ಜೆಡಿಎಸ್‌ ನಾಯಕರು ಗೋಡಂಬಿ, ದ್ರಾಕ್ಷಿ ತಿನ್ನಲು ಬಂದಿದ್ದರಾ?: ಡಿ.ಕೆ.ಶಿವಕುಮಾರ್‌

By Kannadaprabha News  |  First Published Jul 17, 2024, 4:28 AM IST

ಕಾವೇರಿ ನೀರು ಬಿಡುಗಡೆ ವಿಚಾರವಾಗಿ ಸರ್ಕಾರ ನಡೆಸಿದ ಸರ್ವ ಪಕ್ಷ ಸಭೆ ಕುರಿತು ವ್ಯಂಗ್ಯವಾಡಿದ್ದ ಎಚ್‌.ಡಿ. ಕುಮಾರಸ್ವಾಮಿ ಹೇಳಿಕೆ ಕುರಿತಂತೆ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್‌, ಕುಮಾರಸ್ವಾಮಿ ಅವರಿಗೆ ಹಿಟ್‌ ಆ್ಯಂಡ್‌ ರನ್‌ ಮಾಡುವುದು ಬಿಟ್ಟರೆ ಕಾವೇರಿ ನೀರು, ರೈತರ ಹಿತ, ರಾಜ್ಯದ ಹಿತದ ಬಗ್ಗೆ ಕಿಂಚಿತ್ತೂ ಕಾಳಜಿಯಿಲ್ಲ ಎಂದು ಕಿಡಿಕಾರಿದರು.
 


ಬೆಂಗಳೂರು (ಜು.17): ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಸಿನೆಮಾ ಶೈಲಿಯಲ್ಲಿ ಮಾತನಾಡುತ್ತಾರೆ. ಸರ್ವ ಪಕ್ಷ ಸಭೆ ಬಗ್ಗೆ ಗೋಡಂಬಿ, ದ್ರಾಕ್ಷಿ ತಿನ್ನಲು ಹೋಗಬೇಕಾ ಎಂದು ವ್ಯಂಗ್ಯವಾಡಿರುವ ಕುಮಾರಸ್ವಾಮಿ ಅವರು, ತಮ್ಮ ಪಕ್ಷದ ನಾಯಕರನ್ನು ಸಭೆಗೆ ಕಳುಹಿಸಿದ್ದು ಗೋಡಂಬಿ, ದ್ರಾಕ್ಷಿ ತಿನ್ನಲಿಕ್ಕಾ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಪ್ರಶ್ನಿಸಿದ್ದಾರೆ.

ಕಾವೇರಿ ನೀರು ಬಿಡುಗಡೆ ವಿಚಾರವಾಗಿ ಸರ್ಕಾರ ನಡೆಸಿದ ಸರ್ವ ಪಕ್ಷ ಸಭೆ ಕುರಿತು ವ್ಯಂಗ್ಯವಾಡಿದ್ದ ಎಚ್‌.ಡಿ. ಕುಮಾರಸ್ವಾಮಿ ಹೇಳಿಕೆ ಕುರಿತಂತೆ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಡಿ.ಕೆ. ಶಿವಕುಮಾರ್‌, ಕುಮಾರಸ್ವಾಮಿ ಅವರಿಗೆ ಹಿಟ್‌ ಆ್ಯಂಡ್‌ ರನ್‌ ಮಾಡುವುದು ಬಿಟ್ಟರೆ ಕಾವೇರಿ ನೀರು, ರೈತರ ಹಿತ, ರಾಜ್ಯದ ಹಿತದ ಬಗ್ಗೆ ಕಿಂಚಿತ್ತೂ ಕಾಳಜಿಯಿಲ್ಲ ಎಂದು ಕಿಡಿಕಾರಿದರು.

Tap to resize

Latest Videos

ಕುಮಾರಸ್ವಾಮಿ ಅವರು ನನ್ನ ಮೇಲೆ ವೈಯಕ್ತಿಕ ದಾಳಿ ಮಾಡುತ್ತಿರುವುದಕ್ಕೆ ಅಸೂಯೆಯೇ ಕಾರಣ. ಮೊದಲಿನಿಂದಲೂ ಇದನ್ನೇ ಮಾಡಿಕೊಂಡು ಬಂದಿದ್ದಾರೆ. ಎಲ್ಲ ವಿಚಾರವನ್ನು ಬಹಿರಂಗವಾಗಿ ಚರ್ಚೆ ಮಾಡೋಣ ಬನ್ನಿ ಎಂದು ಕರೆಯುತ್ತಿದ್ದೇನೆ. ಕಳೆದ ಬಾರಿ ಅಧಿವೇಶನದಲ್ಲಿ ಚರ್ಚೆಗೆ ಕರೆದಾಗಲೂ ಅವರು ಬರಲಿಲ್ಲ ಎಂದರು.

ಗೂಂಡಾ ವರ್ತನೆ, ಟಾರ್ಗೆಟ್ ರಾಜಕಾರಣ ಕಾಂಗ್ರೆಸ್ ಸಂಸ್ಕೃತಿ: ನಿಖಿಲ್ ಕುಮಾರಸ್ವಾಮಿ

ನಾನು ಯಾವುದೇ ತಪ್ಪು ಮಾಡಿಲ್ಲ: ತಮ್ಮ ವಿರುದ್ಧದ ಸಿಬಿಐ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದ ಕುರಿತು ಪ್ರತಿಕ್ರಿಯಿಸಿದ ಡಿ.ಕೆ. ಶಿವಕುಮಾರ್‌, ಪ್ರಕರಣವನ್ನು ಈಗಾಗಲೇ ಲೋಕಾಯುಕ್ತ ಸಂಸ್ಥೆಗೆ ನೀಡಲಾಗಿದೆ. ಲೋಕಾಯುಕ್ತ ತನಿಖೆ ನಡೆಸುತ್ತಿದೆ. ಆದರೂ, ಸಿಬಿಐ ತಮ್ಮ ವ್ಯಾಪ್ತಿ ಮೀರಿ ಪ್ರಕರಣದ ತನಿಖೆ ನಡೆಸಲು ಮುಂದಾಗಿರುವುದು ಏಕೆ ಎಂಬುದು ತಿಳಿದಿಲ್ಲ. ನಾನು ಯಾವುದೇ ತಪ್ಪು ಮಾಡಿಲ್ಲ. ತನಿಖೆ ಹೆಸರಲ್ಲಿ ನನ್ನ ಜತೆ ವ್ಯವಹಾರ ಮಾಡಿದವರಿಗೂ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದರು.

click me!