ಮಂಡ್ಯದಲ್ಲಿ ಕುಮಾರಸ್ವಾಮಿ ಸೋಲಿಸಿ ಚನ್ನಪಟ್ಟಣಕ್ಕೆ ವಾಪಸ್ ಕಳಿಸಿ: ಸಿಎಂ ಸಿದ್ದರಾಮಯ್ಯ

By Kannadaprabha News  |  First Published Apr 21, 2024, 2:55 PM IST

ಗ್ಯಾರಂಟಿಗಳಿಂದ ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದಿದ್ದ ಪ್ರಧಾನಿ ನರೇಂದ್ರ ಮೋದಿ ನಮ್ಮ ಗ್ಯಾರಂಟಿಗಳನ್ನೇ ಈಗ ಕದ್ದಿದ್ದಾರೆ. ಮೋದಿ ಜೊತೆ ಕೈ ಜೋಡಿಸಿರುವ ಎಚ್.ಡಿ.ದೇವೇಗೌಡ, ಪ್ರಜ್ವಲ್ ರೇವಣ್ಣ ಅಥವಾ ಸುಮಲತಾ ಸೇರಿದ 27 ಸಂಸದರು ರಾಜ್ಯದಲ್ಲಿ ಉದ್ಭವಿಸಿರುವ ಭೀಕರ ಬರಗಾಲದ ಬಗ್ಗೆ ಕೇಂದ್ರದಲ್ಲಿ ದನಿ ಎತ್ತಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ 


ನಾಗಮಂಗಲ(ಏ.21):  ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲು ಧೈರ್ಯವಿಲ್ಲದೆ ಕುಮಾರಸ್ವಾಮಿಯವರು ಮಂಡ್ಯಕ್ಕೆ ಬಂದು ಸ್ಪರ್ಧೆ ಮಾಡಿದ್ದಾರೆ. ಮತದಾರರು ಇಲ್ಲಿ ಸೋಲಿಸಿ ಮತ್ತೆ ಚನ್ನಪಟ್ಟಣಕ್ಕೆ ಅವರನ್ನು ಕಳುಹಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. 

ಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ರ್ಸ್ಟಾಚಂದ್ರು)ಪರ ಬೃಹತ್ ಚುನಾವಣಾ ಪ್ರಚಾರ ಸಭೆ ಉದ್ಘಾಟಿಸಿ ಮಾತನಾಡಿದರು. ಕುಮಾರಸ್ವಾಮಿ ಹಾಲಿ ಚನ್ನಪಟ್ಟಣದ ಶಾಸಕರಾಗಿದ್ದಾರೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ತನ್ನ ಮಗನನ್ನು ಸಿಎಂ ಆಗಿದ್ದರೂ ಗೆಲ್ಲಿಸಿಕೊಳ್ಳಲಾಗಲಿಲ್ಲ. ಈಗ ಅವರೇ ಮಂಡ್ಯದಿಂದ ಸ್ಪರ್ಧೆಸುತ್ತಿದ್ದಾರೆ ಎಂದು ಟೀಕಿಸಿದರು. 

Latest Videos

undefined

ಮೇಕೆದಾಟು ಯೋಜನೆ, ಕಾಂಗ್ರೆಸ್ ಭರವಸೆ ಏನಾಯಿತು: ನಿಖಿಲ್ ಕುಮಾರಸ್ವಾಮಿ ಪ್ರಶ್ನೆ

ಗ್ಯಾರಂಟಿಗಳಿಂದ ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದಿದ್ದ ಪ್ರಧಾನಿ ನರೇಂದ್ರ ಮೋದಿ ನಮ್ಮ ಗ್ಯಾರಂಟಿಗಳನ್ನೇ ಈಗ ಕದ್ದಿದ್ದಾರೆ. ಮೋದಿ ಜೊತೆ ಕೈ ಜೋಡಿಸಿರುವ ಎಚ್.ಡಿ.ದೇವೇಗೌಡ, ಪ್ರಜ್ವಲ್ ರೇವಣ್ಣ ಅಥವಾ ಸುಮಲತಾ ಸೇರಿದ 27 ಸಂಸದರು ರಾಜ್ಯದಲ್ಲಿ ಉದ್ಭವಿಸಿರುವ ಭೀಕರ ಬರಗಾಲದ ಬಗ್ಗೆ ಕೇಂದ್ರದಲ್ಲಿ ದನಿ ಎತ್ತಿಲ್ಲ ಎಂದು ದೂರಿದರು.

click me!