ಡಿನೋಟೀಫಿಕೇಶನ್ ಪ್ರಕರಣದಲ್ಲಿ ಇದೀಗ ಕರ್ನಾಟಕದ ಹೈಕೋರ್ಟ್ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ಬಿಗ್ ಶಾಕ್ ನೀಡಿದೆ.
ಬೆಂಗಳೂರು, (ಡಿ.22): ಡಿನೋಟೀಫಿಕೇಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಮತ್ತೆ ಸಂಕಷ್ಟ ಎದುರಾಗಿದೆ.
ಬೆಳ್ಳಂದೂರು ಬಳಿಯ ಜಮೀನು ಡಿನೋಟೀಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ರದ್ದು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿತ್ತು. ಆದರೆ ಪ್ರಕರಣ ರದ್ದು ಮಾಡಲು ಹೈಕೋರ್ಟ್ ಏಕಸದಸ್ಯಪೀಠ ನಿರಾಕರಿಸಿದೆ. ಈ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪನವರಿಗೆ ಸಂಕಷ್ಟ ಎದುರಾಗಿದೆ.
'ಕೈ'ಗೆ ಗುಡ್ಬೈ: ಜೆಡಿಎಸ್ ಜೊತೆ ಮೈತ್ರಿ ಬಗ್ಗೆ ಬಿಜೆಪಿ ಶಾಸಕ ಸುಳಿವು
ವಾಸುದೇವರೆಡ್ಡಿ ಎಂಬುವವರು 2013ರಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಲೋಕಾಯುಕ್ತ ವಿಶೇಷ ಕೋರ್ಟ್ ತನಿಖೆಗೆ ಆದೇಶ ನೀಡಿತ್ತು. ಮಾಜಿ ಸಚಿವ ಆರ್.ವಿ.ದೇಶಪಾಂಡೆ ವಿರುದ್ಧವೂ ಕೇಸ್ ದಾಖಲಾಗಿತ್ತು. ನ್ಯಾ.ಜಾನ್ ಮೈಕೆಲ್ ಕುನ್ಹಾ ಅವರಿದ್ದ ಏಕಸದಸ್ಯಪೀಠ ಆದೇಶ ಹೊರಡಿಸಿದೆ.