ಕೇಂದ್ರ ಹಾಗೂ ರಾಜ್ಯದಲ್ಲಿ ಆಡಳಿತ ಮಾಡುತ್ತಿರುವ ಬಿಜೆಪಿ ಸರ್ಕಾರ ಜನರ ಆಶೋತ್ತರಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿದ್ದು, ಪರಿಣಾಮವಾಗಿ ಮುಂದಿನ ದಿನಗಳಲ್ಲಿ ದೇಶ ಹಾಗೂ ರಾಜ್ಯದಲ್ಲಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಬರುವುದು ಖಚಿತ ಎಂದು ಸಚಿವ ಎಂಟಿಬಿ ನಾಗರಾಜ್ ತಿಳಿಸಿದರು.
ಹೊಸಕೋಟೆ (ಸೆ.6) : ಕೇಂದ್ರ ಹಾಗೂ ರಾಜ್ಯದಲ್ಲಿ ಆಡಳಿತ ಮಾಡುತ್ತಿರುವ ಬಿಜೆಪಿ ಸರ್ಕಾರ ಜನರ ಆಶೋತ್ತರಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿದ್ದು, ಪರಿಣಾಮವಾಗಿ ಮುಂದಿನ ದಿನಗಳಲ್ಲಿ ದೇಶ ಹಾಗೂ ರಾಜ್ಯದಲ್ಲಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಬರುವುದು ಖಚಿತ ಎಂದು ಸಚಿವ ಎಂಟಿಬಿ ನಾಗರಾಜ್ ತಿಳಿಸಿದರು. ನಗರದ ಖಾಸಗಿ ಸಭಾಂಗಣದಲ್ಲಿ ಬಿಜೆಪಿ ಜನೋತ್ಸವ ಪೂರ್ವಭಾವಿ ಸಭೆ ಹಾಗೂ ನಗರ ಬಿಜೆಪಿ ಯುವ ಮೋರ್ಚಾ ವತಿಯಿಂದ ಆಯೋಜಿಸಿದ್ದ ಔತಣಕೂಟ ಕಾರ್ಯಕ್ರಮದಲ್ಲಿ ಮಾತನಾಡಿದರು.
ಬಿಎಸ್‌ವೈಗೆ ಸಂಸದೀಯ ಮಂಡಳಿಯಲ್ಲಿ ಸ್ಥಾನ, ಬಿಜೆಪಿಗೆ ಬಲ: ಎಂಟಿಬಿ ನಾಗರಾಜ್
ರಾಜ್ಯ ಬಿಜೆಪಿ ಸರ್ಕಾರಕ್ಕೆ 3 ವರ್ಷ, ಬಸವರಾಜ್ ಬೊಮ್ಮಾಯಿ ಅವರು ಸಿಎಂ ಆಗಿ ಒಂದು ವರ್ಷ ಪೂರೈಸಿದ ಹಿನ್ನೆಲೆ ಸಂಭ್ರಮವನ್ನು ಜನರ ಮಧ್ಯೆ ಆಚರಣೆ ಮಾಡುವ ದೃಷ್ಟಿಯಿಂದ ಜನೋತ್ಸವ ಕಾರ್ಯಕ್ರಮ ಆಯೋಜಿಸಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರ ನೀಡುತ್ತಿರುವ ಎಲ್ಲಾ ಸೌಲಭ್ಯಗಳ ಬಗ್ಗೆ ಜನರಿಗೆ ತಿಳಿಸುವ ದೊಡ್ಡ ಕಾರ್ಯಕ್ರಮ ಇದಾಗಿದೆ. ಕಾರ್ಯಕ್ರಮಕ್ಕೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಅವರು ಆಗಮಿಸುತ್ತಿದ್ದು, ಸುಮಾರು ಎರಡೂವರೆ ಲಕ್ಷ ಜನ ಸೇರುವ ನಿರೀಕ್ಷೆಯಿದೆ. ಹೊಸಕೋಟೆ ತಾಲೂಕಿನ ಪ್ರತಿ ಬೂತ್‌ಗೆ ಒಂದರಂತೆ ಒಟ್ಟು 300 ಬಸ್‌ಗಳ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.
ಬಿಜೆಪಿ ಯುವ ಮೋರ್ಚಾ ನಗರ ಅಧ್ಯಕ್ಷ ಸಂದೀಪ್ ಮಾತನಾಡಿ, ಜನೋತ್ಸವದ ಮೂಲಕ ಪಕ್ಷ ಸಂಘಟನೆ ಮಾಡುವ ದೊಡ್ಡ ಕೆಲಸ ಆಗುತ್ತಿದೆ. ಬಿಜೆಪಿ ಪಕ್ಷ ಹೆಚ್ಚಿನ ಪ್ರಮಾಣದಲ್ಲಿ ಯುವಕರಿಗೆ ಆದ್ಯತೆ ಕೊಡುವ ಮೂಲಕ ರಾಜಕೀಯದಲ್ಲಿ ಬದಲಾವಣೆ ತರುವ ಕೆಲಸ ಮಾಡುತ್ತಿದೆ ಎಂದರು.
ಬಿಬಿಎಂಪಿ ಮಾಜಿ ಸದಸ್ಯ ನಿತೀಶ್ ಪುರುಷೋತ್ತಮ್, ನಗರ ಬಿಜೆಪಿ ಅಧ್ಯಕ್ಷ ಡಾ.ಸಿ.ಜಯರಾಜ್, ತಾಲೂಕು ಅಧ್ಯಕ್ಷ ಹುಲ್ಲೂರು ಕೆ.ಸತೀಶ್, ಯುವ ಮೋರ್ಚಾ ಅಧ್ಯಕ್ಷ ತವಟಹಳ್ಳಿ ರಾಮು, ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಅಪ್ಸರ್, ಎಸ್ಸಿ ಮೋರ್ಚಾ ಅಧ್ಯಕ್ಷ ದೊಡ್ಡಹರಳಗೆರೆ ನಾಗೇಶ್, ಬಿಎಂಆರ್‌ಡಿಎ ಅಧ್ಯಕ್ಷ ಶಂಕರೇಗೌಡ, ಮಾಜಿ ಅಧ್ಯಕ್ಷ ಸಿ.ನಾಗರಾಜ್, ನಗರಸಭೆ ಅಧ್ಯಕ್ಷ ಡಿ.ಕೆ.ನಾಗರಾಜ್ ಸೇರಿದಂತೆ ಹಲವಾರು ಗಣ್ಯರು ಹಾಜರಿದ್ದರು.
ಸಿದ್ದರಾಮಯ್ಯ ನನ್ನ ಗುರು, ನಾನು ಅವರ ಶಿಷ್ಯನೇ: ಸಚಿವ ಎಂಟಿಬಿ ನಾಗರಾಜ್
ಜಿಲ್ಲಾ ಕೇಂದ್ರ ಅಂತಿವಾಗಿಲ್ಲ, ಅನಗತ್ಯ ಚರ್ಚೆ ಬೇಡ:
ದೇವನಹಳ್ಳಿಯನ್ನು ಬೆಂಗಳೂರು ಗ್ರಾಮಾಂತರದ ಜಿಲ್ಲಾ ಕೇಂದ್ರವನ್ನಾಗಿ ಮಾಡುತ್ತೇವೆ. ಎಂದು ಸಚಿವ ಡಾ.ಕೆ.ಸುಧಾಕರ್ ಅವರು ಹೇಳಿಕೆ ಕೊಟ್ಟನಡುವೆ ದೊಡ್ಡಬಳ್ಳಾಪುರದಲ್ಲಿ ಸಾಕಷ್ಟುಪ್ರತಿಭಟನೆ ಜೊತೆಗೆ ಚರ್ಚೆಗೆ ಗ್ರಾಸವಾಗಿದೆ. ಆದರೆ ಹೊಸಕೋಟೆ, ನೆಲಮಂಗಲ ಸೇರಿದಂತೆ ಎಲ್ಲಾ ತಾಲೂಕುಗಳಿಗೆ ಸಮನಾದ ಅಂತರದಲ್ಲಿ ಜಿಲ್ಲಾ ಕೇಂಧ್ರ ಆಗಬೇಕು. ಈ ನಿಟ್ಟಿನಲ್ಲಿ ಸಿಎಂ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿ ನಂತರ ಜಿಲ್ಲಾ ಕೇಂಧ್ರ ಘೋಷಣೆಯ ಬಗ್ಗೆ ಅಂತಿಮ ಮಾಡಲಾಗುವುದು. ಆದ್ದರಿಂದ ಅನಗತ್ಯ ಚರ್ಚೆಗೆ ಯಾರೂ ಮುಂದಾಗಬಾರದು ಎಂದು ಸಚಿವ ಎಂಟಿಬಿ ನಾಗರಾಜ್ ತಿಳಿಸಿದರು.