ಹರಿಪ್ರಸಾದ್‌ ಮನೆಗೇ ಹೋಗಿ ಮನವೊಲಿಕೆಗೆ ಡಿಕೆಶಿ ಪ್ರಯತ್ನ

Published : Jul 27, 2023, 11:30 AM ISTUpdated : Jul 27, 2023, 11:41 AM IST
ಹರಿಪ್ರಸಾದ್‌ ಮನೆಗೇ ಹೋಗಿ ಮನವೊಲಿಕೆಗೆ ಡಿಕೆಶಿ ಪ್ರಯತ್ನ

ಸಾರಾಂಶ

ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪರೋಕ್ಷವಾಗಿ ಅಸಮಾಧಾನ ಹೊರ ಹಾಕಿದ್ದ ಬಿ.ಕೆ. ಹರಿಪ್ರಸಾದ್‌, ಈಡಿಗ ಸಮುದಾಯದ ಮುಖಂಡರ ಸಭೆಯಲ್ಲಿ, ‘ನನಗೆ ಸಿಎಂ ಮಾಡುವುದು ಗೊತ್ತು. ಅಧಿಕಾರದಿಂದ ಇಳಿಸುವುದು ಗೊತ್ತು’ ಎಂದು ಹೇಳಿಕೆ ನೀಡಿದ್ದರು.

ಬೆಂಗಳೂರು(ಜು.27):  ರಾಜ್ಯ ಕಾಂಗ್ರೆಸ್‌ನಲ್ಲಿ ಇತ್ತೀಚೆಗೆ ನಡೆದಿದ್ದ ರಾಜಕೀಯ ವಿದ್ಯಮಾನಗಳ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಸಚಿವ ಕೆ.ಎಚ್‌. ಮುನಿಯಪ್ಪ ಅವರು ವಿಧಾನಪರಿಷತ್‌ ಮಾಜಿ ವಿರೋಧಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್‌ ಮನೆಗೆ ತೆರಳಿ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದು, ತೀವ್ರ ಕುತೂಹಲ ಮೂಡಿಸಿದೆ. ಮಂಗಳವಾರ ರಾತ್ರಿ ಬಿ.ಕೆ. ಹರಿಪ್ರಸಾದ್‌ ಅವರನ್ನು ಭೇಟಿ ಮಾಡಿದ ಡಿ.ಕೆ. ಶಿವಕುಮಾರ್‌, ಕೆ.ಎಚ್‌. ಮುನಿಯಪ್ಪ ಹಾಗೂ ಬಿ.ಎಲ್‌. ಶಂಕರ್‌ ಅವರು ಸುದೀರ್ಘ ಮಾತುಕತೆ ನಡೆಸಿದ್ದು, ಈ ವೇಳೆ ಹರಿಪ್ರಸಾದ್‌ ಅವರ ಮನವೊಲಿಕೆ ಪ್ರಯತ್ನ ಮಾಡಿದರು ಎನ್ನಲಾಗಿದೆ. 

ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿ.ಕೆ. ಹರಿಪ್ರಸಾದ್‌ ಪರೋಕ್ಷವಾಗಿ ಅಸಮಾಧಾನ ಹೊರ ಹಾಕಿದ್ದರು. ಈಡಿಗ ಸಮುದಾಯದ ಮುಖಂಡರ ಸಭೆಯಲ್ಲಿ, ‘ನನಗೆ ಸಿಎಂ ಮಾಡುವುದು ಗೊತ್ತು. ಅಧಿಕಾರದಿಂದ ಇಳಿಸುವುದು ಗೊತ್ತು’ ಎಂದು ಹೇಳಿಕೆ ನೀಡಿದ್ದರು.

ಬಿಕೆ ಹರಿಪ್ರಸಾದ್ ಭೇಟಿಯಾದ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ ಕೆ ಶಿವಕುಮಾರ್

ಅವರ ಹೇಳಿಕೆ ಕಾಂಗ್ರೆಸ್‌ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಹಲವು ನಾಯಕರು ಸಿದ್ದರಾಮಯ್ಯ ಬಂಡೆಯಂತಹ ನಾಯಕರು, ಅವರನ್ನು ಇಳಿಸುವುದು ಯಾರಿಂದಲೂ ಸಾಧ್ಯವಿಲ್ಲ. ಹರಿಪ್ರಸಾದ್‌ ಅವರು ಬೇರೆ ರಾಜ್ಯಗಳ ಬಗ್ಗೆ ಹೇಳಿರಬಹುದು ಎಂದು ತಿರುಗೇಟು ನೀಡಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಯಾವುದೇ ಕ್ಷಣದಲ್ಲಾದರೂ ಡಿ.ಕೆ. ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಉದಯ ಕದಲೂರು ಓಪನ್ ಹೇಳಿಕೆ
ಎಸ್ಸಿ ಒಳ ಮೀಸಲಾತಿ ಜಾರಿ ವಿಧೇಯಕಕ್ಕೆ ಸಂಪುಟ ಅಸ್ತು: ಚಾರಿತ್ರಿಕ ಆದೇಶಕ್ಕೆ ಕಾನೂನು ಬಲ