
ಮೈಸೂರು (ಅ.04): ಒಂದೊಂದು ಸರಿ ಒಳ್ಳೆಯವರು ರಾಜ್ಯ ಅಳುತ್ತಾರೆ. ಒಂದೊಂದು ಬಾರಿ ರಾಕ್ಷಸರು ರಾಜ್ಯ ಆಳುತ್ತಾರೆ. ರಾಕ್ಷಸರ ರಾಜ್ಯಭಾರ ಈಗ ನಡೆಯುತ್ತಿದೆ. ಶಿವಮೊಗ್ಗ ಪ್ರಕರಣ, ಕೋಲಾರದ ಪ್ರಕರಣ ನೋಡಿದರೆ ಇದು ಗೊತ್ತಾಗುತ್ತಿದೆ. ಕರ್ನಾಟಕದಲ್ಲಿ ಒಳ್ಳೆಯವರ ಆಡಳಿತ ಹೋಗಿ ರಾಕ್ಷಸರ ರಾಜ್ಯ ಆಡಳಿತ ಬಂದಿದೆ ಎಂದು ಸಂಸದ ಪ್ರತಾಪ್ ಸಿಂಹ ರಾಜ್ಯ ಸರ್ಕಾರದ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಶಿವಮೊಗ್ಗ ಗಲಭೆ ಪ್ರಕರಣದ ಕುರಿತು ಮಾತನಾಡಿದ ಅವರು, ರಾಕ್ಷಸರ ರಾಜ್ಯಭಾರ ಈಗ ನಡೆಯುತ್ತಿದೆ. ಶಿವಮೊಗ್ಗ ಪ್ರಕರಣ, ಕೋಲಾರದ ಪ್ರಕರಣ ನೋಡಿದರೆ ಇದು ಗೊತ್ತಾಗುತ್ತಿದೆ. ಕರ್ನಾಟಕದಲ್ಲಿ ಒಳ್ಳೆಯವರ ಆಡಳಿತ ಹೋಗಿ ರಾಕ್ಷಸರ ರಾಜ್ಯ ಆಡಳಿತ ಬಂದಿದೆ. ಕಲ್ಲು ಹೊಡೆಯುವ ಸಂಸ್ಕೃತಿ ಹಿಂದೂ ಧರ್ಮದವರಿಗೆ ಗೊತ್ತಿಲ್ಲ. ಸಾಮೂಹಿಕ ಪ್ರಾರ್ಥನೆ ಮಾಡಿ ಒಟ್ಟಾಗಿ ಹೊರಗಡೆ ಬಂದು ಚಾಕು ಚೂರಿ ಹಿಡಿದು ಹಿಂಬಂಧಿಯಿಂದ ಚುಚ್ಚುವುದು ಹಿಂದೂ ಸಂಸ್ಕೃತಿ ಅಲ್ಲ. ಚುಕ್ಕಾಣಿ ಹಿಡಿದವರು ಮನಸ್ಥಿತಿಯಂತೆ ಉಳಿದವರು ಇರುತ್ತಾರೆ ಎಂದು ಹೇಳಿದರು.
ಮೀಸಲಾತಿ ಬೇಕಂದ್ರೆ ಬಸ್ಸಿಗೆ ಬೆಂಕಿ ಹಚ್ಚಿ, ಕಲ್ಲು ತೂರಬೇಕೆಂದ ಹಡಪದ ಅಪ್ಪಣ್ಣ ಸ್ವಾಮೀಜಿ!
ಮುಖ್ಯಮಂತ್ರಿ ಸಿದ್ದರಾಮಯ್ಯ ಎಲ್ಲಾ ನೋಡಿ ಕಣ್ಮುಚ್ಚಿ ಕುಳಿತಿದ್ದಾರೆ. ಪಿಎಫ್‌ಐ, ಕೆಎಫ್‌ಡಿ ಮೇಲಿನ ಕೇಸ್ ವಾಪಾಸ್ ಪಡೆದ ಕಾರಣ ಇವತ್ತು ವಿಕೃತಿಗಳು ವಿಜೃಂಭಿಸುತ್ತಿವೆ. ಇದಕ್ಕೆಲ್ಲ ಸಿಎಂ ಸಿದ್ದರಾಮಯ್ಯ ಕಾರಣವಾಗಿದ್ದಾರೆ. ಅವರು ಬಿಗಿಯಾಗಿದ್ದರೆ ಈ ರೀತಿ ಆಗುತ್ತಿರಲಿಲ್ಲ. ಕೆಎಫ್‌ಡಿ, ಪಿಎಫ್ಐ ಸಂಘಟನೆಗಳು ಎದ್ದು ನಿಂತಿವೆ. ಸರ್ಕಾರಕ್ಕೆ ಲಂಗು ಲಾಗಾಮು ಇಲ್ಲ. ಮುಸ್ಲಿಂ ಪುಂಡರು ಎಸ್ಪಿ ಮೇಲೆ ಕಲ್ಲು ತೂರುತ್ತಾರೆ. ಕೋಲಾರದಲ್ಲಿ ದಲಿತ ಸಂಸದರ ಮೇಲೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಲ್ಲೆ ಮಾಡುತ್ತಾರೆ ಎಂದು ಕಿಡಿಕಾರಿದರು.
ತಮಿಳುನಾಡು ಸಿಎಂ ಸ್ಟಾಲಿನ್ ವಿರುದ್ಧ ಮಾತನಾಡಲು ಕಾಂಗ್ರೆಸ್ ನಾಯಕರ ತೊಡೆ ನಡುಗುತ್ತದೆ: ಕಾವೇರಿ ನೀರು ವಿಚಾರವಾಗಿ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ವಿರುದ್ದ ಒಬ್ಬರಾದರೂ ಮಾತಾಡಿದ್ದಾರಾ? ಈ ಸರಕಾರಕ್ಕೆ ಬೆನ್ನು ಮೂಳೆಯೆ ಇಲ್ಲ. ಸ್ಟಾಲಿನ್ ಬಗ್ಗೆ ಒಂದು ಹೇಳಿಕೆ ಕೊಡಲಿ ನೋಡೋಣಾ? ಸಿದ್ದರಾಮಯ್ಯ ಎದುರಾಳಿಗಳ ಮೇಲೆ ಉಡಾಫೆಯಿಂದ ಕೂಗಾಡುತ್ತಾರೆ. ಸ್ಟಾಲಿನ್ ಬಗ್ಗೆ ಯಾಕೆ ಧ್ವನಿ ಎತ್ತುತ್ತಿಲ್ಲ. ಅವರ ವಿರುದ್ದ ಮಾತಾಡಲು ಕಾಂಗ್ರೆಸ್ ನ ಎಲ್ಲಾ ನಾಯಕರಿಗೆ ತೊಡೆ ನಡುಗುತ್ತದೆ ಎಂದು ಕಿಡಿಕಾರಿದರು.
ಜೆಡಿಎಸ್-ಬಿಜೆಪಿ ಮೈತ್ರಿ ಬೆನ್ನಲ್ಲೇ ದೊಡ್ಡಗೌಡರ ಮುಂದೆ ಮಂಡಿಯೂರಿ ನಮಸ್ಕರಿಸಿದ ಸಂಸದ ಪ್ರತಾಪ್ ಸಿಂಹ
ಮಹಿಷಾ ದಸರಾ ಆರಂಭ ಮಾಡಿ ಮೈಸೂರಿನ ಸ್ವಾಸ್ಥ್ಯ ಕೆಡಿಸಿದ್ದು ಸಿದ್ದರಾಮಯ್ಯ ತಾನೇ? ಟಿಪ್ಪು ಜಯಂತಿ ಮಾಡಿ ರಾಜ್ಯದ ಸೌಹಾರ್ದತೆ ಕೆಡಿಸಿದ್ದು ಸಿದ್ದರಾಮಯ್ಯ ತಾನೇ? ಟಿಪ್ಪು ಜಯಂತಿ ಹಿನ್ನಲೆಯಲ್ಲಿ ಸಾಲು ಸಾಲು ಹಿಂದೂ ಕಾರ್ಯಕರ್ತರ ಕೊಲೆಯಾಯಿತು. ಇದಕ್ಕೆ ಯಾರು ಕಾರಣ ಎಂದು ಅವರು ಪ್ರಶ್ನಿಸಿದರು. ಸಿದ್ದರಾಮಯ್ಯ ಪ್ರತಿ ಬಾರಿಯು ಮೋದಿ ವಿರುದ್ಧ ಮಾತಾಡುತ್ತಾರೆ. ಇದು ಒಂಥರ ಆಕಾಶದ ಕಡೆ ಮುಖ ಮಾಡಿ ಉಗಿದಂತೆ. ಈ ಕೆಲಸವನ್ನು ನಿರಂತರವಾಗಿ ಸಿದ್ದರಾಮಯ್ಯ ಮಾಡುತ್ತಲೆ ಇದ್ದಾರೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.