ಜೆಡಿಎಸ್‌ ಬಲವರ್ಧನಾ ಸಮಿತಿಯಲ್ಲಿ ಎಲ್ಲ ಜಾತಿಗಳಿಗೂ ಆದ್ಯತೆಗೆ ನಿರ್ಧಾರ

Published : Jul 29, 2023, 08:28 AM ISTUpdated : Aug 01, 2023, 11:27 AM IST
ಜೆಡಿಎಸ್‌ ಬಲವರ್ಧನಾ ಸಮಿತಿಯಲ್ಲಿ ಎಲ್ಲ ಜಾತಿಗಳಿಗೂ ಆದ್ಯತೆಗೆ ನಿರ್ಧಾರ

ಸಾರಾಂಶ

ಪಕ್ಷದಲ್ಲಿ ಸಮುದಾಯದ ನಾಯಕರನ್ನು ಹುಟ್ಟು ಹಾಕಿ ಮುಂಬರುವ ಚುನಾವಣೆಗಳಲ್ಲಿ ಪಕ್ಷಕ್ಕೆ ಹೆಚ್ಚಿನ ಸ್ಥಾನ ಪಡೆಯುವಲ್ಲಿ ಕಾರ್ಯಪ್ರವೃತ್ತರಾಗುವಂತೆ ಸೂಚನೆ ನೀಡಲು ವರಿಷ್ಠರು ಮುಂದಾಗಿದ್ದಾರೆ. ಸಮಿತಿ ರಚನೆಯಾದ ಬಳಿಕ ಜಿಲ್ಲಾ, ತಾಲೂಕು ಮಟ್ಟದಲ್ಲಿ ನಾಯಕರು ಸಭೆ ನಡೆಸಿ ಪಕ್ಷವನ್ನು ಸದೃಢಗೊಳಿಸಬೇಕಾಗಿದೆ. ಪಕ್ಷಕ್ಕೆ ಹೊಸ ಪದಾಧಿಕಾರಿಗಳನ್ನು ಸಹ ನೇಮಕ ಮಾಡುವ ನಿಟ್ಟಿನಲ್ಲಿ ಸಮಿತಿಯು ಕಾರ್ಯನಿರ್ವಹಿಸಲಿದೆ. 

ಬೆಂಗಳೂರು(ಜು.29): ತಳಮಟ್ಟದಿಂದ ಜೆಡಿಎಸ್‌ ಬಲಗೊಳಿಸುವ ನಿಟ್ಟಿನಲ್ಲಿ ರಚಿಸಲು ನಿರ್ಧರಿಸಿರುವ ಹಿರಿಯ ಶಾಸಕ ಜಿ.ಟಿ.ದೇವೇಗೌಡ ನೇತೃತ್ವದ ಸಮಿತಿಯಲ್ಲಿ ಎಲ್ಲಾ ಸಮುದಾಯದ ನಾಯಕರಿಗೆ ಅವಕಾಶ ನೀಡಲು ಉದ್ದೇಶಿಸಲಾಗಿದೆ.

ಈ ಸಮಿತಿಯ ಮೂಲಕ ಜಿಲ್ಲಾ, ತಾಲೂಕು ಮಟ್ಟದಲ್ಲಿ ಪಕ್ಷವನ್ನು ಸದೃಢಗೊಳಿಸುವುದರ ಜತೆಗೆ ಪಕ್ಷದಲ್ಲಿನ ಸಮುದಾಯ ನಾಯಕರ ಕೊರತೆಯನ್ನು ನೀಗಿಸುವಲ್ಲಿಯೂ ಪಕ್ಷದ ವರಿಷ್ಠರು ಹೆಚ್ಚಿನ ಗಮನ ಹರಿಸಿದ್ದಾರೆ. ಈ ಮೂಲಕ ವಿಧಾನಸಭೆ ಚುನಾವಣೆ ವೇಳೆ ಆಗಿರುವ ಸಣ್ಣಪುಟ್ಟಲೋಪದೋಷಗಳನ್ನು ಸರಿಮಾಡಿಕೊಂಡು ಮುಂಬರುವ ಚುನಾವಣೆಗೆ ಸಕಲ ಸಿದ್ಧತೆ ಕೈಗೊಳ್ಳಲು ಮುಂದಾಗಿದೆ ಎಂದು ಪಕ್ಷದ ಮೂಲಗಳು ಹೇಳಿವೆ.

ಕುಮಾರಸ್ವಾಮಿ ನಾಯಕತ್ವದ ಬಗ್ಗೆ ಮಾತಾಡಲು ಸುನಿಲ್‌ ಯಾರು?: ಶರವಣ

ಪಕ್ಷದಲ್ಲಿ ಸಮುದಾಯದ ನಾಯಕರನ್ನು ಹುಟ್ಟು ಹಾಕಿ ಮುಂಬರುವ ಚುನಾವಣೆಗಳಲ್ಲಿ ಪಕ್ಷಕ್ಕೆ ಹೆಚ್ಚಿನ ಸ್ಥಾನ ಪಡೆಯುವಲ್ಲಿ ಕಾರ್ಯಪ್ರವೃತ್ತರಾಗುವಂತೆ ಸೂಚನೆ ನೀಡಲು ವರಿಷ್ಠರು ಮುಂದಾಗಿದ್ದಾರೆ. ಸಮಿತಿ ರಚನೆಯಾದ ಬಳಿಕ ಜಿಲ್ಲಾ, ತಾಲೂಕು ಮಟ್ಟದಲ್ಲಿ ನಾಯಕರು ಸಭೆ ನಡೆಸಿ ಪಕ್ಷವನ್ನು ಸದೃಢಗೊಳಿಸಬೇಕಾಗಿದೆ. ಪಕ್ಷಕ್ಕೆ ಹೊಸ ಪದಾಧಿಕಾರಿಗಳನ್ನು ಸಹ ನೇಮಕ ಮಾಡುವ ನಿಟ್ಟಿನಲ್ಲಿ ಸಮಿತಿಯು ಕಾರ್ಯನಿರ್ವಹಿಸಲಿದೆ. ತಳಮಟ್ಟದಲ್ಲಿ ಪಕ್ಷಕ್ಕೆ ನಿಷ್ಠಾವಂತರಾಗಿರುವವರನ್ನು ಹುಡುಕಿ ಅವರಿಗೆ ಜವಾಬ್ದಾರಿಗಳನ್ನು ನೀಡುವ ಬಗ್ಗೆ ಚಿಂತನೆ ನಡೆದಿದೆ.

ಶ್ರಾವಣ ಮಾಸದಲ್ಲಿ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳಲು ಜೆಡಿಎಸ್‌ ನಾಯಕರು ಮುಂದಾಗಿದ್ದಾರೆ. ಮುಂದಿನ ಲೋಕಸಭೆ ಚುನಾವಣೆವರೆಗೆ ಪ್ರವಾಸಗಳು ವಿವಿಧ ಹಂತದಲ್ಲಿ ನಡೆಯಲಿದೆ. ಪ್ರವಾಸದ ವೇಳೆ ಪಂಚರತ್ನ ಕಾರ್ಯಕ್ರಮಗಳ ಕುರಿತು ಮತ್ತಷ್ಟುಪ್ರಚಾರ ಕೈಗೊಳ್ಳುವ ಸಾಧ್ಯತೆ ಇದೆ. ಜಿಲ್ಲಾವಾರು, ತಾಲೂಕುವಾರು ಭೇಟಿ ನೀಡಿ ಕುಮಾರಸ್ವಾಮಿ ಅವರ ಕಾರ್ಯಕ್ರಮಗಳನ್ನು ಜನತೆಗೆ ತಲುಪಿಸುವ ಕಾರ್ಯ ಮಾಡಲಾಗುತ್ತದೆ. ಬೆಂಗಳೂರಿಗೂ ವಿಶೇಷ ಒತ್ತು ನೀಡಿ ಪ್ರಚಾರ ಹಮ್ಮಿಕೊಳ್ಳುವ ಬಗ್ಗೆ ಪಕ್ಷವು ಮುಂದಾಗಿದೆ ಎಂದು ಹೇಳಲಾಗಿದೆ.

News Hour With HD Kumaraswamy

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
ಹಿಂದೂಗಳು ಒಂದಾಗದಿದ್ರೆ ದೇಶ, ಸಂವಿಧಾನ ಉಳಿಯಲ್ಲ: ಶಾಸಕ ಬಸನಗೌಡ ಪಾಟೀಲ ಯತ್ನಾಳ