
ಬೆಂಗಳೂರು, (ಜೂನ್,08): ಪ್ರಭಾವಿ ಲಿಂಗಾಯತ ನಾಯಕರಾದ ಹಾಲಿ ರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆ ಹಾಗೂ ಮಾಜಿ ಸಂಸದ ರಮೇಶ್ ಕತ್ತಿ ಹೆಸರು ಬದಿಗಿಟ್ಟು ಬಿಜೆಪಿ ಹೈಕಮಾಂಡ್, ಕರ್ನಾಟಕ ರಾಜ್ಯಸಭಾ ಚುನಾವಣೆಗೆ ಈರಣ್ಣ ಕಡಾಡಿ ಮತ್ತು ಅಶೋಕ್ ಗಸ್ತಿ ಎನ್ನುವ ಸಾಮಾನ್ಯ ಕಾರ್ಯರ್ತರಿಗೆ ಟಿಕೆಟ್ ನೀಡಿದೆ.
ಇದು ರಾಜ್ಯ ಬಿಜೆಪಿಯಲ್ಲಿ ಅಚ್ಚರಿಗೆ ಕಾರಣವಾಗಿದೆ. ಇನ್ನು ಮತ್ತೊಂದೆಡೆ ಎಚ್.ಡಿ. ದೇವೇಗೌಡ ಸಹ ರಾಜ್ಯಸಭಾ ಚುನಾವಣೆಗೆ ಸ್ಪರ್ಧಿಸಲು ಗ್ರೀನ್ ಸಿಗ್ನಲ್ ನೀಡಿದ್ದಾರೆ.
ರಾಜ್ಯಸಭೆ ಚುನಾವಣೆ: ಬಿಜೆಪಿಯಿಂದ ಅನಿರೀಕ್ಷಿತ ಅಭ್ಯರ್ಥಿಗಳ ಘೋಷಣೆ!
ಈ ಬಗ್ಗೆ ಟ್ವೀಟ್ ಮಾಡಿರುವ ಎಚ್.ಡಿ.ಕುಮಾರಸ್ವಾಮಿ, ನಮ್ಮ ಪಕ್ಷದ ಶಾಸಕರು, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಷ್ಟ್ರದ ಹಲವು ನಾಯಕರ ಮನವಿಯ ಮೇರೆಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರು ರಾಜ್ಯಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಖಚಿತಪಡಿಸಿದ್ದಾರೆ.
ನಾಳೆ ಅಂದ್ರೆ ಜೂನ್ 09ರಂದು ದೇವೇಗೌಡ್ರು ನಾಮಪತ್ರ ಸಲ್ಲಿಕೆ ಮಾಡುವರು. ಎಲ್ಲರ ಒಮ್ಮತದ ಅಭಿಪ್ರಾಯಕ್ಕೆ ಸಮ್ಮತಿಸಿದ ದೇವೇಗೌಡರಿಗೆ ಧನ್ಯವಾದಗಳು ತಿಳಿಸಿದ್ದಾರೆ.
ರಾಜಕೀಯದಲ್ಲಿ ಜನರಿಂದಲೇ ಗೆಲುವು ಸೋಲುಗಳನ್ನು ಕಂಡಿರುವ, ಜನರಿಂದಲೇ ದೇಶದ ಅತ್ಯುನ್ನತ ಸ್ಥಾನಕ್ಕೇರಿದ್ದ ಜನನಾಯಕ ದೇವೇಗೌಡರನ್ನು ರಾಜ್ಯಸಭೆ ಪ್ರವೇಶಿಸುವಂತೆ ಮನವೊಲಿಸುವುದು ಸುಲಭದ ಕೆಲಸವಾಗಿರಲಿಲ್ಲ. ಆದರೆ, ಎಲ್ಲರ ಆಶೋತ್ತರಗಳಿಗೆ ಪ್ರೀತಿಪೂರ್ವಕವಾಗಿ ಮಣಿದಿದ್ದಾರೆ. ರಾಜ್ಯಸಭೆಯಲ್ಲಿ ದೇವೇಗೌಡರು ರಾಜ್ಯದ ಅಗ್ರ ಪ್ರತಿನಿಧಿಯಾಗಲಿದ್ದಾರೆ ಎಂದು ಹೆಚ್.ಡಿ ಕುಮಾರಸ್ವಾಮಿ ಅವರು ಟ್ವಿಟರ್ನಲ್ಲಿ ಬರೆದುಕೊಂಡಿದ್ದಾರೆ.
ಇದೇ ಜೂನ್ 19ರಂದು ಕರ್ನಾಟಕದ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಅಂದೇ ಫಲಿತಾಂಶ ಪ್ರಕಟವಾಗಲಿದೆ. ಈಗಾಗಲೇ ಕಾಂಗ್ರೆಸ್‌ನಿಂದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಅಖಾಡದಲ್ಲಿದ್ದಾರೆ. ಇದೀಗ ದೇವೇಗೌಡ್ರು ಸಹ ತಮ್ಮ ಪಕ್ಷದ ಜತೆಗೆ ಕಾಂಗ್ರೆಸ್ ಬೆಂಬಲದೊಂದಿಗೆ ಸ್ಪರ್ಧಿಸಲು ಮುಂದಾಗಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.