
ಬೆಂಗಳೂರು (ಮೇ.19): ಬಿಡಿಎ ವಾಣಿಜ್ಯ ಸಂಕೀರ್ಣವನ್ನು ಖಾಸಗಿಯವರಿಗೆ ಭೋಗ್ಯಕ್ಕೆ ನೀಡುವುದು ಬಿಜೆಪಿ ಸರ್ಕಾರದ ತೀರ್ಮಾನ. ಈ ಪ್ರಕ್ರಿಯೆ ಯಾರ ಕಾಲದಲ್ಲಿ ಆರಂಭವಾಗಿದ್ದು ಎಂಬುದನ್ನು ಮರೆತು ವಿಧಾನಸಭಾ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಮಾತನಾಡುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಬಿಡಿಎ ಸಂಕೀರ್ಣಗಳನ್ನು ಖಾಸಗಿಯವರಿಗೆ ನೀಡುತ್ತಿರುವ ಬಗ್ಗೆ ಶಿವಕುಮಾರ್ ಮಾತನಾಡಿದರು.
ಈ ವಿಚಾರವಾಗಿ ಮಾತನಾಡುತ್ತಿರುವ ಅಶೋಕ್ ಅವರು ಈ ಪ್ರಕ್ರಿಯೆ ಯಾರ ಕಾಲದಲ್ಲಿ ಆರಂಭವಾಗಿದೆ, ಇದಕ್ಕೆ ಅನುಮತಿ ಕೊಟ್ಟವರು ಯಾರು ಎಂಬುದನ್ನು ಮರೆತಿದ್ದಾರೆ. ನನ್ನ ಬಳಿ ಈ ಬಗ್ಗೆ ಎಲ್ಲಾ ಮಾಹಿತಿ ಇದೆ. ಬೊಮ್ಮಾಯಿ ಅವರು ಈ ಹಿಂದೆ ಒಪ್ಪಂದ ಮಾಡಿಕೊ೦ಡು ಟೆಂಡರ್ ಕರೆದಿದ್ದರು. ಯಡಿಯೂರಪ್ಪ ಅವರು ಇದನ್ನು ತಡೆಹಿಡಿಯಲು ಹೇಳಿದ್ದರು. ನಂತರ ಬೊಮ್ಮಾಯಿ ಅವರು ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿ ಮಾಡಿ ಒಪ್ಪಂದ ಮಾಡಿಕೊಂಡಿಯಾಗಿದೆ. ನಮಗೆ ನಷ್ಟವಾಗುತ್ತಿದ್ದು, ಈ ಪ್ರಕ್ರಿಯೆ ಮುಂದುವರಿಸಬೇಕು ಎಂದು ಪತ್ರ ಕೂಡ ಬರೆದಿದ್ದಾರೆ ಎಂದು ಹೇಳಿದರು.
ಭಾಷೆ ಉಳಿಯಬೇಕಾದರೆ ಅಂತರ್ಜಾಲದಲ್ಲಿ ಕನ್ನಡದಲ್ಲಿ ಮಾಹಿತಿ ಸಿಗಬೇಕು: ಯು.ಬಿ.ಪವನಜ
ಬಿಜೆಪಿ ಅವರ ಕಾಲದಲ್ಲಿ ಆಗಿರುವ ಕ್ರಮ ಈಗ ಮುಂದುವರಿಯುತ್ತಿದೆ. ಈಗ ಭೋಗ್ಯಕ್ಕೆ ಕೊಡಲಾಗಿದ್ದು, ಸರ್ಕಾರಕ್ಕೆ ಆದಾಯ ಬರುವಂತೆ ವ್ಯವಸ್ಥೆ ಮಾಡಲಾಗಿದೆ. ಈ ವಿಚಾರದ ಬಗ್ಗೆ ಪ್ರತ್ಯೇಕವಾಗಿ ಹೇಳಿಕೆ ಬಿಡುಗಡೆ ಮಾಡುತ್ತೇನೆ. ಈ ವಿಚಾರವಾಗಿ ಅಶೋಕ್ ಅವರಿಗೆ ಎಷ್ಟು ಮಾಹಿತಿ ಇದೆಯೋ ಇಲ್ಲವೋ ಗೊತ್ತಿಲ್ಲ. ಅವರಿಗೆ ಸಂಪೂರ್ಣ ಮಾಹಿತಿ ರವಾನಿಸುತ್ತೇನೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.