ಜೆಡಿಎಸ್‌ನವರು ಅತ್ತರೆ ಅಳಲಿ, ಕುಣಿದರೆ ಕುಣಿಯಲಿ, ನಮ್ಮ ಪಾಡಿಗೆ ನಾವಿರೋಣ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮಾಜಿ ಪ್ರಧಾನಿ ದೇವೇಗೌಡರಿಗೆ ತಿರುಗೇಟು ನೀಡಿದ್ದಾರೆ.
ಚನ್ನಪಟ್ಟಣ (ನ.09): ಜೆಡಿಎಸ್‌ನವರು ಅತ್ತರೆ ಅಳಲಿ, ಕುಣಿದರೆ ಕುಣಿಯಲಿ, ನಮ್ಮ ಪಾಡಿಗೆ ನಾವಿರೋಣ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮಾಜಿ ಪ್ರಧಾನಿ ದೇವೇಗೌಡರಿಗೆ ತಿರುಗೇಟು ನೀಡಿದ್ದಾರೆ. ತಾಲೂಕಿನ ಚಕ್ಕೆರೆ, ಹೊನ್ನನಾಯಕನಹಳ್ಳಿಯಲ್ಲಿ ಕಾಂಗ್ರೆಸ್ ಪರ ಅವರು ಭರ್ಜರಿ ಪ್ರಚಾರ ನಡೆಸಿದರು. ‘ಕೊತ್ವಾಲ್ ನ ಹತ್ತಿರ 100ರು.ಗೆ ಕೆಲಸ ಮಾಡುತ್ತಿದ್ದ ಡಿಕೆಶಿ, ರೈತನಿಗೆ ನೋವಾದರೆ ಎಂದಾದರೂ ಕಣ್ಣೀರು ಹಾಕಿದ್ದಾರಾ?’ ಎಂಬ ದೇವೇಗೌಡರ ಟೀಕೆಗೆ ತಿರುಗೇಟು ನೀಡಿ, ಜೆಡಿಎಸ್‌ನವರು ಅತ್ತರೆ ಅಳಲಿ, ಕುಣಿದರೆ ಕುಣಿಯಲಿ, ನಮ್ಮ ಪಾಡಿಗೆ ನಾವಿರೋಣ ಎಂದರು.
ದೇವೇಗೌಡರೆ, ನಾನು ನಿಮ್ಮ ಹಾಗೂ ನಿಮ್ಮ ಜಮೀನಿನ ವಿಚಾರಗಳನ್ನು ಈಗ ಮಾತನಾಡಲು ಹೋಗುವುದಿಲ್ಲ. ಚುನಾವಣೆಗಾಗಿ ನಿಮ್ಮನ್ನು ಟೀಕಿಸುವುದಿಲ್ಲ. ನಿಮ್ಮ ವಯಸ್ಸಿಗೆ ನಾನು ಗೌರವ ನೀಡುತ್ತೇನೆ. ಬಡವರಿಗೆ ಆಗಿರುವ ಮೋಸದ ಬಗ್ಗೆ ಧ್ವನಿ ಎತ್ತಲು ನಾನು ಈ ಪ್ರಶ್ನೆ ಕೇಳಬೇಕಾಗಿದೆ ಎಂದರು.
undefined
ಕಾರ್ಯಕರ್ತರ ಪರಿಸ್ಥಿತಿ ಏನು?: ನನ್ನ ಮೊಮ್ಮಗನ ಪಟ್ಟಾಭಿಷೇಕ ಮಾಡುವವರೆಗೂ ನಾನು ಬದುಕಿರುತ್ತೇನೆ ಎಂದು ದೇವೇಗೌಡರು ಹೇಳಿದ್ದಾರೆ. ಬಹಳ ಸಂತೋಷ, ಆದರೆ, ನಿಮಗಾಗಿ ದುಡಿದ ಕಾರ್ಯಕರ್ತರ ಪರಿಸ್ಥಿತಿ ಏನಾಗಬೇಕು? ಕುಮಾರಸ್ವಾಮಿಯವರು ಕ್ಷೇತ್ರದ ಒಬ್ಬ ಕಾರ್ಯಕರ್ತನಿಗೆ ಯಾವುದಾದರೂ ಅಧಿಕಾರ ಕೊಟ್ಟಿದ್ದಾರಾ? ಎಂದು ಪ್ರಶ್ನಿಸಿದರು.
ಇನ್ನೂ ಮೂರೂವರೆ ವರ್ಷ ನಾನೇ ಸಿಎಂ: ಸಿಬಿಐ, ಇ.ಡಿ, ಐಟಿ ಬಳಸಿ ನನ್ನ ವಿರುದ್ಧ ಷಡ್ಯಂತ್ರ ಎಂದ ಸಿದ್ದರಾಮಯ್ಯ
ಯೋಗೇಶ್ವರ್ ಅವರು ಕ್ಷೇತ್ರದಲ್ಲಿ ನೀರಾವರಿ ಯೋಜನೆ ಜಾರಿಗೊಳಿಸಿ ರೈತರಿಗೆ ನೆರವಾಗಿದ್ದಾರೆ. ಸತ್ತೇಗಾಲದಿಂದ ನೀರು ತರುವ ಯೋಜನೆ ಮಾಡುತ್ತಿದ್ದೇವೆ. ಇಂತಹ ಒಂದೇ ಒಂದು ಕಾರ್ಯಕ್ರಮವನ್ನು ನೀವು ಮಾಡಿದ್ದೀರಾ?. ಕ್ಷೇತ್ರಕ್ಕೆ ಇಂತಹ ಕಾರ್ಯಕ್ರಮವನ್ನು ನಾವು ಕೊಟ್ಟಿದ್ದೇವೆ ಎಂದು ನೀವು ಹೇಳಿದರೇ ಈ ಕೂಡಲೇ ನಾನು ಈ ಚುನಾವಣಾ ಪ್ರಚಾರ ನಿಲ್ಲಿಸಿ ಇಲ್ಲಿಂದ ಹೊರಟು ಹೋಗುತ್ತೇನೆ ಎಂದು ಸವಾಲು ಹಾಕಿದರು.