ಕಾಂಗ್ರೆಸ್ ಸಮರ್ಪಣಾ ಸಂಕಲ್ಪ ಸಮಾವೇಶ: ಕಾರ್ಯಕ್ರಮದ ಸಿದ್ದತೆ ಪರಿಶೀಲಿಸಿದ ಸಿದ್ದರಾಮಯ್ಯ

Published : May 16, 2025, 08:33 PM IST
ಕಾಂಗ್ರೆಸ್ ಸಮರ್ಪಣಾ ಸಂಕಲ್ಪ ಸಮಾವೇಶ: ಕಾರ್ಯಕ್ರಮದ ಸಿದ್ದತೆ ಪರಿಶೀಲಿಸಿದ ಸಿದ್ದರಾಮಯ್ಯ

ಸಾರಾಂಶ

ಗ್ಯಾರಂಟಿ ಸ್ಕೀಂ ಯಶಸ್ಸಿಯೊಂದಿಗೆ 2 ವರ್ಷ ಪೂರೈಸಿದ ಹುಮ್ಮಸ್ಸಿನಲ್ಲಿರೋ ರಾಜ್ಯ ಕಾಂಗ್ರೆಸ್ ಸರ್ಕಾರ ಮೇ 20ರಂದು ಹೊಸಪೇಟೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಸಮರ್ಪಣಾ ಸಂಕಲ್ಪ ಸಮಾವೇಶ ಕಾರ್ಯಕ್ರಮ ಹಮ್ಮಿಕೊಂಡಿದೆ. 

ವರದಿ: ನರಸಿಂಹ ಮೂರ್ತಿ ಕುಲಕರ್ಣಿ, ವಿಜಯನಗರ

ವಿಜಯನಗರ (ಮೇ.16): ಗ್ಯಾರಂಟಿ ಸ್ಕೀಂ ಯಶಸ್ಸಿಯೊಂದಿಗೆ 2 ವರ್ಷ ಪೂರೈಸಿದ ಹುಮ್ಮಸ್ಸಿನಲ್ಲಿರೋ ರಾಜ್ಯ ಕಾಂಗ್ರೆಸ್ ಸರ್ಕಾರ ಮೇ 20ರಂದು ಹೊಸಪೇಟೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಸಮರ್ಪಣಾ ಸಂಕಲ್ಪ ಸಮಾವೇಶ ಕಾರ್ಯಕ್ರಮ ಹಮ್ಮಿಕೊಂಡಿದೆ. ಕಾರ್ಯಕ್ರಮದ ಸಿದ್ಧತೆಯನ್ನು  ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಸಚಿವರಾದ ಜಮೀರ್ ಅಹ್ಮದ್, ಕೃಷ್ಣ ಬೈರೇಗೌಡ, ಶಿವರಾಜ್ ತಂಗಡಗಿ ಸೇರಿದಂತೆ ಕೊಪ್ಪಳ ವಿಜಯನಗರ ಜಿಲ್ಲೆಯ ಶಾಸಕರಿ ವೀಕ್ಷಣೆ ಮಾಡಿದರು. 

ನಂತರ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು 2023 ರ ಮೇ 20 ರಂದು ರಾಜ್ಯ ಸರ್ಕಾರವು ಅಸ್ತಿತ್ವಕ್ಕೆ ಬಂದು ಎರಡು ವರ್ಷ ಪೂರೈಸುತ್ತಿದೆ. ಅಂದೇ ಕ್ಯಾಬಿನೆಟ್ ಸಭೆಯಲ್ಲಿ ಪಂಚ ಗ್ಯಾರಂಟಿ ಯೋಜನೆ ಜಾರಿಗೆ ತರಲಾಗಿತ್ತು. ಶಕ್ತಿ ಯೋಜನೆ, ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮಿ ಮತ್ತು ಯುವನಿಧಿ ಸೇರಿದಂತೆ ಹಂತ-ಹಂತವಾಗಿ ಜಾರಿಗೆ ತಂದು ನುಡಿದಂತೆ ನಡೆದಿದ್ದೇವೆ ಎಂದು  ಹೇಳಿದರು. ಕಳೆದ ವಿಧಾನಸಭೆ ಚುನಾವಣೆ ಮತ್ತು ಉಪಚುನಾವಣೆಯಲ್ಲಿ ಬಹುಮತದಿಂದ ಆರಿಸಿ ಗೆಲ್ಲಿಸಿದಂತಹ ಮತದಾರರಿಗೆ  ಸರ್ಕಾರ ಚುನಾವಣೆ ವೇಳೆ ಘೋಷಿಸಿದಂತೆ, ಕೊಟ್ಟ ಮಾತಿನಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದೇವೆ ಎಂದರು.

ರೈಲ್ವೆ ಇಲಾಖೆ ರಾಷ್ಟ್ರದ ಬೆನ್ನೆಲುಬು: ಕೇಂದ್ರ ಸಚಿವ ಸೋಮಣ್ಣ

ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಹಣವಿಲ್ಲ ಎಂದು ಬಿಜೆಪಿ ನಾಯಕರು ಟೀಕಿಸುತ್ತಿದ್ದಾರೆ. ಈಗಾಗಲೇ ಗ್ಯಾರಂಟಿ ಯೋಜನೆಗಳಿಗೆ 90 ಸಾವಿರ ಕೋಟಿ ರೂ. ಖರ್ಚು ಮಾಡಲಾಗಿದೆ. 2024-25 ನೇ ಸಾಲಿನಲ್ಲಿ 51 ಸಾವಿರ ಕೋಟಿ ರೂ. ಗಳನ್ನು ಅಭಿವೃದ್ಧಿ ಕಾರ್ಯಗಳಿಗೆ ವಿನಿಯೋಗಿಸಲಾಗಿದೆ. ಕಳೆದ ವರ್ಷ ಗ್ಯಾರಂಟಿ ಯೋಜನೆಗಳಿಗಾಗಿಯೇ 52.9 ಸಾವಿರ ಕೋಟಿ ರೂ. ಮೀಸಲಿಡಲಾಗಿತ್ತು. ಈ ವರ್ಷ 50.18 ಸಾವಿರ ಕೋಟಿ ರೂ. ಮೀಸಲಿಡಲಾಗಿದೆ, ಅಗತ್ಯ ಬಿದ್ದಲ್ಲಿ ಇನ್ನು ಹೆಚ್ಚಿನ ಅನುದಾನ ನೀಡಲಾಗುವುದು ಎಂದರು. ಅಭಿವೃದ್ಧಿ ಕಾರ್ಯಗಳಿಗೆ ಯಾವುದೇ ರೀತಿಯ ಅನುದಾನದ ಕೊರತೆ ಇಲ್ಲ. ನಮ್ಮ ಸರ್ಕಾರ ಜಾರಿಗೊಳಿಸಿದ ಗ್ಯಾರಂಟಿ ಯೋಜನೆಗಳು ದೇಶಕ್ಕೆ ಮಾದರಿಯಾಗಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. 

ಕೆಕೆಆರ್ ಡಿಬಿ ಗೆ 5 ಸಾವಿರ ಕೋಟಿ ರೂ.: ಕಲ್ಯಾಣ ಕರ್ನಾಟಕ ಭಾಗದ ಏಳು ಜಿಲ್ಲೆಗಳ ಅಭಿವೃದ್ಧಿಗೆ ನಮ್ಮ ರಾಜ್ಯ ಸರ್ಕಾರವು 5 ಸಾವಿರ ಕೋಟಿ ರೂ. ನೀಡಿದೆ.  371 (ಜೆ) ವಿಶೇಷ ಸ್ಥಾನಮಾನವನ್ನು ಕೇಂದ್ರದಲ್ಲಿ  ಕಾಂಗ್ರೆಸ್ ಸರ್ಕಾರವಿದ್ದಾಗ ಜಾರಿಗೊಳಿಸಿತ್ತು. ಇದೀಗ ರಾಜ್ಯ ಕಾಂಗ್ರೆಸ್ ಸರ್ಕಾರವೇ ಹೆಚ್ಚು ಹೆಚ್ಚು ಅನುದಾನ ನೀಡುತ್ತಿದೆ ಎಂದರು. ಕಳೆದ ಸರ್ಕಾರವು ವಸತಿ ಯೋಜನೆಯಡಿ ಒಂದೇ ಒಂದು ಮನೆ ನೀಡಲಾಗಲಿಲ್ಲ, ಈ ಬಾರಿ ವಸತಿ ಯೋಜನೆಯಡಿ ಮನೆ ವಿತರಿಸುವ ಕುರಿತಂತೆ ವಸತಿ ಸಚಿವರು ಪ್ರಸ್ತಾಪಿಸಿದ್ದಾರೆ ಎಂದರು. 

1.03 ಲಕ್ಷ ಹಕ್ಕುಪತ್ರ ವಿತರಣೆ: ಸರ್ಕಾರವು ಎರಡು ವರ್ಷ ಪೂರೈಸುತ್ತಿರುವ ಹಿನ್ನಲೆಯಲ್ಲಿ   ಮೇ 20 ರಂದು ನಡೆಯುವ ಸಮರ್ಪಣಾ ಸಂಕಲ್ಪ ಸಮಾವೇಶ ಕಾರ್ಯಕ್ರಮದಲ್ಲಿ ಹಾಡಿ, ಹಟ್ಟಿ ಮತ್ತು ತಾಂಡಾ ಪ್ರದೇಶದ ಕನಿಷ್ಠ 1.03 ಲಕ್ಷ ಫಲಾನುಭವಿಗಳಿಗೆ ಕಂದಾಯ ಇಲಾಖೆಯಿಂದ ಹಕ್ಕುಪತ್ರಗಳನ್ನು ವಿತರಣೆ ಮಾಡಲಾಗುತ್ತದೆ. ಇದರಿಂದ ಜನರಿಗೆ ಸೌಲಭ್ಯ  ಸಮರ್ಪಿಸುವ ಸಮರ್ಪಣಾ ಸಂಕಲ್ಪ ಸಮಾವೇಶ ಕಾರ್ಯಕ್ರಮ ಇದಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದರು.

ಕಾಂಗ್ರೆಸ್‌ ಗ್ಯಾರಂಟಿ ಯೋಜನೆಗಳು ಜಗತ್ತಿಗೇ ಮಾದರಿ: ಸಚಿವ ಈಶ್ವರ ಖಂಡ್ರೆ

ಹೊಸಪೇಟೆಗೆ ಗಣ್ಯರ ದಂಡು: ಕಾರ್ಯಕ್ರಮಕ್ಕೆ ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ವಿರೋಧ ಪಕ್ಷದ ನಾಯಕರು, ಶಾಸಕರುಗಳನ್ನು ಸಹ ಆಹ್ವಾನಿಸಲಾಗಿದೆ.  ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಫಲಾನುಭವಿಗಳನ್ನು ಕರೆತರಲಾಗುವುದು. ಕನಿಷ್ಠ 3 ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಜನಸ್ತೋಮ ಸೇರುವ ನಿರೀಕ್ಷೆ ಹೊಂದಲಾಗಿದೆ. ಇದಕ್ಕೆ ಬೇಕಾದ ಅಗತ್ಯ ವ್ಯವಸ್ಥೆ ಕೈಗೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಪವರ್‌ ಪಾಯಿಂಟ್‌: ದ್ವೇಷ ಭಾಷಣ ಮಸೂದೆಯಿಂದ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ
ಉ.ಕ.ಅಭಿವೃದ್ಧಿ ಕೈ ಸರ್ಕಾರ ಬದ್ಧ : ಸಿಎಂ