ಸುಪ್ರೀಂ ಬಿಗ್ ಶಾಕ್: ಕುಮಾರಸ್ವಾಮಿಗೆ ಎದುರಾಯ್ತು ಸಂಕಷ್ಟ..!

By Suvarna NewsFirst Published Jan 18, 2021, 4:30 PM IST
Highlights

ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಗೆ ಸಂಕಷ್ಟ ಎದುರಾಗಿದೆ.

ನವದೆಹಲಿ, (ಜ.18): ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ತಡೆ ನೀಡಲು ಸುಪ್ರೀಂಕೋರ್ಟ್ ಮೊರೆ ಹೋಗಿದ್ದ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿಗೆ ಹಿನ್ನಡೆಯಾಗಿದೆ.

ಹೌದು.. ಹಲಗೆ ವಡೇರಹಳ್ಳಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ತಡೆ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದ್ದು, ತನಿಖೆ ಮುಂದುವರೆಸುವಂತೆ ಸೂಚಿಸಿದೆ.

ಬೈಎಲೆಕ್ಷನ್ ಟೈಮಲ್ಲಿ HDKಗೆ ಕಂಟಕ, ಕರೆದಾಗ ಬರಲೇಬೇಕು!...

ಅಲ್ಲದೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಮಾಹಿತಿ ಕೋರಿ ನ್ಯಾ. ಅಶೋಕ್ ಭೂಷಣ್​ ‌ನೇತೃತ್ವದ ಪೀಠ, ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಹಲಗೆ ವಡೇರಹಳ್ಳಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಕುಮಾರಸ್ವಾಮಿಗೆ ಸಮನ್ಸ್ ಜಾರಿಗೊಳಿಸಿತ್ತು. ಹೀಗಾಗಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ನ ಆದೇಶ ಪ್ರಶ್ನಿಸಿ, ಎಚ್‌​ಡಿಕೆ ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ ಹೈಕೋರ್ಟ್ ಅರ್ಜಿ ವಜಾಗೊಳಿಸಿತ್ತು.

ಈ ಹಿನ್ನ್ನೆಲೆಯಲ್ಲಿ ಹೈಕೋರ್ಟ್​ನ ತೀರ್ಪನ್ನು ಪ್ರಶ್ನಿಸಿ ಕುಮಾರಸ್ವಾಮಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಆದರೆ, ಸುಪ್ರೀಂ ಕೋರ್ಟ್ ಸಹ ಅರ್ಜಿ ವಜಾ ಮಾಡಿದ್ದು, ಪ್ರಕರಣದ ತನಿಖೆ ಮುಂದುವರಿಸುವಂತೆ ತಿಳಿಸಿದೆ. ಇದರಿಂದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಗೆ ಸಂಕಷ್ಟ ಎದುರಾಗಿದೆ.

click me!