ದಾವೋಸ್‌ ಶೃಂಗಕ್ಕೆ ಡಿಸಿಎಂ ಡಿಕೆಶಿ ಇಂದು ಪ್ರಯಾಣ - ಎಲ್ಲರ ಸಲಹೆ ಮೇರೆಗೆ ಭೇಟಿ

Kannadaprabha News   | Kannada Prabha
Published : Jan 20, 2026, 06:03 AM IST
DK Shivakumar

ಸಾರಾಂಶ

ವಿಶ್ವ ಆರ್ಥಿಕ ವೇದಿಕೆಯ ವಾರ್ಷಿಕ ಸಮಾವೇಶದಲ್ಲಿ ಪಾಲ್ಗೊಳ್ಳುವ ಸಲುವಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಮಂಗಳವಾರ ಸ್ವಿಜರ್‌ಲೆಂಡ್‌ನ ದಾವೋಸ್‌ಗೆ ಪ್ರಯಾಣ ಬೆಳೆಸಲಿದ್ದಾರೆ.

ಬೆಂಗಳೂರು : ವಿಶ್ವ ಆರ್ಥಿಕ ವೇದಿಕೆಯ ವಾರ್ಷಿಕ ಸಮಾವೇಶದಲ್ಲಿ ಪಾಲ್ಗೊಳ್ಳುವ ಸಲುವಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಮಂಗಳವಾರ ಸ್ವಿಜರ್‌ಲೆಂಡ್‌ನ ದಾವೋಸ್‌ಗೆ ಪ್ರಯಾಣ ಬೆಳೆಸಲಿದ್ದಾರೆ. ಜ.18ರಂದು ಶಿವಕುಮಾರ್‌ ಅವರು ದಾವೋಸ್‌ ಪ್ರವಾಸ ನಿಗದಿಯಾಗಿತ್ತು. ಆದರೆ, ದೆಹಲಿಯಲ್ಲಿ ವರಿಷ್ಠರೊಂದಿಗಿನ ಸಭೆ ಹಿನ್ನೆಲೆಯಲ್ಲಿ ಪ್ರವಾಸ ರದ್ದು ಮಾಡಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿರುವ ಡಿಕೆಶಿ, ಸಿಎಂ ಸಿದ್ದರಾಮಯ್ಯ ಅವರು ಕೂಡ ದಾವೋಸ್‌ಗೆ ಹೋಗಲು ಹೇಳಿದ್ದಾರೆ. ವಿರೋಧ ಪಕ್ಷದ ಸ್ನೇಹಿತರೂ ನನಗೆ ಅದೇ ಸಲಹೆ ನೀಡುತ್ತಿದ್ದಾರೆ. ರಾಜ್ಯದ ಹಿತ ವಿಚಾರದಲ್ಲಿ ಕೆಲವೊಮ್ಮೆ ಅವರ ಸಲಹೆಗಳನ್ನು ಸ್ವೀಕರಿಸಬೇಕು ಎಂದರು.

ಮಂಗಳವಾರ ದಾವೋಸ್‌ಗೆ ತೆರಳಲು ಅನುಮತಿ

ಅಲ್ಲದೆ, ಪಕ್ಷದ ವರಿಷ್ಠರೊಂದಿಗೆ ಮಾತುಕತೆ ನಡೆಸುವ ಉದ್ದೇಶದೊಂದಿಗೆ 3 ದಿನ ದೆಹಲಿಯಲ್ಲೇ ಉಳಿದಿದ್ದರು. ಈ ಬಗ್ಗೆ ಬಿಜೆಪಿಗರು ರಾಜಕೀಯಕ್ಕಾಗಿ ದಾವೋಸ್ ಪ್ರವಾಸ ಕೈಬಿಟ್ಟಿರುವುದು ಸರಿಯಲ್ಲ ಎಂದು ಟೀಕಿಸಿದ್ದರು. ಅದಕ್ಕೆ ಪ್ರತಿಕ್ರಿಯಿಸಿರುವ ಶಿವಕುಮಾರ್‌, ಮಂಗಳವಾರ ದಾವೋಸ್‌ಗೆ ತೆರಳಲು ಅನುಮತಿ ಸಿಕ್ಕಿದೆ.

ಅವರ ಮಾತಿನಲ್ಲಿ ಅರ್ಥವಿದೆ. ತಪ್ಪು ಎಂದು ನಾನು ಹೇಳುವುದಿಲ್ಲ

ದಾವೋಸ್ ಪ್ರವಾಸ ಕೈಬಿಟ್ಟಿರುವುದರ ಕುರಿತು ಬಿಜೆಪಿ ಟೀಕೆಗೆ ಉತ್ತರಿಸಿ, ಅವರ ಮಾತಿನಲ್ಲಿ ಅರ್ಥವಿದೆ. ತಪ್ಪು ಎಂದು ನಾನು ಹೇಳುವುದಿಲ್ಲ ಎಂದರು.

- 18ರಂದು ನಿಗದಿಯಾಗಿದ್ದ ಡಿಕೆಶಿ ಪ್ರಯಾಣ

- ವರಿಷ್ಠರ ಭೇಟಿ ಹಿನ್ನೆಲೆಯಲ್ಲಿ ರದ್ದಾಗಿದ್ದ ಪ್ರವಾಸ

- ಇದೀಗ ದಾವೋಸ್‌ಗೆ ತೆರಳಲಿರುವ ಡಿಸಿಎಂ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಏಕಕಾಲದಲ್ಲಿ ಸ್ಥಳೀಯ ಸಂಸ್ಥೆ ಎಲೆಕ್ಷನ್‌ ಬಗ್ಗೆ ಚಿಂತನೆ : ಡಿ.ಕೆ.ಶಿವಕುಮಾರ್‌
ಫೆಬ್ರವರಿಯಿಂದ ರಾಜ್ಯದಲ್ಲಿ ಎಸ್‌ಐಆರ್‌?