ಹಳ್ಳಿಗಳ ಅಭಿವೃದ್ಧಿಯಾದರೇ ದೇಶ ಅಭಿವೃದ್ಧಿ: ಸಚಿವ ಎಂ.ಬಿ.ಪಾಟೀಲ್‌

Published : Feb 04, 2024, 03:53 PM IST
ಹಳ್ಳಿಗಳ ಅಭಿವೃದ್ಧಿಯಾದರೇ ದೇಶ ಅಭಿವೃದ್ಧಿ: ಸಚಿವ ಎಂ.ಬಿ.ಪಾಟೀಲ್‌

ಸಾರಾಂಶ

ಕಾರಜೋಳ ಬಳಿ ಬಾಕಿ ಉಳಿದಿರುವ 500 ಎಕರೆ ಜಮೀನಿಗೆ ನೀರಾವರಿ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್‌ ಹೇಳಿದರು. 

ವಿಜಯಪುರ (ಫೆ.04): ಕಾರಜೋಳ ಬಳಿ ಬಾಕಿ ಉಳಿದಿರುವ 500 ಎಕರೆ ಜಮೀನಿಗೆ ನೀರಾವರಿ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್‌ ಹೇಳಿದರು. ಬಬಲೇಶ್ವರ ತಾಲೂಕಿನ ಕಾರಜೋಳ ಗ್ರಾಮದಲ್ಲಿ ಶ್ರೀ ಬೀರಲಿಂಗೇಶ್ವರ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಭಾರತ ಗ್ರಾಮಗಳ ದೇಶ. ಹಳ್ಳಿಗಳು ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿಯಾದಂತೆ. ಇದರಿಂದ ಗ್ರಾಮ ಸ್ವರಾಜ್ಯ ಸಾಧ್ಯ ಎಂದು ರಾಷ್ಟ್ರಪಿತ ಮಹಾತ್ಮಾ ಗಾಂಧಿ ಹೇಳಿದ್ದರು.

ಆವರ ಆಶಯದಂತೆ ನಮ್ಮ ಸರಕಾರ ರೈತರು, ಬಡವರು ಸೇರಿದಂತೆಎಲ್ಲ ಜಾತಿ ವರ್ಗಗಳ ಕಲ್ಯಾಣಕ್ಕಾಗಿ ಯೋಜನೆಗಳನ್ನು ರೂಪಿಸಿದೆ. ಪಂಚ ಗ್ಯಾರಂಟಿ ಯೋಜನೆಗಳ ಜಾರಿಯಿಂದಾಗಿ ಸಮಾಜದಎಲ್ಲ ವರ್ಗದ ಜನರಿಗೆ ಶಕ್ತಿ ತುಂಬಲಾಗುತ್ತಿದೆ. ಗೃಹಲಕ್ಷ್ಮಿ ಯೋಜನೆಯಲ್ಲಿ ವಿಜಯಪುರ ಜಿಲ್ಲೆ ಮುಂಚೂಣಿಯಲ್ಲಿದೆ ಎಂದರು. ಗೃಹಲಕ್ಷ್ಮಿಯುವನಿಧಿ, ಅನ್ನಭಾಗ್ಯ ಸೇರಿದಂತೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಕೊಟ್ಟ ಮಾತುಗಳನ್ನು ಉಳಿಸಿಕೊಂಡು, ನುಡಿದಂತೆ ನಡೆಯುತ್ತಿದ್ದೇವೆ ಎಂದರು.

ಕಾರಜೋಳ ಬಳಿ ಸಕ್ಕರೆ ಕಾರ್ಖಾನೆ ನಿರ್ಮಾಣಕ್ಕೆ ಭೂಮಿ ನೀಡಿದ ರೈತರ ಕುಟುಂಬಗಳಿಗೆ ಉದ್ಯೋಗ ಕಲ್ಪಿಸಲು ಕ್ರಮ ಕೈಗೊಳ್ಳುತ್ತೇವೆ. ನಾನು ಜಲಸಂಪನ್ಮೂಲ ಸಚಿವನಾಗಿದ್ದಾಗ ರೂಪಿಸಿದ ನೀರಾವರಿ ಯೋಜನೆಗಳು ಈಗ ಉಂಟಾಗಿರುವ ಬರದ ತೀವ್ರತೆಯನ್ನು ಕಡಿಮೆ ಮಾಡಿವೆ. ಇದರಿಂದಾಗಿ ಪ್ರತಿ ವರ್ಷ ಬಳಸಲಾಗುತ್ತಿದ್ದ ನೀರಿನ ಟ್ಯಾಂಕರ್‌ಗಳ ಬಳಕೆ ಗಣನೀಯವಾಗಿ ಕಡಿಮೆಯಾಗಿದೆ. ಬರಪೀಡಿತ ಜಿಲ್ಲೆ ಎಂದು ಹಣೆಪಟ್ಟಿ ಹೊತ್ತಿದ್ದ ವಿಜಯಪುರದ ಇತಿಹಾಸವನ್ನು ಬದಲಿಸಲಾಗುತ್ತಿದೆ. ಜಲಸಂಪನ್ಮೂಲ ಇಲಾಖೆಯಲ್ಲಿ ಮಾಡಿರುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಇಲಾಖೆಯಲ್ಲಿಯೂ ಛಾಪು ಮೂಡಿಸಲು ಯೋಜನೆಗಳನ್ನು ರೂಪಿಸಿದ್ದೇನೆ. 

ರಾಜಕಾರಣದಲ್ಲಿ ಧರ್ಮವಿರಲಿ, ನಾವು ಮಠಗಳ ಜೊತೆ ಇದ್ದೇವೆ: ಡಿ.ಕೆ.ಶಿವಕುಮಾರ್‌

ವಿಜಯಪುರ ಜಿಲ್ಲೆಯಲ್ಲಿ ಕನಿಷ್ಠ ೧೦ ಸಾವಿರ ಉದ್ಯೋಗ ಸೃಷ್ಠಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು. ಇದಕ್ಕೂ ಮುನ್ನ ಸಚಿವರು ಶ್ರೀ ಬೀರಲಿಂಗೇಶ್ವರದೇವಸ್ಥಾನದಲ್ಲಿದರ್ಶನ ಪಡೆದರು. ಅಹಿಂದ ಮುಖಂಡ ಸೋಮನಾಥ ಕಳ್ಳಿಮನಿ, ಬಿ. ಡಿ. ಆಸಂಗಿ, ಸುಜಾತಾ ಕಳ್ಳಿಮನಿ, ಮಲ್ಲು ಪರಸಣ್ಣವರ, ರಾಜು ಕಂಬಾಗಿ, ಪಾಂಡು ಜಾಧವ, ರಾಚಯ್ಯ ಮಠಪತಿ, ಕಾಂತು ಒಡೆಯರ, ಪರಶುರಾಮ ಮಲಘಾಣ, ಸುರೇಶ ಜಾಧವ, ಬಸವರಾಜ ಪಾಯ್ಣಿ, ಶಿವಪ್ಪ ತಳವಾರ, ಮುದಕಪ್ಪ ಹಳಿಜೋಳ, ಕಲ್ಲಯ್ಯ ಹಿರೇಮಠ, ಯಲ್ಲಪ್ಪ ಆಸಂಗಿ ಇದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿಸೇರಿಯನ್‌ ಹೆರಿಗೆ ಹೆಚ್ಚಳ ಏಕೆ ಎಂದು ತಿಳಿಯಲು ಆಡಿಟ್‌: ಸಚಿವ ದಿನೇಶ್‌ ಗುಂಡೂರಾವ್
ಪ್ರಧಾನಿಗೆ ಪತ್ರ ಬರೆಯುವುದರಲ್ಲಿ ಸಿದ್ದರಾಮಯ್ಯ, ಡಿಕೆಶಿ ನಿಸ್ಸೀಮರು: ಬಿ.ವೈ.ವಿಜಯೇಂದ್ರ