ಆಪರೇಷನ್‌ ತೆಲಂಗಾಣಕ್ಕೆ ಧಾವಿಸಿದ ಡಿಕೆಶಿ ಟೀಮ್‌..!

By Kannadaprabha News  |  First Published Dec 3, 2023, 4:31 AM IST

ಚುನಾವಣೋತ್ತರ ಸಮೀಕ್ಷೆಗಳಲ್ಲಿ ಕಾಂಗ್ರೆಸ್‌ ಮೇಲುಗೈ ಸಾಧಿಸಿದ್ದು, ಒಂದೊಮ್ಮೆ ಅತಂತ್ರ ಫಲಿತಾಂಶ ಉಂಟಾದರೆ ಕಾಂಗ್ರೆಸ್‌ ಶಾಸಕರನ್ನು ಆಪರೇಷನ್‌ ಮಾಡುವ ಸಾಧ್ಯತೆಯಿದೆ. ಹೀಗಾಗಿ ಕಾಂಗ್ರೆಸ್‌ ಶಾಸಕರಿಗೆ ರಕ್ಷಣೆ ನೀಡಿ ತೆಲಂಗಾಣದಲ್ಲೂ ಕಾಂಗ್ರೆಸ್‌ ಸರ್ಕಾರ ರಚನೆಗೆ ಕಾರ್ಯತಂತ್ರ ರೂಪಿಸುವ ಸಲುವಾಗಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಕಾಂಗ್ರೆಸ್‌ ಪಾಲಿನ ಟ್ರಬಲ್ ಶೂಟರ್‌ ಡಿ.ಕೆ. ಶಿವಕುಮಾರ್ ತೆರಳಲಿದ್ದಾರೆ. 


ಬೆಂಗಳೂರು(ಡಿ.04):  ತೆಲಂಗಾಣ ವಿಧಾನಸಭೆ ಚುನಾವಣೆ ಫಲಿತಾಂಶ ಇಂದು(ಭಾನುವಾರ) ಹೊರಬೀಳುತ್ತಿರುವ ಹಿನ್ನೆಲೆಯಲ್ಲಿ ಅತಂತ್ರ ಫಲಿತಾಂಶ ಉಂಟಾದರೆ ಕಾಂಗ್ರೆಸ್‌ ಶಾಸಕರನ್ನು ನಿಭಾಯಿಸಲು ನಿನ್ನೆ(ಶನಿವಾರ)ಯೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ತೆಲಂಗಾಣಕ್ಕೆ ತೆರಳಲಿದ್ದಾರೆ.

ಚುನಾವಣೋತ್ತರ ಸಮೀಕ್ಷೆಗಳಲ್ಲಿ ಕಾಂಗ್ರೆಸ್‌ ಮೇಲುಗೈ ಸಾಧಿಸಿದ್ದು, ಒಂದೊಮ್ಮೆ ಅತಂತ್ರ ಫಲಿತಾಂಶ ಉಂಟಾದರೆ ಕಾಂಗ್ರೆಸ್‌ ಶಾಸಕರನ್ನು ಆಪರೇಷನ್‌ ಮಾಡುವ ಸಾಧ್ಯತೆಯಿದೆ. ಹೀಗಾಗಿ ಕಾಂಗ್ರೆಸ್‌ ಶಾಸಕರಿಗೆ ರಕ್ಷಣೆ ನೀಡಿ ತೆಲಂಗಾಣದಲ್ಲೂ ಕಾಂಗ್ರೆಸ್‌ ಸರ್ಕಾರ ರಚನೆಗೆ ಕಾರ್ಯತಂತ್ರ ರೂಪಿಸುವ ಸಲುವಾಗಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಕಾಂಗ್ರೆಸ್‌ ಪಾಲಿನ ಟ್ರಬಲ್ ಶೂಟರ್‌ ಡಿ.ಕೆ. ಶಿವಕುಮಾರ್ ತೆರಳಲಿದ್ದಾರೆ. 119 ವಿಧಾನಸಭೆ ಸದಸ್ಯರನ್ನು ಹೊಂದಿರುವ ತೆಲಂಗಾಣದ ಫಲಿತಾಂಶ ಕಾಂಗ್ರೆಸ್‌ ಪಾಲಿಗೆ ಮಹತ್ವದ್ದಾಗಿದೆ.

Tap to resize

Latest Videos

ಪಂಚ ರಾಜ್ಯ ಚುನಾವಣಾ ಫಲಿತಾಂಶ ಕುತೂಹಲ, ನಿಜವಾಗುತ್ತಾ ಮತಗಟ್ಟೆ ಸಮೀಕ್ಷೆ ವರದಿ?

ಶೇ.70.60 ರಷ್ಟು ಮತದಾನ ದಾಖಲಾಗಿರುವುದರಿಂದ ಕಾಂಗ್ರೆಸ್ ಅಥವಾ ಬಿಆರ್‌ಎಸ್‌ ಯಾವ ಪಕ್ಷ ಹೆಚ್ಚು ಸ್ಥಾನ ಗಳಿಸಲಿದೆ ಎಂಬ ಕಾತುರ ಉಂಟಾಗಿದೆ. ಫಲಿತಾಂಶದ ಬಳಿಕ ಡಿ.ಕೆ. ಶಿವಕುಮಾರ್‌ ಯಾವ ನಡೆಗಳನ್ನು ಅನುಸರಿಸಲಿದ್ದಾರೆ ಎಂಬುದು ಸಹ ಕುತೂಹಲ ಹೆಚ್ಚಿಸಿದೆ.

click me!