ಅಧಿಕಾರ ವಿಕೇಂದ್ರೀಕರಣದಿಂದ ಪಂಚಾಯತಿಗಳ ಅಭಿವೃದ್ಧಿ: ಗೃಹ ಸಚಿವ ಪರಮೇಶ್ವರ್

Published : May 18, 2025, 07:07 PM IST
ಅಧಿಕಾರ ವಿಕೇಂದ್ರೀಕರಣದಿಂದ ಪಂಚಾಯತಿಗಳ ಅಭಿವೃದ್ಧಿ: ಗೃಹ ಸಚಿವ ಪರಮೇಶ್ವರ್

ಸಾರಾಂಶ

ಅಧಿಕಾರ ವಿಕೇಂದ್ರೀಕರಣ ವ್ಯವಸ್ಥೆಯಿಂದ ಪಂಚಾಯತಿಗಳಲ್ಲಿ ಅಭಿವೃದ್ಧಿ ಕಾಣಲು ಸಾಧ್ಯವಾಗಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದರು. 

ತುಮಕೂರು (ಮೇ.18): ಅಧಿಕಾರ ವಿಕೇಂದ್ರೀಕರಣ ವ್ಯವಸ್ಥೆಯಿಂದ ಪಂಚಾಯತಿಗಳಲ್ಲಿ ಅಭಿವೃದ್ಧಿ ಕಾಣಲು ಸಾಧ್ಯವಾಗಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದರು. ತುಮಕೂರು ನಗರದ ಹೊರವಲಯ ಸಿದ್ಧಾರ್ಥ ನಗರದ ಗಂಗಾಧರಯ್ಯ ಮೆಮೋರಿಯಲ್ ಹಾಲ್‌ನಲ್ಲಿ ಶನಿವಾರ ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗಾಗಿ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ಗ್ರಾಮ ಪಂಚಾಯತಿಗಳನ್ನು ಮತ್ತಷ್ಟು ಬಲಪಡಿಸಲು ಕಾರ್ಯಾಗಾರವನ್ನು ಏರ್ಪಡಿಸಲಾಗಿದ್ದು, ಪಂಚಾಯತಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ, ತೆರಿಗೆ ವಸೂಲಾತಿ, ಸ್ವಚ್ಛತೆ, ಮಹಿಳಾ ಸಬಲೀಕರಣ, ನಿವೇಶನ/ಮನೆ ಹಂಚಿಕೆ, ಆರ್ಥಿಕ ಶಿಸ್ತಿನ ನಿರ್ವಹಣೆ ಬಗ್ಗೆ ಈ ಕಾರ್ಯಾಗಾರದಲ್ಲಿ ತರಬೇತಿ ನೀಡಲಾಗುವುದು ಎಂದು ತಿಳಿಸಿದರು.

ಭಾರತದಲ್ಲಿರುವ ಅಧಿಕಾರ ವಿಕೇಂದ್ರೀಕರಣ ವ್ಯವಸ್ಥೆಯು ಇತರೆ ಯಾವುದೇ ದೇಶದಲ್ಲಿ ಕಾಣಸಿಗಲು ಸಾಧ್ಯವಿಲ್ಲ. ಇಡೀ ವಿಶ್ವದಲ್ಲಿಯೇ ಭಾರತದ ಆಡಳಿತ ವಿಕೇಂದ್ರೀಕರಣ ವ್ಯವಸ್ಥೆ ಮಾದರಿಯಾಗಿದೆ. ಎರಡನೇ ಅತೀ ದೊಡ್ಡ ಪ್ರಜಾಪ್ರಭುತ್ವ ಹೊಂದಿರುವ ಅಮೆರಿಕಾದಂಥ ಮುಂದುವರಿದ ರಾಷ್ಟ್ರದಲ್ಲಿಯೂ ಸ್ಥಳೀಯ ಸಂಸ್ಥೆಗಳ ಆಡಳಿತವು ವ್ಯವಸ್ಥಿತವಾಗಿಲ್ಲ. ಆದರೆ ಹೆಚ್ಚಿನ ಜನಸಂಖ್ಯೆ ಹೊಂದಿರುವ ನಮ್ಮ ದೇಶದಲ್ಲಿ ಅಧಿಕಾರ ವಿಕೇಂದ್ರೀಕರಣ ವ್ಯವಸ್ಥೆ ಬಹಳ ಯಶಸ್ಸನ್ನು ಕಂಡಿದೆ ಎಂದು ಅಭಿಪ್ರಾಯಪಟ್ಟರು. ನಮ್ಮ ದೇಶದ ಆಡಳಿತ ವಿಕೇಂದ್ರೀಕರಣ ವ್ಯವಸ್ಥೆಯು ನಿನ್ನೆ ಮೊನ್ನೆಯದಲ್ಲ. ವೇದ- ಪುರಾಣದ ಕಾಲ, ಮೌರ್ಯ- ಗುಪ್ತರ ಆಡಳಿತಾವಧಿ, ೧೨ನೇ ಶತಮಾನದ ಜಗಜ್ಯೋತಿ ಬಸವೇಶ್ವರರ ಅನುಭವ ಮಂಟಪದ ಕಾಲದಿಂದಲೂ ಜಾರಿಯಲ್ಲಿದೆ ಎಂಬುದು ಇತಿಹಾಸದ ಅವಲೋಕನದಿಂದ ತಿಳಿದು ಬಂದಿದೆ. ಜನಾಭಿಪ್ರಾಯಗಳ ಜೊತೆ- ಜೊತೆಗೆ ಆಡಳಿತ ನಡೆಸಬೇಕೆನ್ನುವುದೇ ವಿಕೇಂದ್ರೀಕರಣದ ಮೂಲ ಉದ್ದೇಶವೆಂದು ಹೇಳಿದರು.

ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ ಸೌಲಭ್ಯ ಪರಿಚಯಿಸಲು ಕ್ರಮ: ಸಚಿವ ದಿನೇಶ್‌ ಗುಂಡೂರಾವ್‌

ಆಡಳಿತ ವಿಕೇಂದ್ರೀಕರಣ ವ್ಯವಸ್ಥೆಯು ಮಹಾತ್ಮ ಗಾಂಧೀಜಿಯವರ ಪರಿಕಲ್ಪನೆಯಾಗಿತ್ತು. ಗ್ರಾಮೀಣ ಪ್ರದೇಶಗಳಲ್ಲಿ ಕೈಗೊಳ್ಳಬೇಕಾದ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ರಾಜಧಾನಿಗಳಲ್ಲಿ ಯೋಜನೆಗಳನ್ನು ರೂಪಿಸುವುದರಿಂದ ಗ್ರಾಮಗಳು ಅಭಿವೃದ್ಧಿಯಾಗುವುದಿಲ್ಲವೆಂದು ಮನಗಂಡ ಸರ್ಕಾರವು ಅಧಿಕಾರ ವಿಕೇಂದ್ರೀಕರಣ ವ್ಯವಸ್ಥೆಯನ್ನು ಜಾರಿಗೆ ತಂದಿತು. ಈ ವ್ಯವಸ್ಥೆಯಿಂದ ದೇಶದಲ್ಲಿ ಲಕ್ಷಾಂತರ ಮಹಿಳೆಯರು ಸ್ಥಳೀಯ ಆಡಳಿತದ ಅಧಿಕಾರದ ಚುಕ್ಕಾಣಿ ಹಿಡಿದು ಯಶಸ್ಸು ಕಂಡಿದ್ದಾರೆ. ಗ್ರಾಮ ಪಂಚಾಯುತಿ ಅಧ್ಯಕ್ಷ, ಉಪಾಧ್ಯಕ್ಷರಾಗಲು ಯಾವುದೇ ರಾಜಕೀಯ, ಶೈಕ್ಷಣಿಕ ಹಿನ್ನೆಲೆ ಹೊಂದಿರಬೇಕಾಗಿಲ್ಲ. ಉತ್ತಮ ಪ್ರಜಾ ಸೇವಾ ಮನೋಭಾವ ಹೊಂದಿರುವ ಯಾವುದೇ ಅಭ್ಯರ್ಥಿ ಪಂಚಾಯತಿ ಚುನಾವಣೆಯಲ್ಲಿ ಸ್ಪರ್ಧಿಸಿ ಅಧ್ಯಕ್ಷ/ಉಪಾಧ್ಯಕ್ಷರ ಅಧಿಕಾರ ಹೊಂದಬಹುದು ಎಂದು ತಿಳಿಸಿದರು.

ಜಿಲ್ಲೆಯಲ್ಲಿರುವ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಹಲವಾರು ಪ್ರಗತಿಪರ ಕಾರ್ಯಕ್ರಮಗಳನ್ನು ರೂಪಿಸಿ ಶೈಕ್ಷಣಿಕ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ ವಿನೂತನ ಯೋಜನೆಗಳನ್ನು ಅನುಷ್ಠಾನ ಮಾಡುವ ಮೂಲಕ ಜಿಲ್ಲೆಯ ಪ್ರಗತಿಗೆ ಕಾರಣರಾಗಿದ್ದಾರೆ ಎಂದು ಜಿ. ಪ್ರಭು ಅವರ ಬಗ್ಗೆ ಮೆಚ್ಚುಗೆ ಮಾತುಗಳನ್ನಾಡಿದರು. ಶಾಸಕ ಸುರೇಶ್ ಗೌಡ ಮಾತನಾಡಿ, ಗ್ರಾಮ ಪಂಚಾಯತಿಗಳನ್ನು ಸ್ಥಳೀಯ ಜನಪ್ರತಿಧಿಗಳು ಹಾಗೂ ಅಧಿಕಾರಿಗಳು ಒಗ್ಗೂಡಿ ಅಭಿವೃದ್ಧಿಪಡಿಸಬೇಕು. ಪಂಚಾಯತಿ ಅಧ್ಯಕ್ಷರು/ಉಪಾಧ್ಯಕ್ಷರು ಪಂಚಾಯತಿ ನಿಯಮಗಳ ಬಗ್ಗೆ ತಿಳಿದುಕೊಳ್ಳಬೇಕು. ಇದರಿಂದ ಪಿಡಿಒಗಳಿಂದ ಕೆಲಸ ತೆಗೆದುಕೊಳ್ಳಲು ಸಾಧ್ಯವಾಗುತ್ತದೆ. 

ವೈದ್ಯಕೀಯ ಕೋರ್ಸ್‌ಗಳ ಶುಲ್ಕ ಹೆಚ್ಚಿಸಲ್ಲ: ಸಚಿವ ಶರಣ್‌ ಪ್ರಕಾಶ್ ಪಾಟೀಲ್‌

ಜನಪರ ಕೆಲಸಗಳಿಂದ ತಮ್ಮ ಹೆಜ್ಜೆ ಗುರುತುಗಳನ್ನು ಬಿಟ್ಟು ಹೋಗಬೇಕು. ಚರಂಡಿ ನಿರ್ಮಾಣ, ಕಸ ವಿಲೇವಾರಿ, ಸ್ವಚ್ಛತೆ ಕಾಪಾಡುವುದು, ಜನರ ಆರೋಗ್ಯ, ಗಿಡ-ಮರ ಬೆಳೆಸುವುದು, ಮತ್ತಿತರ ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳಬೇಕು. ಇಂತಹ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕರ ಸಹಕಾರ ಇದ್ದೇ ಇರುತ್ತದೆ ಎಂದು ತಿಳಿಸಿದರಲ್ಲದೆ, ಅಲೆಮಾರಿ ಜನಾಂಗಗಳಿಗೆ ವಸತಿ ಸೌಕರ್ಯ ಕಲ್ಪಿಸಬೇಕು ಎಂದು ಸಚಿವರಿಗೆ ಮನವಿ ಮಾಡಿದರು. ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪ ಮಾತನಾಡಿ, ಪಿಡಿಒಗಳು ರೈತರನ್ನು ಕಚೇರಿಗೆ ಅಲೆದಾಡಿಸದೇ ಅವರ ಕೆಲಸಗಳನ್ನು ಆದ್ಯತೆ ಮೇಲೆ ಮಾಡಿಕೊಡಬೇಕು. ಈ ಕಾರ್ಯಾಗಾರವು ಪಂಚಾಯತಿ ಅಧಿಕಾರಿಗಳಿಗೆ ಸ್ಫೂರ್ತಿ, ಹೊಸ ಶಕ್ತಿ ತುಂಬಲಿದ್ದು, ಸದುಪಯೋಗಪಡಿಸಿಕೊಳ್ಳಬೇಕೆಂದು ಕರೆ ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
ಆನೆ ಕಾರಿಡಾರ್ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ