ಕಾಂಗ್ರೆಸ್‌ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆ ಜನರಿಗೆ ತಲುಪಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

Published : Nov 23, 2023, 04:45 AM IST
ಕಾಂಗ್ರೆಸ್‌ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆ ಜನರಿಗೆ ತಲುಪಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಸಾರಾಂಶ

ಕಾಂಗ್ರೆಸ್‌ ಜಾರಿಗೊಳಿಸಿರುವ ನಾಲ್ಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಗತಿ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಲಾಖೆಗಳ ಸಭೆ ನಡೆಸಿ ಮಾಹಿತಿ ಪಡೆದರು. ಯೋಜನೆಗಳು ಜನತೆಗೆ ತಲುಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು. 

ಬೆಂಗಳೂರು (ನ.23): ಕಾಂಗ್ರೆಸ್‌ ಜಾರಿಗೊಳಿಸಿರುವ ನಾಲ್ಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಗತಿ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಲಾಖೆಗಳ ಸಭೆ ನಡೆಸಿ ಮಾಹಿತಿ ಪಡೆದರು. ಯೋಜನೆಗಳು ಜನತೆಗೆ ತಲುಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು. ಇದೇ ವೇಳೆ ಗೃಹಲಕ್ಷ್ಮೀ ಯೋಜನೆಯಲ್ಲಿ ಸಮಸ್ಯೆಗಳು ಕಂಡು ಬಂದರೆ, ಅವುಗಳ ನಿವಾರಣೆಗಾಗಿ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗೃಹ ಲಕ್ಷ್ಮಿ ಅದಾಲತ್‌ ಆಯೋಜಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬುಧವಾರ ಗೃಹ ಕಚೇರಿ ಕೃಷ್ಣಾದಲ್ಲಿ ಶಕ್ತಿ ಯೋಜನೆ, ಗೃಹ ಜ್ಯೋತಿ, ಗೃಹ ಲಕ್ಷ್ಮೀ ಮತ್ತು ಅನ್ನಭಾಗ್ಯ ಯೋಜನೆ ಅನುಷ್ಠಾನ ಬಗ್ಗೆ ಚರ್ಚೆ ನಡೆಸಿದರು. ಸಭೆಯಲ್ಲಿ ಸಂಬಂಧಪಟ್ಟ ಸಚಿವರು ಮತ್ತು ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

100 ಕೋಟಿಯತ್ತ ಶಕ್ತಿ: ಗ್ಯಾರಂಟಿ ಯೋಜನೆಗಳಲ್ಲಿ ಪ್ರಮುಖವಾದ ಶಕ್ತಿ ಯೋಜನೆ ಜಾರಿಯಾದಾಗಿನಿಂದ ನ.1ರ ವರೆಗೆ ಒಟ್ಟು 99.75 ಕೋಟಿ ಮಹಿಳಾ ಪ್ರಯಾಣಿಕರು ಉಚಿತ ಸಾರಿಗೆ ಸೌಲಭ್ಯದ ಸದುಪಯೋಗ ಪಡೆದುಕೊಂಡಿರುತ್ತಾರೆ. ಇನ್ನೆರಡು ದಿನಗಳಲ್ಲಿ ನೂರು ಕೋಟಿ ದಾಟಲಿದೆ. ಪ್ರತಿ ತಿಂಗಳ ಪ್ರಯಾಣಿಕರ ಸಂಖ್ಯೆ ಏಪ್ರಿಲ್‌ 2023 ರಲ್ಲಿ 84.17 ಲಕ್ಷ ದಿಂದ ಶಕ್ತಿ ಯೋಜನೆ ಜಾರಿಯ ನಂತರ 1.08 ಕೋಟಿಯಿಂದ 1.15 ಕೋಟಿ ವರೆಗೆ ಹೆಚ್ಚಳ ವಾಗಿದೆ. ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳಿಗೆ ಒಟ್ಟು 828 ಸಾಮಾನ್ಯ ಹಾಗೂ 145 ವಿದ್ಯುತ್‌ ಚಾಲಿತ ಬಸ್‌ಗಳನ್ನು ಸೇರ್ಪಡೆಗೊಳಿಸಲಾಗುತ್ತಿದೆ. ಬಸ್‌ಗಳ ಖರೀದಿ ಪ್ರಕ್ರಿಯೆಯನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕೇಂದ್ರ ಸರ್ಕಾರ ರಾಜ್ಯಕ್ಕೆ ಬರ ಪರಿಹಾರ ನೀಡುತ್ತಿಲ್ಲ: ಸಚಿವ ಚಲುವರಾಯಸ್ವಾಮಿ

ಅನ್ನಭಾಗ್ಯಕ್ಕೆ 2444 ಕೋಟಿ ಡಿಬಿಟಿ: ಇನ್ನು, ಅನ್ನಭಾಗ್ಯ ಯೋಜನೆಯಡಿ ಅಕ್ಟೋಬರ್‌ ತಿಂಗಳಲ್ಲಿ 1,10,96,413 ಕಾರ್ಡುದಾರರಿಗೆ ಡಿಬಿಟಿ ಮಾಡಲಾಗಿದೆ. ಈ ವರೆಗೆ ಒಟ್ಟು 2,444.11 ಕೋಟಿ ರೂ. ಮೊತ್ತವನ್ನು ಡಿಬಿಟಿ ಮೂಲಕ ವರ್ಗಾಯಿಸಲಾಗಿದೆ. 12.95 ಲಕ್ಷ ಕಾರ್ಡ್‌ದಾರರ ಬ್ಯಾಂಕ್‌ ಖಾತೆಗೆ ಆಧಾರ್‌ ಲಿಂಕ್‌ ಮಾಡುವ ಮೂಲಕ ಯೋಜನೆಗೆ ಸೇರ್ಪಡೆಗೊಳಿಸಲಾಗಿದೆ. 2.60 ಲಕ್ಷ ಹೊಸ ಖಾತೆಗಳನ್ನು ಅಂಚೆ ಕಚೇರಿಗಳಲ್ಲಿ ತೆರೆಯಲಾಗಿದೆ ಎಂದು ಮಾಹಿತಿ ನೀಡಿದರು. 7.67 ಲಕ್ಷ ಅನರ್ಹ ಪಡಿತರ ಚೀಟಿಗಳ ವಿಷಯದಲ್ಲಿ ಸಮಸ್ಯೆಗಳನ್ನು ಗುರುತಿಸಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಬಹುತೇಕ ಪ್ರಕರಣಗಳಲ್ಲಿ ತಾಂತ್ರಿಕ ಸಮಸ್ಯೆಯಾಗಿರುವುದರಿಂದ ಎರಡನೇ ಹಿರಿಯ ವ್ಯಕ್ತಿಯ ಖಾತೆಗೆ ಹಣ ವರ್ಗಾಯಿಸುವ ಕುರಿತಂತೆ ಸಚಿವ ಸಂಪುಟದ ಮುಂದೆ ಮಂಡಿಸಬೇಕು. ಡಿ.31 ರೊಳಗೆ ಎಲ್ಲ ಅರ್ಹರಿಗೆ ಸೌಲಭ್ಯ ದೊರಕುವಂತೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

1.50 ಕೋಟಿ ಕುಟುಂಬಕ್ಕೆ ಗೃಹಜ್ಯೋತಿ: ಗೃಹ ಜ್ಯೋತಿ ಯೋಜನೆಯಡಿ ಈ ವರೆಗೆ 1.62 ಕೋಟಿ ಜನ ನೋಂದಾಯಿಸಿಕೊಂಡಿದ್ದು, 1.50 ಕೋಟಿ ಕುಟುಂಬಗಳಿಗೆ ಈ ಯೋಜನೆಯ ಸೌಲಭ್ಯ ದೊರೆಯುತ್ತಿದೆ. ಆಗಸ್ಟ್‌ ನಿಂದ ಈ ವರೆಗೆ 2900 ಕೋಟಿ ರೂ. ಭರಿಸಲಾಗಿದೆ. ಗೃಹ ಜ್ಯೋತಿ ಯೋಜನೆಯಡಿ ಕುಟೀರ ಜ್ಯೋತಿ, ಭಾಗ್ಯ ಜ್ಯೋತಿ, ಅಮೃತ ಜ್ಯೋತಿ ಯೋಜನೆಯ ಫಲಾನುಭವಿಗಳು ಇಲಾಖೆಯ ದತ್ತಾಂಶದಲ್ಲಿಯೇ ಸೇರ್ಪಡೆಗೊಳಿಸಲಾಗಿದೆ. ಈ ಫಲಾನುಭವಿಗಳು ಯಾರೂ ಗೃಹ ಜ್ಯೋತಿಯಿಂದ ಬಿಟ್ಟು ಹೋಗಬಾರದು ಎಂದು ನಿರ್ದೇಶನ ನೀಡಿದರು.

ಕೇಂದ್ರ ಸರ್ಕಾರದ ಕಡೆ ಬೊಟ್ಟು ಮಾಡಿ ತೋರಿಸೋದಲ್ಲ: ಸಂಸದೆ ಸುಮಲತಾ ಅಂಬರೀಶ್

ಮಹಿಳೆಯರಿಗೆ ಅನುಕೂಲವಾಗಿರುವ ಗೃಹಲಕ್ಷ್ಮೀ ಯೋಜನೆಗೆ ಈವರೆಗೆ 1.17 ಕೋಟಿ ಫಲಾನುಭವಿಗಳು ನೋಂದಣಿಯಾಗಿದ್ದು, 1.10 ಕೋಟಿ ಫಲಾನುಭವಿಗಳಿಗೆ ನೆರವಾಗಿದೆ. ಖಾತೆಯ ಮಾಹಿತಿಯಲ್ಲಿ ಗೊಂದಲ, ಆಧಾರ್‌ ಲಿಂಕ್‌ ಆಗದಿರುವುದು ಮೊದಲಾದ ಕಾರಣಗಳಿಂದ ಹಣ ವರ್ಗಾವಣೆಗೆ ತೊಡಕಾಗಿದೆ. ಅಂಗನವಾಡಿ ಕಾರ್ಯಕರ್ತೆಯರು ಫಲಾನುಭವಿಗಳನ್ನು ಬ್ಯಾಂಕಿಗೇ ಕರೆದೊಯ್ದು ಸಮಸ್ಯೆ ಬಗೆಹರಿಸಲಾಗುತ್ತಿದೆ. ಕೆಲವೇ ದಿನಗಳಲ್ಲಿ ಈ ಪ್ರಕ್ರಿಯೆ ಪೂರ್ಣಗೊಳಿಸಿ, ಎಲ್ಲ ಅರ್ಹ ಫಲಾನುಭವಿಗಳಿಗೆ ನೆರವು ಒದಗಿಬೇಕು. ಡಿಸೆಂಬರ್‌ ವೇಳೆಗೆ ಎಲ್ಲ ಅರ್ಹ ಫಲಾನುಭವಿಗಳಿಗೆ ನಗದು ವರ್ಗಾವಣೆಯನ್ನು ಖಾತರಿ ಪಡಿಸಿಕೊಳ್ಳಬೇಕು ಎಂದರು. ಗೃಹಲಕ್ಷ್ಮಿ ಫಲಾನುಭವಿಗಳು ಬಿಟ್ಟು ಹೋಗಿದ್ದಲ್ಲಿ ಅಥವಾ ಬ್ಯಾಂಕ್‌ ಖಾತೆ ಆಧಾರ್‌ ಲಿಂಕ್‌ ಮತ್ತಿತರ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗೃಹ ಲಕ್ಷ್ಮಿ ಅದಾಲತ್‌ ಆಯೋಜಿಸಿ, ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಬಂಗಾಳದಲ್ಲಿ ಶೀಘ್ರ ಜಂಗಲ್‌ ರಾಜ್ಯ ಅಂತ್ಯ : ಮೋದಿ ಪಣ
ಗೃಹಲಕ್ಷ್ಮೀ ಪ್ರಕರಣ ಬೆಳಕಿಗೆ ತಂದ ಶಾಸಕ ಮಹೇಶ ಟೆಂಗಿನಕಾಯಿಗೆ ಭರ್ಜರಿ ಸ್ವಾಗತ