿಕವಾಗಿ ಮಾಡಲಾಗಿದೆಯೇ ಎಂಬ ವಿಚಾರವಾಗಿ ನಾವು ಸ್ಪಷ್ಟೀಕರಣ ಕೇಳಿದ್ದೇವೆ. ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಮೇಲೆ ನಾವು ನಂಬಿಕೆ ಇಟ್ಟಿದ್ದೇವೆ. ಸಮಾಜದ ಎಲ್ಲಾ ವರ್ಗಗಳಿಗೆ ಸಾಮಾಜಿಕ ನ್ಯಾಯ ಒದಗಿಸಿಕೊಡುವ ಕಾಂಗ್ರೆಸ್ ಪಕ್ಷದ ಬದ್ಧತೆಗೆ ನಾನು ಬೆಂಬಲವಾಗಿ ನಿಲ್ಲುತ್ತೇನೆ. ಕೇಂದ್ರ ಸರ್ಕಾರದ ವರ್ಗೀಕರಣದ ಅನ್ವಯ ನಾನು ಕೂಡ ಇತರೆ ಹಿಂದುಳಿದ ವರ್ಗದ ಸಮುದಾಯದ ನಾಯಕ.
ರಾಜ್ಯ ಬಿಜೆಪಿ ಮೇಲೆ ಹೈಕಮಾಂಡ್ ಬೇಸರ ಆಗಿರೋದು ನಿಜ: ಈಶ್ವರಪ್ಪ
ಪಕ್ಷದ ಅಧ್ಯಕ್ಷನಾಗಿ ನಾನು ಎಲ್ಲಾ ವರ್ಗದ ಜನರನ್ನು ಸಮಾನವಾಗಿ ನೋಡಬೇಕು ಎಂದು ತಿಳಿಸಿದರು. ಜಾತಿ ಗಣತಿಯ ಕೆಲವು ದಾಖಲೆಗಳು ಕಾಣೆಯಾಗಿರುವ ಬಗ್ಗೆ ವರದಿಗಳಿವೆ ಎಂಬುದಾಗಿ ಸುದ್ದಿಗಾರರು ಕೇಳಿದ್ದಕ್ಕೆ ಉತ್ತರಿಸಿದ ಅವರು, ಈ ವಿಚಾರ ನನಗೆ ಗೊತ್ತಿಲ್ಲ. ನಾನು ಈ ಬಗ್ಗೆ ಹಿಂದುಳಿದ ವರ್ಗ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರೊಂದಿಗೆ ಮಾತನಾಡಿದ್ದು, ಈ ವರದಿಗೆ ಕಾರ್ಯದರ್ಶಿಗಳ ಸಹಿ ಇಲ್ಲವೆಂಬ ಮಾಹಿತಿ ಪಡೆದಿದ್ದೇನೆ. ಕಾರ್ಯದರ್ಶಿಗಳ ಸಹಿ ಇಲ್ಲದೇ ಅದು ಹೇಗೆ ಸಿಂಧುವಾಗುತ್ತದೆ ಎಂಬ ಪ್ರಶ್ನೆ ಉದ್ಭವಿಸುತ್ತದೆ ಎಂದು ತಿಳಿಸಿದರು.