ರೆಸಾರ್ಟ್ ಗಲಾಟೆ: ಆನಂದ್ ಸಿಂಗ್ ಆರೋಗ್ಯ ವಿಚಾರಿಸಿದ ತನಿಖಾ ತಂಡ

Published : Jan 27, 2019, 10:03 PM ISTUpdated : Jan 27, 2019, 10:06 PM IST
ರೆಸಾರ್ಟ್ ಗಲಾಟೆ: ಆನಂದ್ ಸಿಂಗ್ ಆರೋಗ್ಯ ವಿಚಾರಿಸಿದ ತನಿಖಾ ತಂಡ

ಸಾರಾಂಶ

ಕಾಂಗ್ರೆಸ್‌ನಿಂದ ಅಮಾನತುಗೊಂಡಿರುವ ಕಂಪ್ಲಿ ಶಾಸಕ ಗಣೇಶ್ ನಿಂದ ಹಲ್ಲೆಗೊಳಗಾದ ಆನಂದ್ ಸಿಂಗ್ ಅವರು ಚಿಕಿತ್ಸೆ ಪಡೆಯುತ್ತಿದ್ದು, ದಿನದಿಂದ ದಿನಕ್ಕೆ ಚೇತರಿಸಿಕೊಳ್ಳುತ್ತಿದ್ದಾರೆ. ಆದ್ರೆ ಇಂದು ಆನಂದ್ ಸಿಂಗ್ ಅವರ ಆರೋಗ್ಯ ವಿಚಾರಿಸಲು ಪ್ರಕರಣದ ತನಿಖಾ ತಂಡ ಆಸ್ಪತ್ರೆಗೆ ಭೇಟಿ ನೀಡಿದೆ.

ಬೆಂಗಳೂರು(ಜ.27): ಕಂಪ್ಲಿ ಶಾಸಕ ಗಣೇಶ್​​ರಿಂದ ಹಲ್ಲೆಗೊಳಗಾಗಿದ್ದ ಶಾಸಕ ಆನಂದ್​​ ಸಿಂಗ್​​ ಅವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. 

ಶೇಷಾದ್ರಿಪುರಂನಲ್ಲಿರುವ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಒಬ್ಬರಿಂದ ಒಬ್ಬರು ನಾಯಕರು ಆನಂದ್ ಸಿಂಗ್ ಆರೋಗ್ಯ ವಿಚಾರಿಸಲು ಆಸ್ಪತ್ರೆಗೆ ಬಂದು ಆತ್ಮಸ್ಥೈರ್ಯ ತುಂಬುತ್ತಿದ್ದಾರೆ. 

ಆಸ್ಪತ್ರೆಗೆ ಕುಮಾರಸ್ವಾಮಿ ಭೇಟಿ, 25 ನಿಮಿಷ ಆನಂದ್ ಸಿಂಗ್ ಜತೆ ಮಾತು

ನಿನ್ನೆ [ಶನಿವಾರ] ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಆನಂದ್ ಸಿಂಗ್ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದರು. ಇಂದು [ಭಾನುವಾರ] ಡಿಸಿಎಂ ಡಾ. ಜಿ.ಪರಮೇಶ್ವರ ಹಾಗೂ ಸಚಿವ ಕೃಷ್ಣ ಬೈರೇಗೌಡ ಆಸ್ಪತ್ರೆಗೆ ಭೇಟಿ ನೀಡಿ ಆನಂದ್ ಸಿಂಗ್ ಅವರ ಆರೋಗ್ಯ ವಿಚಾರಿಸಿದರು. 

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಪರಮೇಶ್ವರ,  ಆನಂದ್ ಆರೋಗ್ಯದಲ್ಲಿ ಸ್ವಲ್ಪ ಸುಧಾರಣೆ ಕಂಡಿದೆ. ಕಣ್ಣಿನ ದೃಷ್ಟಿ ಇದೀಗ ಸ್ಪಷ್ಟವಾಗಿ ಕಾಣಿಸುತ್ತಿದೆ. ಏಟು ಬಿದ್ದದ್ದರಿಂದ ಮೈ ಕೈ ನೋವು ಇನ್ನು ಇದ್ದು, ಇನ್ನಷ್ಟು ದಿನ ಆನಂದ್ ಸಿಂಗ್ ಚಿಕಿತ್ಸೆಯ ಅಗತ್ಯತೆ ಇದೇ ಎಂದರು.

ಮೊದಲು ಹೊಡೆದದ್ದೇ ಆನಂದ್ ಸಿಂಗ್!: ಹಲ್ಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್

ನಾವು ಈಗ ಯಾವುದೇ ತನಿಖಾ ಸಮಿತಿ ಸದಸ್ಯರಾಗಿ ಬಂದಿಲ್ಲ. ಈಗಿನ ಪರಿಸ್ಥಿತಿಯಲ್ಲಿ ವಿಚಾರಣೆ ರೀತಿ ಮಾಡುವುದು ಸರಿಯಲ್ಲ. ಜಾರ್ಜ್ ಕೂಡ ಬರಬೇಕು ಅವರು ಸಮಿಯಲ್ಲಿಯಲ್ಲಿದ್ದಾರೆ. ಆನಂದ್ ಸಿಂಗ್ ಗುಣ ಮುಖವಾದ ಬಳಿಕ ವಿಚಾರಣೆ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.

ಜ.19ರಂದು ಈಗಲ್ಟನ್ ರೆಸಾರ್ಟ್​ನಲ್ಲಿ ನಡೆದ ಘಟನೆ ಸಂಬಂಧಿಸಿದಂತೆ ಗಣೇಶ್​​ ವಿರುದ್ಧ ದಾಖಲಿಸಿಕೊಂಡು ರಾಮನಗರ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. 

ಈಗಾಗಲೇ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆನಂದ್ ಸಿಂಗ್ ಅವರಿಂದ ಕೇಸಿಗೆ ಸಂಬಂಧಿಸಿದಂತೆ ಪೊಲೀಸರು ಹೇಳಿಕೆ ಪಡೆದಿದ್ದಾರೆ. 

ಈ ಹೇಳಿಕೆ ಅನ್ವಯ ಗಣೇಶ್​​ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಜತೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ರಮೇಶ್‌ ನೇತೃತ್ವದಲ್ಲಿ ಮೂರು ತಂಡಗಳನ್ನು ರಚಿಸಲಾಗಿದ್ದು ಕಾರ್ಯಾಚರಣೆ ನಡೆಯುತ್ತಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
'ಏಯ್, ಹಾಗೆಲ್ಲಾ ನಾಟಿ ಕೋಳಿ ಬಿಡಬಾರದು, ಏನೂ ಆಗೊಲ್ಲ ತಿನ್ನಬೇಕು': ಆರ್. ಅಶೋಕ್‌ಗೆ ಸಿದ್ದರಾಮಯ್ಯ ಕಿವಿಮಾತು!