
ನವದೆಹಲಿ(ಆ.011) ಬಿಜೆಪಿ ಪ್ರಮುಖ ನಾಯಕಿ, ಮಾಜಿ ವಿದೇಶಾಂಗ ಸಚಿವೆ ದಿವಂಗತ ಸುಷ್ಮಾ ಸ್ವರಾಜ್ ಪುತ್ರಿಗೆ ದೆಹಲಿ ಬಿಜಪಿಯಲ್ಲಿ ಮಹತ್ವದ ಜವಾಬ್ದಾರಿ ನೀಡಲಾಗಿದೆ. ದೆಹಲಿ ಬಿಜೆಪಿ ಕಾರ್ಯದರ್ಶಿಯಾಗಿ ಬನ್ಸುರಿ ಸ್ವರಾಜ್ ನೇಮಕ ಮಾಡಲಾಗಿದೆ. ಬನ್ಸುರಿ ಜೊತೆಗೆ ದೆಹಲಿ ಬಿಜೆಪಿ ಕಾರ್ಯದರ್ಶಿಗಳಾಗಿ ಹರ್ಷಾ ಮಲ್ಹೋತ್ರ, ಯೋಗೇಂದ್ರ ಚಾಂದೋಲಿಯಾ ಹಾಗೂ ಕಮಲಜೀತ್ ಸೆಹ್ರಾವತ್ ನೇಮಕ ಮಾಡಲಾಗಿದೆ. ದೆಹಲಿ ಬಿಜೆಪಿ ಅಧ್ಯಕ್ಷ ವಿರೇಂದ್ರ ಸಚದೇವಾ ಈ ಕುರಿತು ಘೋಷಣೆ ಮಾಡಿದ್ದಾರೆ.
ವಕೀಲೆ ಹಾಗೂ ಉತ್ತಮ ವಾಗ್ಮಿಯಾಗಿರುವ ಬನ್ಸುರಿ ಸ್ವರಾಜ್ ತಾಯಿ ರೀತಿಯಲ್ಲೇ ನಾಯಕತ್ವ ಗುಣಗಳನ್ನು ಬೆಳೆಸಿಕೊಂಡಿದ್ದಾರೆ. ಇದೀಗ ದೆಹಲಿ ಬಿಜೆಪಿಯಲ್ಲಿ ಪ್ರಮುಖ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ದೆಹಲಿಯಲ್ಲಿ ಆಮ್ ಆದ್ಮಿ ಪಾರ್ಟಿಗೆ ಸೆಡ್ಡು ಹೊಡೆಯಲು ಬಿಜೆಪಿ ಮಹತ್ತರ ಬದಲಾವಣೆ ಮಾಡಿದೆ. ದೆಹಲಿ ಬಿಜೆಪಿಯಲ್ಲಿ ಮಹಿಳಾ ಯುವ ನಾಯಕಿಯಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ಹೊಸ ಮುಖಗಳಿಗೆ ಅವಕಾಶ ನೀಡಿರು ದೆಹಲಿ ಬಿಜಿಪಿ, ಪಕ್ಷವನ್ನು ಬಲಪಡಿಸಲು ನಿರ್ಧರಿಸಿದೆ.
ಸುಷ್ಮಾ ಸ್ವರಾಜ್ ಹುಟ್ಟುಹಬ್ಬ: ಹಳೆ ಫೋಟೋ ಪೋಸ್ಟ್ ಮಾಡಿ ಅಮ್ಮನ ನೆನೆದ ಅಪ್ಪ ಮಗಳು
ಬನ್ಸುರಿ ಸ್ವರಾಜ್ ಈ ವರ್ಷದ ಆರಂಭದಲ್ಲೇ ದೆಹಲಿ ಬಿಜೆಪಿಯ ಕಾನೂನು ತಂಡದಲ್ಲಿ ವಿಭಾಗದಲ್ಲಿ ಕೆಲಸ ಮಾಡಿದ್ದಾರೆ. ವಕೀಲೆಯಾಗಿರುವ ಬನ್ಸುರಿ ಸ್ವರಾಜ್, ದೆಹಲಿ ಬಿಜೆಪಿ ಹಲವು ಕೇಸ್‌ಗಳನ್ನು ಮುನ್ನಡೆಸುತ್ತಿದ್ದಾರೆ. ತಾಯಿ ಸುಷ್ಮಾ ಸ್ವರಾಜ್ ಪ್ರಧಾನಿ ಮೋದಿ ಸರ್ಕಾರದ ಮೊದಲ ಅವಧಿಯಲ್ಲಿ ವಿದೇಶಾಂಗ ಸಚಿವೆಯಾಗಿ ಸೇವೆ ಸಲ್ಲಿಸಿದ್ದಾರೆ. ಸುಷ್ಮಾ ಸ್ವರಾಜ್ ಅನಾರೋಗ್ಯದಿಂದ 2ನೇ ಅವಧಿಯಲ್ಲಿ ರಾಜಕೀಯದಿಂದ ದೂರ ಉಳಿದಿದ್ದರು. ಇನ್ನು 2019ರ ಆಗಸ್ಟ್‌ನಲ್ಲಿ ಸುಷ್ಮಾ ಸ್ವರಾಜ್ ನಿಧನರಾಗಿದ್ದಾರೆ. 67 ವರ್ಷದ ಸುಷ್ಮಾ ಸ್ವರಾಜ್ ಭಾರತದ ವಿದೇಶಾಂಗ ಸಚಿವೆಯಾಗಿ ದೇಶ ವಿದೇಶಗಳಲ್ಲಿ ಜನಪ್ರಿಯರಾಗಿದ್ದರು.
ಇದೀಗ ಬನ್ಸುರಿ ಸ್ವರಾಜ್ ಬಿಜೆಪಿಯಲ್ಲಿ ಹಂತ ಹಂತವಾಗಿ ಬೆಳೆಯುತ್ತಿದ್ದಾರೆ. ಇದೀಗ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ. ದೆಹಲಿ ಬಿಜೆಪಿ ಪ್ರಮುಖ ನಾಯಕರಿಲ್ಲದೆ ಸೊರಗಿದೆ. ಹೀಗಾಗಿ ದೆಹಲಿಯಲ್ಲಿ ಆಮ್ ಆದ್ಮಿ ಪಾರ್ಟಿ ಬಲಿಷ್ಠವಾಗಿ ರೂಪುಗೊಂಡಿದೆ. ಆಮ್ ಆದ್ಮಿ ಪಾರ್ಟಿ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಎದುರಿಸಲು ಸಮರ್ಥ ನಾಯಕರ ಅವಶ್ಯಕತೆ ಇದೆ. ಇದೀಗ ಈ ಸ್ಥಾನವನ್ನು ಬನ್ಸುರಿ ಸ್ವರಾಜ್ ಆಕ್ರಮಿಸಿಕೊಳ್ಳುವ ಸಾಧ್ಯತೆಗಳು ಕಾಣಿಸುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.