ಎಚ್.ಡಿ.ಕುಮಾರಸ್ವಾಮಿ ಅವರು ಸರ್ಕಾರಿ ಭೂಮಿ ಒತ್ತುವರಿ ಮಾಡಿಕೊಂಡಿಲ್ಲ ಎಂದಾದರೆ ಅವರೇಕೆ ಗಾಬರಿಯಾಗಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಛೇಡಿಸಿದ್ದಾರೆ.
ನವದೆಹಲಿ (ಮಾ.20): ಎಚ್.ಡಿ.ಕುಮಾರಸ್ವಾಮಿ ಅವರು ಸರ್ಕಾರಿ ಭೂಮಿ ಒತ್ತುವರಿ ಮಾಡಿಕೊಂಡಿಲ್ಲ ಎಂದಾದರೆ ಅವರೇಕೆ ಗಾಬರಿಯಾಗಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಛೇಡಿಸಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ ಕಾಂಗ್ರೆಸ್‌ಗೆ ನಾನೇ ಟಾರ್ಗೆಟ್, ದ್ವೇಷದ ರಾಜಕಾರಣ ಮಾಡಲಾಗುತ್ತಿದೆ ಎನ್ನುವ ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪದ ಬಗ್ಗೆ ಸುದ್ದಿಗಾರರು ಕೇಳಿದಾಗ, ‘ನಾನು ಹಾಗೂ ಸಿದ್ದರಾಮಯ್ಯ ಎಂದಿಗೂ ದ್ವೇಷದ ರಾಜಕಾರಣ ಮಾಡಿಲ್ಲ. ನ್ಯಾಯಾಲಯದ ಸೂಚನೆಯಂತೆ ಕಾನೂನು ಪ್ರಕಾರ ಕೆಲಸ ಮಾಡಲಾಗಿದೆ.
ಭೂ ಒತ್ತುವರಿ ಬಗ್ಗೆ ಸರಿಯಾಗಿ ಕ್ರಮ ತೆಗೆದುಕೊಂಡಿಲ್ಲ ಎಂದು ನ್ಯಾಯಲಯ ಅಧಿಕಾರಿಗಳಿಗೆ ಛೀಮಾರಿ ಹಾಕಿದೆ. ನ್ಯಾಯಾಲಯ ಗಡುವು ನೀಡಿದ ಕಾರಣ ಅಧಿಕಾರಿಗಳು ಹೋಗಿ ಅಳತೆ ಮಾಡಿದ್ದಾರೆ ಎಂದರು. ಹೆಚ್ಚುವರಿ ಭೂಮಿಯಿದ್ದರೆ ವಾಪಸ್ ತೆಗೆದುಕೊಳ್ಳಿ ಎಂದು ಏಕೆ ಪತ್ರ ಬರೆದಿದ್ದಾರೆ? ಎಷ್ಟು ಭೂಮಿ ಒತ್ತುವರಿ ಮಾಡಿಕೊಂಡಿದ್ದಾರೆ ಎಂಬುದು ತಿಳಿದಿಲ್ಲ. ಕುಮಾರಸ್ವಾಮಿ ಅವರ ಜಮೀನು ಇದ್ದರೆ ಉಳಿದುಕೊಳ್ಳುತ್ತದೆ. ಇಲ್ಲದಿದ್ದರೇ ಬಿಟ್ಟುಕೊಡಬೇಕಾಗುತ್ತದೆ ಎಂದು ಖಾರವಾಗಿ ಪ್ರತಿಕ್ರಿಯಿಸಿದರು.
ಕಾಂಗ್ರೆಸ್ ಹೈಕಮಾಂಡ್ ಒಪ್ಪಿದರಷ್ಟೇ ಭಾಗಿ: ಲೋಕಸಭಾ ಕ್ಷೇತ್ರ ಮರುವಿಂಗಡಣೆ ವಿರುದ್ಧದ ಹೋರಾಟದ ಕುರಿತು ತಮಿಳುನಾಡು ಸರ್ಕಾರ ನೀಡಿರುವ ಆಹ್ವಾನದ ಕುರಿತು ಹೈಕಮಾಂಡ್ ನಾಯಕರೊಂದಿಗೆ ಚರ್ಚೆ ನಡೆಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ತಮಿಳುನಾಡಿನ ಅರಣ್ಯ ಸಚಿವ ಪೊನ್ನುಮುಡಿ, ರಾಜ್ಯಸಭೆ ಸದಸ್ಯ ಎಂ.ಎಂ.ಅಬ್ದುಲ್ಲ ಅವರನ್ನು ವಿಧಾನಸೌಧದಲ್ಲಿ ಭೇಟಿಯಾಗಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಲೋಕಸಭೆ ಕ್ಷೇತ್ರಗಳ ಮರುವಿಂಗಡಣೆ ಹೆಸರಲ್ಲಿ ದಕ್ಷಿಣ ಭಾರತದ ತಮಿಳುನಾಡು,
ಹಿಂದೂ ಯುವತಿಯರ ಹತ್ಯೆ ಮಾಡುವವರ ಗುಂಡಿಕ್ಕಿ ಕೊಲ್ಲುವ ಕಾಯ್ದೆ ಬರಲಿ: ಕೆ.ಎಸ್.ಈಶ್ವರಪ್ಪ
ಕರ್ನಾಟಕ, ಕೇರಳ, ಆಂಧ್ರಪ್ರದೇಶ, ತೆಲಂಗಾಣ ರಾಜ್ಯಗಳ ಲೋಕಸಭಾ ಕ್ಷೇತ್ರಗಳ ಸಂಖ್ಯೆ ಕಡಿಮೆ ಮಾಡುವ ಷಡ್ಯಂತ್ರ ನಡೆಸಿರುವ ಆರೋಪ ಎದುರಾಗಿದೆ. ಅದರ ವಿರುದ್ಧ ಹೋರಾಡಲು ತಮಿಳುನಾಡಿನ ಮುಖ್ಯಮಂತ್ರಿ ಸ್ಟಾಲಿನ್ ಅವರು ಜಂಟಿ ಹೋರಾಟ ಸಮಿತಿ ರಚನೆಗೆ ಮುಂದಾಗಿದ್ದಾರೆ. ಇದೇ ತಿಂಗಳು 22ರಂದು ಚೆನ್ನೈನಲ್ಲಿ ಸಭೆ ನಡೆಯಲಿದ್ದು, ಅದರ ಕುರಿತು ಹೈಕಮಾಂಡ್ ನಾಯಕರೊಂದಿಗೆ ಚರ್ಚೆ ನಡೆಸಿ ಅವರ ಮಾರ್ಗದರ್ಶನದಂತೆ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.