ಜು.1ರಿಂದ ಅನ್ನಭಾಗ್ಯ ಯೋಜನೆಯಡಿ 10 ಕೆ.ಜಿ ಅಕ್ಕಿ ಕೊಡಲು ತೀರ್ಮಾನ: ಡಿ.ಕೆ.ಶಿವಕುಮಾರ್‌

By Kannadaprabha News  |  First Published Jun 16, 2023, 10:23 PM IST

ಅವರೇನು ಪುಕ್ಸಟ್ಟೆ ಅಕ್ಕಿ ಕೊಡುತ್ತಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಕಿಡಿಕಾರಿದರು. ರಾಜ್ಯಕ್ಕೆ ಅಕ್ಕಿ ಸರಬರಾಜು ಮಾಡಲು ಕೇಂದ್ರ ಸರ್ಕಾರ ನಕಾರ ವಿಚಾರ ಕುರಿತು ಮೈಸೂರು ವಿಮಾನ ನಿಲ್ದಾಣದಲ್ಲಿ ಪ್ರತಿಕ್ರಿಯಿಸಿದ ಅವರು, ಕೇಂದ್ರಕ್ಕೆ ಅಕ್ಕಿ ಕೊಡುವಂತೆ ನಾವು ಪುಕ್ಸಟೆ ಕೇಳಿಲ್ಲ. ಬರುವ ಜುಲೈ 1 ರಿಂದ ಅನ್ನಭಾಗ್ಯ ಯೋಜನೆಯಡಿ 10 ಕೆ.ಜಿ ಅಕ್ಕಿ ಕೊಡಲು ತೀರ್ಮಾನ ಮಾಡಿದ್ದೇವೆ ಎಂದರು.
 


ಮೈಸೂರು (ಜೂ.16): ಅವರೇನು ಪುಕ್ಸಟ್ಟೆ ಅಕ್ಕಿ ಕೊಡುತ್ತಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಕಿಡಿಕಾರಿದರು. ರಾಜ್ಯಕ್ಕೆ ಅಕ್ಕಿ ಸರಬರಾಜು ಮಾಡಲು ಕೇಂದ್ರ ಸರ್ಕಾರ ನಕಾರ ವಿಚಾರ ಕುರಿತು ಮೈಸೂರು ವಿಮಾನ ನಿಲ್ದಾಣದಲ್ಲಿ ಪ್ರತಿಕ್ರಿಯಿಸಿದ ಅವರು, ಕೇಂದ್ರಕ್ಕೆ ಅಕ್ಕಿ ಕೊಡುವಂತೆ ನಾವು ಪುಕ್ಸಟೆ ಕೇಳಿಲ್ಲ. ಬರುವ ಜುಲೈ 1 ರಿಂದ ಅನ್ನಭಾಗ್ಯ ಯೋಜನೆಯಡಿ 10 ಕೆ.ಜಿ ಅಕ್ಕಿ ಕೊಡಲು ತೀರ್ಮಾನ ಮಾಡಿದ್ದೇವೆ ಎಂದರು.

ಕೇಂದ್ರ ಸರ್ಕಾರ ಅಕ್ಕಿ ಕೊಡುವುದಿಲ್ಲ, ನಮ್ಮಲ್ಲಿ ಇಲ್ಲ ಎಂದು ಕಾಗದ ಬರೆದಿದ್ದಾರೆ. ಹೀಗಾಗಿ, ಸಿಎಂ ಈಗಾಗಲೇ ಛತ್ತಿಸ್‌ಗಡ್‌, ತೆಲಂಗಾಣ ಸೇರಿದಂತೆ ವಿವಿಧ ರಾಜ್ಯಗಳ ಜೊತೆ ಮಾತನಾಡಿ ಪತ್ರ ಬರೆದಿದ್ದಾರೆ. ಕೇಂದ್ರ ಸರ್ಕಾರವು ಅಕ್ಕಿ ಕೊಡದಿರುವುದನ್ನು ಕಾಂಗ್ರೆಸ್‌ ತೀವ್ರವಾಗಿ ಖಂಡಿಸುತ್ತದೆ. ನಮಗೆ ಕೊಡಬೇಕಾಗುತ್ತದೆ ಎನ್ನುವ ಕಾರಣಕ್ಕೆ ಎಲ್ಲಾ ರಾಜ್ಯಗಳಿಗೂ ಅಕ್ಕಿ ಕೊಡುವುದಿಲ್ಲ ಎಂದು ವಿತ್‌ ಡ್ರಾ ಮಾಡಿದ್ದಾರೆ. ಈ ಬಗ್ಗೆ ದೊಡ್ಡ ಹೋರಾಟ ಮಾಡುತ್ತೇವೆ. ಮುಂದಿನ ರೂಪುರೇಷೆಯ ಬಗ್ಗೆ ಶುಕ್ರವಾರ ಮಾತನಾಡುತ್ತೇನೆ ಎಂದು ಅವರು ತಿಳಿಸಿದರು.

Latest Videos

undefined

ರಾಜ್ಯದಲ್ಲಿ ಅರಣ್ಯ ವ್ಯಾಪ್ತಿಯನ್ನು ಶೇ.33ಕ್ಕೆ ಹೆಚ್ಚಿಸಲು ಸರ್ಕಾರ ಪ್ರಯತ್ನ: ಸಚಿವ ಈಶ್ವರ ಖಂಡ್ರೆ

ಕರ್ನಾಟಕದ ರೈತರಿಂದಲೇ ಅಕ್ಕಿ ಖರೀದಿ ಮಾಡಬೇಕೆಂಬ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ಓಪನ್‌ ಮಾರ್ಕೆಟ್‌ನಲ್ಲಿ ಅಕ್ಕಿ ಖರೀದಿ ಮಾಡಲು ಸಾಧ್ಯವಿಲ್ಲ. ಕೆಲವು ಸಂಸ್ಥೆಗಳು, ಬೇರೆ ಬೇರೆ ಏಜೆನ್ಸಿಗಳ ಮೂಲಕ ಅಕ್ಕಿ ಖರೀದಿ ಮಾಡಬೇಕು. ಯಾರ ಬಳಿಯೂ ಬೆಟ್ಟು ಮಾಡಿ ತೋರಿಸಿಕೊಳ್ಳುವ ರೀತಿ ಕೆಲಸ ಮಾಡುವುದಿಲ್ಲ. ತಿನ್ನುವ ಅಕ್ಕಿ ಹಾಗೂ ಬಡವರ ಮೇಲೆ ರಾಜಕೀಯ ಮಾಡುವುದು ಸರಿಯಲ್ಲ. ಕೇಂದ್ರದ ನಿಲುವು ಸರಿಯಲ್ಲ ಎಂದು ಖಂಡಿಸಿದರು.

ಅದ್ಧೂರಿ ಸ್ವಾಗತ: ಉಪ ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿ ಮೈಸೂರಿಗೆ ಆಗಮಿಸಿದ ಡಿ.ಕೆ. ಶಿವಕುಮಾರ್‌ ಅವರಿಗೆ ಅವರ ಅಭಿಮಾನಿಗಳು ಹಾಗೂ ಕಾಂಗ್ರೆಸ್‌ ಮುಖಂಡರು, ಕಾರ್ಯಕರ್ತರು ಮೈಸೂರು ವಿಮಾನ ನಿಲ್ದಾಣದಲ್ಲಿ ಅದ್ಧೂರಿಯಾಗಿ ಸ್ವಾಗತಿಸಿದರು. ಡಿ.ಕೆ. ಶಿವಕುಮರ್‌ ಅವರಿಗೆ ಹಾರ, ಹೂಗುಚ್ಛ ನೀಡಿ ಕಾಂಗ್ರೆಸ್‌ ಮುಖಂಡರು ಸ್ವಾಗತಿಸಿದರು. ನಂತರ ಡಿ.ಕೆ. ಶಿವಕುಮಾರ್‌ ಅವರು ಪೊಲೀಸ್‌ ಇಲಾಖೆಯಿಂದ ಗೌರವ ವಂದನೆ ಸ್ವೀಕರಿಸಿದರು.

ಅಧಿ​ಕಾ​ರಿ​ಗಳ ಜತೆ ಸುರ್ಜೇ​ವಾಲಾ ಸಭೆ ನಡೆ​ಸಿ​ಲ್ಲ: ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಸುರ್ಜೇವಾಲ ಅವರು ಬಿಬಿಎಂಪಿ ಅಧಿಕಾರಿಗಳ ಸಭೆ ನಡೆಸಿದ್ದಾರೆಂದು ಪ್ರತಿಪಕ್ಷ ಬಿಜೆಪಿ ಹಾಗೂ ಜೆಡಿಎಸ್‌ ಮುಖಂಡರು ಮಾಡಿರುವ ಆರೋಪಗಳನ್ನು ಸಾರಾಸಗಟಾಗಿ ತಳ್ಳಿ ಹಾಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹಾಗೂ ಹಲವು ಸಚಿವರು, ಸುರ್ಜೆವಾಲ ಅಧಿಕಾರಿಗಳ ಸಭೆ ನಡೆಸಿಲ್ಲ, ಅದು ಅಧಿಕೃತ ಸಭೆ ಸಹ ಅಲ್ಲ. ಸುರ್ಜೇವಾಲ ಅವರ ಜೊತೆ ಉಪ ಮುಖ್ಯಮಂತ್ರಿಗಳು ಇದ್ದಾಗ ಡಿಕೆಶಿ ಅವ​ರನ್ನು ನಗರ ಪ್ರದಕ್ಷಿಣೆ ಕಾರ್ಯಕ್ರಮಕ್ಕೆ ಕರೆದುಕೊಂಡು ಹೋಗಲು ಅಧಿಕಾರಿಗಳು ಬಂದಿದ್ದರು ಎಂದು ಸ್ಪಷ್ಟನೆ ನೀಡಿದ್ದಾರೆ.

ಕೃಷಿ ಜತೆ ಹೈನುಗಾರಿಕೆಯಲ್ಲಿ ತೊಡಗಿಸಿಕೊಳ್ಳಿ: ಸಚಿವ ಚಲುವರಾಯಸ್ವಾಮಿ

ಇನ್ನು ಈ ಬಗ್ಗೆ ಬಿಜೆಪಿ ಮುಖಂಡರು ಮಾಡಿರುವ ಟೀಕೆ ಹಾಗೂ ರಾಜ್ಯಪಾಲರಿಗೆ ದೂರು ನೀಡಿರುವ ಕುರಿತಂತೆ ಪ್ರತ್ಯೇಕವಾಗಿ ಪ್ರತಿಕ್ರಿಯಿಸಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್‌, ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರು, ಈ ಬಗ್ಗೆ ಬಿಜೆಪಿಯವರು ರಾಜ್ಯಪಾಲರಿಗೆ ದೂರು ನೀಡಲಿ, ಅದನ್ನು ರಾಜ್ಯಪಾಲರು ಪರಿಶೀಲಿಸುತ್ತಾರೆ ಎಂದಿದ್ದಾರೆ.

click me!