ಮಾನಸಿಕ ಸ್ಥಿಮಿತ ಇರುವವರು ಈ ರೀತಿ ಮಾತನಾಡುವುದಿಲ್ಲ. ಅವರ ಮಾತು ತಪ್ಪು ಎಂದು ಅವರ ನಾಯಕರುಗಳಿಗೆ ಅರ್ಥವಾಗಿದೆ. ಇದು ಉತ್ತಮ ಬೆಳವಣಿಗೆ. ಅನಂತ ಕುಮಾರ್‌ಹೆಗಡೆ ಅವರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಲಿ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಬೆಂಗಳೂರು(ಜ.16): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಮಾತನಾಡಿರುವ ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ಅವರಿಗೆ ಮಾನಸಿಕ ಸ್ಥಿಮಿತತೆ ಇಲ್ಲ. ಅವರು ಇನ್ನಾದರೂ ತಮ್ಮ ಮಾನಸಿಕ ಆರೋಗ್ಯದ ಬಗ್ಗೆ ಕಾಳಜಿ ವಹಿಸಲಿ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾನಸಿಕ ಸ್ಥಿಮಿತ ಇರುವವರು ಈ ರೀತಿ ಮಾತನಾಡುವುದಿಲ್ಲ. ಅವರ ಮಾತು ತಪ್ಪು ಎಂದು ಅವರ ನಾಯಕರುಗಳಿಗೆ ಅರ್ಥವಾಗಿದೆ. ಇದು ಉತ್ತಮ ಬೆಳವಣಿಗೆ. ಅನಂತ ಕುಮಾರ್‌ಹೆಗಡೆ ಅವರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಲಿ ಎಂದು ಹೇಳಿದರು.
ಟಿಪ್ಪುವಿನ ಹೆಸರನ್ನು ಬಳಸಿ ಸಿದ್ದು ರಾಜಕಾರಣ: ಸಂಸದ ಅನಂತಕುಮಾರ ಹೆಗಡೆ
ಸಂಕ್ರಾಂತಿ ಹಬ್ಬದ ಶುಭಾಶಯ ಕೋರಿದ ಶಿವಕುಮಾರ್, ಈ ವರ್ಷ 220ಕ್ಕೂ ಹೆಚ್ಚು ತಾಲೂಕುಗಳನ್ನು ಬರ ಪ್ರದೇಶ ಎಂದು ಘೋಷಣೆ ಮಾಡಿದ್ದು, ಮತ್ತೆ ಇಂತಹ ಪರಿಸ್ಥಿತಿ ಬರಬಾರದು. ರೈತರ ಬದುಕು ಹಸನಾಗಬೇಕು ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದರು.