ಕೆಲ ಸಚಿವರಿಗೂ ಎರಡು ವರ್ಷದ ನಂತರ ಸಚಿವ ಸ್ಥಾನ ಬಿಡಬೇಕಾಗುತ್ತದೆ ಎಂದು ಹೇಳಿದ್ದೆವು. ಆದರೆ, ಆ ವಿಚಾರ ಈಗ ಬೇಡ. ಏಕೆಂದರೆ, ಸಂಪುಟ ವಿಸ್ತರಣೆ ಇನ್ನೂ ದೂರವಿದೆ ಎಂದು ಹೇಳಿದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಬೆಂಗಳೂರು(ನ.27): ಕೆಲವು ಸಚಿವರಿಗೆ ಎರಡು ವರ್ಷದ ನಂತರ ಸಚಿವ ಸ್ಥಾನ ಬಿಟ್ಟುಕೊಡಬೇಕು ಎಂದು ಸಂದೇಶ ನೀಡಿದ್ದೇವು. ಆದರೆ, ಈಗ ಆ ವಿಚಾರ ಬೇಡ. ಏಕೆಂದರೆ, ಸಚಿವ ಸಂಪುಟ ವಿಸ್ತರಣೆ ಇನ್ನೂ ದೂರವಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಮಂಗಳವಾರ ಕೆಪಿಸಿಸಿ ಕಚೇರಿಯಲ್ಲಿ ಸಂವಿಧಾನ ಅಂಗೀಕಾರ ದಿನದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದ ಅವರು, ಪಂಚಾಯತಿ ಸದಸ್ಯರನ್ನು ನಾವು ಒಂದು ಅಥವಾ ಎರಡು ವರ್ಷ ಅಧ್ಯಕ್ಷರಾಗಿ ಮಾಡಿರುತ್ತೇವೆ. ಆದರೆ, ಅವರಿಂದ ರಾಜೀನಾಮೆ ಕೊಡಿಸಬೇಕಾದರೆ ದೇವರೆ ನಮ್ಮನ್ನು ಕಾಪಾಡಬೇಕು ಎಂದರು.
55 ಜನ ಕಾಂಗ್ರೆಸ್ ಶಾಸಕರಿಂದ ಸಿಎಂ ಭೇಟಿ, ಅಹವಾಲು ಸಲ್ಲಿಕೆ
ಜತೆಗೆ, ಕೆಲ ಸಚಿವರಿಗೂ ಎರಡು ವರ್ಷದ ನಂತರ ಸಚಿವ ಸ್ಥಾನ ಬಿಡಬೇಕಾಗುತ್ತದೆ ಎಂದು ಹೇಳಿದ್ದೆವು. ಆದರೆ, ಆ ವಿಚಾರ ಈಗ ಬೇಡ. ಏಕೆಂದರೆ, ಸಂಪುಟ ವಿಸ್ತರಣೆ ಇನ್ನೂ ದೂರವಿದೆ ಎಂದು ಹೇಳಿದರು.
ಸೋನಿಯಾ ಗಾಂಧಿ ಅವರು ಬಯಸಿದ್ದರೆ ಎರಡು ಅವಧಿಗೆ ಪ್ರಧಾನಮಂತ್ರಿ ಆಗಬಹುದಿತ್ತು. ಆದರೆ, ಅವರು ಆರ್ಥಿಕ ತಜ್ಞ ಮನಮೋಹನ ಸಿಂಗ್ ಅವರನ್ನು ಪ್ರಧಾನಿ ಮಾಡಿದರು ಎಂದು ಹಳೆಯ ಮೆಲುಕು ಹಾಕಿದರು.
ಸಚಿವ ಸಂಪುಟ ಪುನರ್ ರಚನೆ ಬಗ್ಗೆ ಮಹತ್ವದ ಮಾಹಿತಿ ಕೊಟ್ಟ ಸಿಎಂ ಸಿದ್ದರಾಮಯ್ಯ
ಮೈಸೂರು: ರಾಜ್ಯದಲ್ಲಿ ಸಚಿವ ಸಂಪುಟ ಪುನರ್ ರಚನೆ ಪ್ರಸ್ತಾಪ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದರು.
ಸುದ್ದಿಗಾರರ ಜತೆಗೆ ಮಾತ ನಾಡಿದ ಅವರು, ವಾಲ್ಮೀಕಿ ನಿಗಮದ ಅವ್ಯವಹಾರ ಪ್ರಕರಣದಲ್ಲಿ ಜೈಲುಪಾಲಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ನಾಗೇಂದ್ರ ಅವರನ್ನು ಮತ್ತೆ ಸಂಪುಟಕ್ಕೆ ಸೇರಿಸುವ ಕುರಿತು ಬೇಡಿಕೆ ಬಂದಿದೆ. ಉಪ ಚುನಾವಣೆ ಬಳಿಕ ಆ ಕುರಿತು ನೋಡೋಣ ಎಂದು ಹೇಳಿದ್ದೇನೆ. ಅದನ್ನೇ ಸಂಪುಟ ಪುನರ್ ರಚನೆ ಎಂದು ಹೇಳಬೇಡಿ ಎ೦ದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದರು.
ಡಿಸೆಂಬರಲ್ಲಿ ಸಂಪುಟ ಪುನಾರಚನೆ: ಪರಂ
ಬೆಂಗಳೂರು: ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಗೆ ಹೋಗಿದ್ದಾಗ ಸಚಿವ ಸಂಪುಟ ಪುನಾರಚನೆ ಕುರಿತು ಚರ್ಚೆ ನಡೆದಿತ್ತು. ಆಗ ಡಿಸೆಂಬರ್‌ನಲ್ಲಿ ಸಂಪುಟ ಪುನಾರಚನೆ ನಡೆಯಬಹುದು ಎಂಬ ಸುಳಿವು ಇತ್ತು. ಆದರೆ, ಈಗ ಏನಾಗಿದೆ ನನಗೆ ಗೊತ್ತಿಲ್ಲ. ಆ ಬಗ್ಗೆ ಮುಖ್ಯಮಂತ್ರಿ ಹಾಗೂ ಹೈಕಮಾಂಡ್ ನಾಯಕರು ನಿರ್ಧರಿಸುತ್ತಾರೆ ಎಂದು ಗೃಹ ಸಚಿವ ಡಾ| ಜಿ.ಪರಮೇಶ್ವರ್ ಹೇಳಿದ್ದಾರೆ. ಈ ವಿಚಾರದ ಕುರಿತು ಮುಖ್ಯಮಂತ್ರಿಯವರು ಉತ್ತರ ನೀಡಬೇಕು ಎಂದು ಹೇಳಿದ್ದರು.
ಶೀಘ್ರ ಸಂಪುಟ ಪುನಾರಚನೆ ಸರ್ಕಸ್?: 6-7 ಸಚಿವರ ಸ್ಥಾನಕ್ಕೆ ಕುತ್ತು
ಬೆಂಗಳೂರು: ಉಪ ಚುನಾವಣೆ ಗದ್ದಲ ಮುಗಿಯುತ್ತಿದ್ದಂತೆಯೇ ಆಡಳಿತಕ್ಕೆ ಚುರುಕು ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಸೆಂಬರ್ ಮಾಸದಲ್ಲಿ ಸಂಪುಟ ಪುನಾರಚನೆಗೆ ಕೈ ಹಾಕುವ ಹಾಗೂ ಆಡಳಿತ ಯಂತ್ರದಲ್ಲಿ ಭಾರಿ ಬದಲಾವಣೆ ತರುವ ಸಾಧ್ಯತೆಗಳಿವೆ.
ಮೂಲಗಳ ಪ್ರಕಾರ, ಪ್ರಸ್ತುತ ಸಚಿವ ಸಂಪುಟದಲ್ಲಿ ನಿಷ್ಕ್ರಿಯರಾಗಿರುವ ಹಾಗೂ ಭ್ರಷ್ಟಾಚಾರದ ಆರೋಪಕ್ಕೆ ಗುರಿಯಾಗಿರುವ ಆರೇಳು ಸಚಿವರ ಬದಲಾಯಿಸಿ, ಆ ಸ್ಥಾನಕ್ಕೆ ಅರ್ಹರನ್ನು ತರುವ ಚಿಂತನೆ ಸಿದ್ದರಾಮಯ್ಯ ಹೊಂದಿದ್ದಾರೆ.
ಇವರು ಔಟ್?:
ಹಾಲಿ ಸಂಪುಟದಲ್ಲಿ ತೀವ್ರ ಭ್ರಷ್ಟಾಚಾರ ಆರೋಪಕ್ಕೆ ಗುರಿಯಾಗಿರುವ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ, ನಿಷ್ಕ್ರಿಯರಾಗಿದ್ದಾರೆ ಎನ್ನಲಾದ ಎಸ್.ಎಸ್. ಮಲ್ಲಿಕಾರ್ಜುನ್, ಕೆ.ಎನ್. ರಾಜಣ್ಣ, ಬೋಸರಾಜು ಮೊದಲಾದ ಆರೇಳು ಸಚಿವರಿಗೆ ಕೊಕ್ ನೀಡುವ ಸಾಧ್ಯತೆಯಿದೆ ಎನ್ನಲಾಗಿದೆ.
ಲೋಕಸಭೆ ಚುನಾವಣೆ ಮುಗಿತ್ತಿದ್ದಂತೆ, ರಾಜ್ಯಕ್ಕೆ 3 ಡಿಸಿಎಂ ಕ್ಯಾತೆ ತೆಗೆದ ಸಚಿವ ಕೆ.ಎನ್. ರಾಜಣ್ಣ
ಈ ಪಟ್ಟಿಯಲ್ಲಿ ಖಾತೆಯನ್ನು ಸಮರ್ಪಕವಾಗಿ ನಿಭಾಯಿಸದ, ಭ್ರಷ್ಟಾಚಾರದ ಆರೋಪಗಳಿರುವ, ವಿವಾದಾತ್ಮಕ ಹೇಳಿಕೆ ನೀಡುತ್ತಾ ಸರ್ಕಾರ ಮತ್ತು ಪಕ್ಷದ ವರ್ಚಸ್ಸು ಕುಂದುವಂತೆ ಮಾಡಿದ ಸಚಿವರನ್ನು ಕೈಬಿಟ್ಟು ಹೊಸಬರನ್ನು ಸಂಪುಟಕ್ಕೆ ಸೇರಿಸಲು ಮುಹೂರ್ತ ನಿಗದಿ ಮಾಡಲಾಗಿದೆ.
ಸಂಪುಟ ಪುನಾರಚನೆಗೂ ಮುನ್ನ ವಾಲ್ಮೀಕಿ ಹಗರಣದಿಂದ ಬಿ. ನಾಗೇಂದ್ರ ದೋಷಮುಕ್ತರಾದರೆ ವಾಪಸು ಸಚಿವ ಸಂಪುಟ ಸೇರುವ ಲಕಣಗಳಿವೆ. ಹೊಸಬರಿಗೆ ಮಣೆ ಹಾಕಲು ಹೈಕಮಾಂಡ್ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ. ಇದಲ್ಲದೆ, ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಲು ಭಾರಿ ಆಡಳಿತಾತ್ಮಕ ಬದಲಾವಣೆ ಮಾಡುವ ಸಾಧ್ಯತೆಯೂ ಇದೆ. ಮುಖ್ಯವಾಗಿ ಮುಖ್ಯಮಂತ್ರಿ ಕಚೇರಿಯ ಅಧಿಕಾರಿ ವರ್ಗವನ್ನು ಬದಲಾಯಿಸುವ ಚಿಂತನೆ ಮುಖ್ಯಮಂತ್ರಿ ಯವರಿಗೆ ಇದೆ ಎಂದು ಮೂಲಗಳು ಹೇಳಿವೆ.