ಗ್ಯಾರಂಟಿ ಟೀಕಿಸಿದ್ದ ಪ್ರಧಾನಿ ಮೋದಿಯಿಂದ್ಲೇ ಈಗ ಗ್ಯಾರಂಟಿ ಪ್ರಚಾರ: ಡಿಕೆಶಿ ವ್ಯಂಗ್ಯ

By Kannadaprabha NewsFirst Published Jan 17, 2024, 9:24 AM IST
Highlights

‘ಪ್ರಧಾನಿ ಮೋದಿ ನಮ್ಮ ಗ್ಯಾರಂಟಿ ಯೋಜನೆಗಳನ್ನು ಟೀಕಿಸುತ್ತಿದ್ದರು. ಆದರೆ, ಈಗ ಅವರೇ ಗ್ಯಾರಂಟಿ ಪ್ರಚಾರಕ್ಕೆ ಇಳಿದಿದ್ದಾರೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ವ್ಯಂಗ್ಯವಾಡಿದರು. 

ಬೆಂಗಳೂರು (ಜ.17): ‘ಪ್ರಧಾನಿ ಮೋದಿ ನಮ್ಮ ಗ್ಯಾರಂಟಿ ಯೋಜನೆಗಳನ್ನು ಟೀಕಿಸುತ್ತಿದ್ದರು. ಆದರೆ, ಈಗ ಅವರೇ ಗ್ಯಾರಂಟಿ ಪ್ರಚಾರಕ್ಕೆ ಇಳಿದಿದ್ದಾರೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ವ್ಯಂಗ್ಯವಾಡಿದರು. ನಗರದಲ್ಲಿ ಸುದ್ದಿಗಾರರು ಪ್ರಧಾನಿ ನರೇಂದ್ರ ಮೋದಿ ಅವರ ರಾಜ್ಯ ಪ್ರವಾಸದ ಪ್ರಶ್ನಿಸಿದಾಗ, ‘ಅವರ ಪಕ್ಷ, ಅವರ ಕರ್ತವ್ಯ. ಅವರು ಏನಾದರೂ ಮಾಡಿಕೊಳ್ಳಲಿ. ನಮ್ಮ ಗ್ಯಾರಂಟಿ ಯೋಜನೆಗಳ ಬಗ್ಗೆ ಟೀಕೆ ಮಾಡುತ್ತಿದ್ದವರು, ಈಗ ಅವರೇ ಗ್ಯಾರಂಟಿ ಪ್ರಚಾರ ಪಡೆಯುತ್ತಿದ್ದಾರೆ ಎಂದರು. ಅನಂತ್‌ಕುಮಾರ್‌ ಹೆಗಡೆ ಹೇಳಿಕೆಗೆ ಬಿಜೆಪಿ ನಾಯಕರು, ಕಾರ್ಯಕರ್ತರೇ ಅಸಮಾಧಾನ ವ್ಯಕ್ತಪಡಿಸಿ ಅವರ ಹೇಳಿಕೆ ಸರಿಯಿಲ್ಲ ಎನ್ನುತ್ತಿದ್ದಾರೆ. ಅವರೇ ಉತ್ತರ ಕೊಡುತ್ತಿದ್ದಾರೆ. ಹೀಗಾಗಿ ನಾನು ಪುನಃ ಉತ್ತರಿಸುವ ಅಗತ್ಯವಿಲ್ಲ ಎಂದು ಹೇಳಿದರು.

ಅನಂತ ಹೆಗಡೆ ಮಾನಸಿಕ ಆರೋಗ್ಯದ ಕಡೆ ಗಮನ ನೀಡಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಮಾತನಾಡಿರುವ ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ಅವರಿಗೆ ಮಾನಸಿಕ ಸ್ಥಿಮಿತತೆ ಇಲ್ಲ. ಅವರು ಇನ್ನಾದರೂ ತಮ್ಮ ಮಾನಸಿಕ ಆರೋಗ್ಯದ ಬಗ್ಗೆ ಕಾಳಜಿ ವಹಿಸಲಿ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾನಸಿಕ ಸ್ಥಿಮಿತ ಇರುವವರು ಈ ರೀತಿ ಮಾತನಾಡುವುದಿಲ್ಲ. ಅವರ ಮಾತು ತಪ್ಪು ಎಂದು ಅವರ ನಾಯಕರುಗಳಿಗೆ ಅರ್ಥವಾಗಿದೆ. ಇದು ಉತ್ತಮ ಬೆಳವಣಿಗೆ. ಅನಂತ ಕುಮಾರ್ ಹೆಗಡೆ ಅವರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಲಿ ಎಂದು ಹೇಳಿದರು.

Latest Videos

ಕಾಂಗ್ರೆಸ್ ಗ್ಯಾರಂಟಿಗಳ ಲಾಭ ಪಡೆಯೋರಲ್ಲಿ ಬಿಜೆಪಿಗರೇ ಮೊದಲು: ಸಚಿವ ಮಧು ಬಂಗಾರಪ್ಪ

ಬೊಮ್ಮನಹಳ್ಳಿಯಲ್ಲಿ ‘ಬಾಗಿಲಿಗೆ ಸರ್ಕಾರ’ ಯಶಸ್ವಿ: ಬಾಗಿಲಿಗೆ ಬಂತು ಸರ್ಕಾರ ಸೇವೆಗೆ ಇರಲಿ ಸಹಕಾರ ಘೋಷ ವಾಕ್ಯದಡಿಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ನಡೆಸುತ್ತಿರುವ ಕಾರ್ಯಕ್ರಮ ಜರಗನಹಳ್ಳಿ ಸರ್ಕಾರಿ ಆಟದ ಮೈದಾನದಲ್ಲಿ ಯಶಸ್ವಿಯಾಗಿ ನಡೆಯಿತು. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಬೆಂಗಳೂರು ಗ್ರಾಮಾಂತರ ಲೋಕಸಭಾ ಸಂಸದ ಡಿ.ಕೆ.ಸುರೇಶ್, ಸ್ಥಳೀಯ ಶಾಸಕ ಎಂ.ಕೃಷ್ಣಪ್ಪ, ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್, ಬೊಮ್ಮನಹಳ್ಳಿ ವಲಯದ ಜಂಟಿ ಆಯುಕ್ತ ಅಜಿತ್, ಕಾಂಗ್ರೆಸ್ ಮುಖಂಡರಾದ ಉಗ್ರಪ್ಪ, ಆರ್.ಕೆ.ರಮೇಶ್, ಜಿಲ್ಲಾಧ್ಯಕ್ಷ ಓ.ಮಂಜುನಾಥ್, ಬೆಂಗಳೂರು ನಗರ ವ್ಯಾಪ್ತಿಯ ಬಿಡಿಎ, ಬಿಬಿಎಂಪಿ, ಬಿಎಂಟಿಸಿ, ಬಿಎಂಆರ್‌ಸಿಎಲ್, ಬಿಎಂಆರ್‌ಡಿಎ, ಕಂದಾಯ, ಬೆಸ್ಕಾಂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

‘ಸಬ್ ಕಾ ಸಾಥ್-ಸಬ್ ಕಾ ವಿಕಾಸ್’ ಪ್ರತಿಪಾದಕರಿಂದ ಧರ್ಮ ತಾರತಮ್ಯ: ಸಿದ್ದರಾಮಯ್ಯ

ಸುಮಾರು 5 ಸಾವಿರಕ್ಕೂ ಹೆಚ್ಚು ಜನರು ಸಮಸ್ಯೆಗಳನ್ನು ಹೊತ್ತು ತಂದಿದ್ದರು. ವಿವಿಧ ಇಲಾಖೆಗಳ 25ಕ್ಕೂ ಹೆಚ್ಚಿನ ಕೌಂಟರ್ ತೆರೆಯಲಾಗಿದ್ದು, ಅಂಗವಿಕಲರಿಗೆ ಹಾಗೂ ಹಿರಿಯ ನಾಗರಿಕರಿಗಾಗಿ ಪ್ರತ್ಯೇಕವಾಗಿ ಮಾಡಲಾಗಿರುವ ಆಸನದ ವ್ಯವಸ್ಥೆ ಬಳಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ವಯಂ ತೆರಳಿ ಅಹವಾಲು ಸ್ವೀಕರಿಸಿದರು. ಅಲ್ಲದೆ ನೋಂದಣಿ ಮಾಡಿಸಿಕೊಂಡ ಪ್ರತಿಯೊಬ್ಬರಿಂದ ಸಮಸ್ಯೆ ಆಲಿಸಿ ಕೆಲವಕ್ಕೆ ಸ್ಥಳದಲ್ಲೇ ಪರಿಹಾರ ಒದಗಿಸಿದರು. ಇದೇ ಸಂದರ್ಭದಲ್ಲಿ ಸಾವಿರಾರು ಜನರು ವಾಸಕ್ಕೆ ಮನೆಯಿಲ್ಲ, ಉದ್ಯೋಗವಿಲ್ಲ, ಚಿಕಿತ್ಸೆಗಾಗಿ, ಮೂಲ ಸೌಲಭ್ಯ ಕೊರೆತೆ, ಬಹುಮಹಡಿ ಕಟ್ಟಡಕ್ಕೆ ₹1 ಲಕ್ಷ ನೀಡಿ 6 ವರ್ಷವಾದರೂ ಪ್ಲಾಟ್ ಸಿಕ್ಕಿಲ್ಲ, ವಿಧವಾ ವೇತನ, ವೃದ್ಧಾಪ್ಯ ವೇತನ, ಪಿಂಚಣಿ, ಸರ್ಕಾರಿ ಅಧಿಕಾರಿಗಳ ಬೇಜವಾಬ್ದಾರಿತನ, ಅನೇಕ ಸಮಸ್ಯೆಗಳನ್ನು ಡಿಕೆಶಿ ಅವರ ಮುಂದೆ ತೋಡಿಕೊಂಡರು.

click me!