
ಬೆಂಗಳೂರು(ಸೆ.09): ‘ನಾನು ಆಪರೇಷನ್ ಹಸ್ತ, ಆಪರೇಷನ್ ಕಮಲ ಎರಡಕ್ಕೂ ವಿರೋಧಿ. ಯಾವುದೇ ಕಾರಣಕ್ಕೂ ಆಪರೇಷನ್ ಕೆಲಸಕ್ಕೆ ಮುಂದಾಗುವುದಿಲ್ಲ. ನಮ್ಮದೇನಿದ್ದರೂ ಕೋ-ಆಪರೇಷನ್. ನಾವು ಸ್ನೇಹದ ಹಸ್ತ ಚಾಚುತ್ತೇವೆ. ಯಾರಿಗೆ ಒಲವಿದೆಯೋ ಅವರ ಕೈ ಹಿಡಿದು ಹೆಜ್ಜೆ ಹಾಕುತ್ತೇವೆ. ಯಾರಾರಯರು ಪಕ್ಷ ಸೇರ್ಪಡೆಯಾಗುತ್ತಾರೆ ಎಂಬುದು ಒಳ್ಳೆಯ ಮುಹೂರ್ತ, ಲಗ್ನ ಕೂಡಿದಾಗ ತಿಳಿಯಲಿದೆ’ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ತನ್ಮೂಲಕ ಪರೋಕ್ಷವಾಗಿ ಆಪರೇಷನ್ ಹಸ್ತ ಪ್ರಯತ್ನವನ್ನು ಒಪ್ಪಿಕೊಂಡಿದ್ದು, ‘ಯಾರಾರಯರು ಯಾವ್ಯಾಗ ಪಕ್ಷ ಸೇರ್ಪಡೆಯಾಗುತ್ತಾರೆ ಎಂಬುದನ್ನು ಕಾದು ನೋಡಿ’ ಎಂದು ಹೇಳಿದ್ದಾರೆ. ಶುಕ್ರವಾರ ಸುದ್ದಿಗಾರರೊಂದಿಗೆ ಮಾತಾಡಿದ ಅವರು, ‘ನಾವು ಸ್ನೇಹದ ಹಸ್ತ ಚಾಚುತ್ತೇವೆ. ನಮ್ಮ ಪಕ್ಷದ ತತ್ವ ಸಿದ್ಧಾಂತ, ಭಾರತ್ ಜೋಡೊ ಬಗ್ಗೆ ಯಾರಿಗೆ ಒಲವಿದೆಯೋ ಅವರನ್ನು ತಬ್ಬಿಕೊಳ್ಳುತ್ತೇವೆ. ಅವರ ಹೆಗಲ ಮೇಲೆ ಕೈಹಾಕಿಕೊಂಡು ಹೆಜ್ಜೆ ಹಾಕುತ್ತೇವೆ’ ಎಂದು ಸೂಚ್ಯವಾಗಿ ಹೇಳಿದರು.
ಕಾಂಗ್ರೆಸ್‌ನ ಕನಸಿನ ಯೋಜನೆಗೆ ಕೆವೈಸಿ ತೊಂದರೆನಾ..? ಗೃಹಲಕ್ಷ್ಮಿ ಗೊಂದಲ ಶುರುವಾಗಿದ್ದು ಎಲ್ಲಿ ..?
ಹಾಲಿ- ಮಾಜಿಗಳನ್ನ ಯಾವಾಗ ತಬ್ಬಿಕೊಳ್ಳುತ್ತೀರಿ ಎಂಬ ಪ್ರಶ್ನೆಗೆ, ‘ಎಷ್ಟುಜನ ಸೇರಲಿದ್ದಾರೆ ಎನ್ನುವ ಪಟ್ಟಿಹೇಳಲು ಆಗಲ್ಲ. ಅವರವರೇ ಹೇಳಿರುವಂತೆ ಒಳ್ಳೆ ಮುಹೂರ್ತ, ಲಗ್ನ ಕೂಡಿಬಂದಾಗ ಪಕ್ಷ ಸೇರ್ಪಡೆ ನಡೆಯಲಿದೆ. ರಾಜಕೀಯದಲ್ಲಿ ಯಾರೂ ಮಿತ್ರರಲ್ಲ, ಶತ್ರುಗಳಲ್ಲ. ರಾಜಕೀಯ ಎನ್ನುವುದು ಸಾಧ್ಯತೆಗಳ ಕಲೆ. ರಾಜಕೀಯದಲ್ಲಿ ಯಾರೂ ದಡ್ಡರಲ್ಲ. ಎಲ್ಲರೂ ಅವರವರ ಭವಿಷ್ಯ ನೋಡಿಕೊಳ್ಳಬೇಕು. ಮಹಾರಾಷ್ಟ್ರದಲ್ಲಿ ಎಲ್ಲಾ ವಾಶಿಂಗ್ ಮೆಷಿನ್ ಸೇರಿಕೊಂಡು ಶುಭ್ರವಾಗಿದ್ದು ನೋಡಿಲ್ಲವೇ’ ಎಂದು ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.