Assembly election: ಎಲ್ಲಿ ಬಿಜೆಪಿ ಆಡಳಿತ ಇರುತ್ತೋ ಅಲ್ಲಿ ಅಭಿವೃದ್ಧಿ: ಸಚಿವ ಸುನಿಲ ಕುಮಾರ್

By Kannadaprabha NewsFirst Published Dec 7, 2022, 1:16 PM IST
Highlights

 ಬಿಜೆಪಿಯ ಆಡಳಿತ ಇರುವ ಎಲ್ಲ ಕಡೆಗಳಲ್ಲಿ ಸಾಕಷ್ಟುಅಭಿವೃದ್ಧಿಯಾಗಿದೆ. ಈ ಅಭಿವೃದ್ಧಿ ಇನ್ನಷ್ಟುಹೊಸ ರೂಪ ಪಡೆಯಲು ಹಾಗೂ ಇನ್ನಷ್ಟುಯೋಜನೆಗಳು ಜನರನ್ನು ತಲುಪಲು ಇನ್ನೊಮ್ಮೆ ಬಿಜೆಪಿ ಸರ್ಕಾರ ಆಡಳಿತಕ್ಕೆ ಬರುವ ಅಗತ್ಯವಿದೆ ಎಂದು ರಾಜ್ಯ ಇಂಧನ ಸಚಿವ ಸುನಿಲ್‌ ಕುಮಾರ್‌ ಹೇಳಿದರು.

ಬೆಳ್ತಂಗಡಿ (ಡಿ.7) : ಬಿಜೆಪಿಯ ಆಡಳಿತ ಇರುವ ಎಲ್ಲ ಕಡೆಗಳಲ್ಲಿ ಸಾಕಷ್ಟುಅಭಿವೃದ್ಧಿಯಾಗಿದೆ. ಈ ಅಭಿವೃದ್ಧಿ ಇನ್ನಷ್ಟುಹೊಸ ರೂಪ ಪಡೆಯಲು ಹಾಗೂ ಇನ್ನಷ್ಟುಯೋಜನೆಗಳು ಜನರನ್ನು ತಲುಪಲು ಇನ್ನೊಮ್ಮೆ ಬಿಜೆಪಿ ಸರ್ಕಾರ ಆಡಳಿತಕ್ಕೆ ಬರುವ ಅಗತ್ಯವಿದೆ ಎಂದು ರಾಜ್ಯ ಇಂಧನ ಸಚಿವ ಸುನಿಲ್‌ ಕುಮಾರ್‌ ಹೇಳಿದರು.

ಅವರು ಮಂಗಳವಾರ ಬೆಳ್ತಂಗಡಿ ಶ್ರೀ ಮಂಜುನಾಥ ಕಲಾಭವನದಲ್ಲಿ ಬೆಳ್ತಂಗಡಿ ಬಿಜೆಪಿ ಮಂಡಲದ ವತಿಯಿಂದ ಆಯೋಜಿಸಲಾದ ಪದಾಧಿಕಾರಿಗಳ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.

ಕಲಾವಿದರ ಪಿಂಚಣಿ 2000 ರು.ಗೆ ಏರಿಕೆ; ಸಚಿವ ಸುನಿಲ್ ಕುಮಾರ್

ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕೆಂಬ ಸ್ಪಷ್ಟತೆ ಇಲ್ಲದ ಕೆಲವು ಕಾಂಗ್ರೆಸ್‌ ನಾಯಕರು ತಾವೇ ಮುಂದಿನ ಮುಖ್ಯಮಂತ್ರಿ ಎಂದು ಸ್ವಯಂ ಘೋಷಣೆ ಮಾಡುತ್ತಿರುವುದು ತೀರಾ ಹಾಸ್ಯಾಸ್ಪದ. ಚುನಾವಣೆ ಹತ್ತಿರ ಬರುತ್ತಿದ್ದಂತೆ ಗರಿಗೆದರುವ ಅಪಪ್ರಚಾರ, ಜಾತಿ ರಾಜಕೀಯಗಳ ಕಡೆ ಗಮನಹರಿಸದೆ ಕಾರ್ಯಕರ್ತರು ಒಗ್ಗಟ್ಟು ಹಾಗೂ ಹೊಂದಾಣಿಕೆಯಿಂದ ಮುಂದುವರಿಯಬೇಕು ಎಂದು ತಿಳಿಸಿದರು.

ಶಾಸಕ ಹರೀಶ್‌ ಪೂಂಜ ಮಾತನಾಡಿ, ಕಳೆದ 4 ವರ್ಷಗಳ ಆಡಳಿತದಿಂದ ಉತ್ತೇಜನಗೊಂಡು ಇತರ ಪಕ್ಷಗಳ ಅನೇಕ ಮುಖಂಡರು, ಪದಾಧಿಕಾರಿಗಳು ಬಿಜೆಪಿ ಸೇರಿದ್ದಾರೆ. ಬೆಳ್ತಂಗಡಿಯ ಅಭಿವೃದ್ಧಿಗೆ ಪ್ರೇರಣೆ ಸಚಿವ ಸುನಿಲ್‌ ಕುಮಾರ್‌. ಇದುವರೆಗೆ ಸುಮಾರು 3,000 ಕೋಟಿ ರು. ಅನುದಾನದಿಂದ ಅನೇಕ ಯೋಜನೆಗಳನ್ನು ತಾಲೂಕಿನಲ್ಲಿ ಅನುಷ್ಠಾನಗೊಳಿಸಲಾಗಿದೆ ಎಂದು ಹೇಳಿದರು. ಜಿಲ್ಲಾ ಬಿಜೆಪಿ ಉಸ್ತುವಾರಿ ಹರಿಕೃಷ್ಣ ಬಂಟ್ವಾಳ ಮಾತನಾಡಿದರು. ಬೆಳ್ತಂಗಡಿ ಬಿಜೆಪಿ ಮಂಡಲದ ಅಧ್ಯಕ್ಷ ಜಯಂತ ಕೋಟ್ಯಾನ್‌ ಅಧ್ಯಕ್ಷತೆ ವಹಿಸಿದ್ದರು.

ಮಾಜಿ ಶಾಸಕ ಪ್ರಭಾಕರ್‌ ಬಂಗೇರ, ಎಸ್‌ಟಿ ಮೋರ್ಚಾ ಜಿಲ್ಲಾಧ್ಯಕ್ಷ ಚೆನ್ನಕೇಶವ ಅರಸುಮಜಲು, ಅಲ್ಪ ಸಂಖ್ಯಾತರ ಮೋರ್ಚಾ ಜಿಲ್ಲಾಧ್ಯಕ್ಷ ಜೋಯಲ್‌ ಮೆಂಡೋನ್ಸಾ, ನ.ಪಂ. ಅಧ್ಯಕ್ಷ ರಜನಿ ಕೂಡ, ಉಪಾಧ್ಯಕ್ಷ ಜಯಾನಂದ ಗೌಡ, ಧನಲಕ್ಷ್ಮೇ ಉಪಸ್ಥಿತರಿದ್ದರು. ಧರ್ಮಸ್ಥಳ ಗ್ರಾ.ಪಂ. ಉಪಾಧ್ಯಕ್ಷ ಶ್ರೀನಿವಾಸ್‌ ರಾವ್‌ ಕಾರ್ಯಕ್ರಮ ನಿರೂಪಿಸಿದರು. ಮಂಡಲ ಉಪಾಧ್ಯಕ್ಷ ಸೀತಾರಾಮ್‌ ಬೆಳಾಲು ವಂದಿಸಿದರು.

ಹಲವು ಕಾಂಗ್ರೆಸ್‌ ನಾಯಕರು ಬಿಜೆಪಿಗೆ ಸೇರ್ಪಡೆ

ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ಮುಗುಳಿ ನಾರಾಯಣ ರಾವ್‌, ಧರ್ಮಸ್ಥಳ ಗ್ರಾ.ಪಂ. ಮಾಜಿ ಅಧ್ಯಕ್ಷ, ಯುವ ಕಾಂಗ್ರೆಸ್‌ ಮುಖಂಡರಾಗಿದ್ದ ಚಂದನ್‌ ಪ್ರಸಾದ್‌ ಕಾಮತ್‌, ಲಾಯಿಲ ಗ್ರಾ.ಪಂ. ಮಾಜಿ ಅಧ್ಯಕ್ಷ, ತಾ.ಪಂ. ಮಾಜಿ ಸದಸ್ಯ ಸುಧಾಕರ ಬಿ.ಎಲ…., ಮುಂಡಾಜೆ ಗ್ರಾ.ಪಂ. ಮಾಜಿ ಸದಸ್ಯೆ ಅಶ್ವಿನಿ ಎ. ಹೆಬ್ಬಾರ್‌, ವೇಣೂರಿನ ಸತೀಶ್‌ ಮಡಿವಾಳ, ಧರ್ಮಸ್ಥಳ ಗ್ರಾ.ಪಂ. ಸದಸ್ಯೆ ಗಾಯತ್ರಿ, ಕುಕ್ಕಳದ ರಾಜೇಶ್ವರಿ, ಮಾಲಾಡಿ ಗ್ರಾ.ಪಂ. ಸದಸ್ಯ ಪುನೀತ್‌ ಕುಮಾರ್‌, ಸಹಕಾರಿ ಧುರೀಣ ಪುಷ್ಪರಾಜ ಜೈನ್‌, ಕನ್ಯಾಡಿ ಶಾಲಾಭಿವೃದ್ಧಿ ಅಧ್ಯಕ್ಷ ನಂದ ಭಟ್‌, ಸತೀಶ್‌ ರಾವ್‌ ನಿಡ್ಲೆ, ಮಹೇಶ್‌ ಜೈನ್‌ ಧರ್ಮಸ್ಥಳ, ಧರ್ಮಸ್ಥಳ ಗ್ರಾ.ಪಂ. ಮಾಜಿ ಸದಸ್ಯ ಆಂಟೊನಿ ಕಲ್ಲೇರಿ, ಬಿಎಸ್‌ಎಫ್‌ ಮಾಜಿ ಯೋಧ ಸೆಬಾಸ್ಟಿಯನ್‌, ಆರಂಬೋಡಿ ಗ್ರಾ.ಪಂ. ಮಾಜಿ ಸದಸ್ಯ ಆನಂದ ಶೆಟ್ಟಿ, ಕಾಶಿಬೆಟ್ಟು ಶನೈಶ್ಚರ ದೇವಸ್ಥಾನದ ಮೊಕ್ತೇಸರ ಜನಾರ್ದನ ಆಚಾರ್ಯ, ಕುಕ್ಕಳದ ವಿಠಲ, ಮೊಗ್ರು ಗ್ರಾಮದ ಕೇಶವ, ಕಲ್ಮಂಜ ಗುತ್ತು ಮನೆಯ ಸುಂದರಿ, ಮೊದಲಾದ ನಾಯಕರು ಹಾಗೂ ಹಲವಾರು ಮಂದಿ ಅಭಿಮಾನಿಗಳು ಬಿಜೆಪಿಗೆ ಸೇರ್ಪಡೆಗೊಂಡರು.

ಮಂಗಳೂರು ಸ್ಫೋಟ ಪ್ರಕರಣ: ಸಮಾಜವನ್ನು ದುರ್ಬಲಗೊಳಿಸಲು ಬಿಡುವುದಿಲ್ಲ: ಸಚಿವ ಸುನಿಲ್ ಕುಮಾರ್

ಬಿಜೆಪಿ ಯುವ ಸಮಾವೇಶಕ್ಕೆ ಯೋಗಿ

ಡಿ. 25ರಂದು ಉಡುಪಿಯಲ್ಲಿ ನಡೆಯುವ ಬಿಜೆಪಿ ಯುವ ಸಮಾವೇಶಕ್ಕೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆಗಮಿಸಲಿದ್ದಾರೆ. ಗುಜರಾತ್‌ ಚುನಾವಣೆ ಫಲಿತಾಂಶ ಕರ್ನಾಟಕ ಚುನಾವಣೆ ಮೇಲೂ ಪರಿಣಾಮ ಬೀರಲಿದೆ. ಉಭಯ ಜಿಲ್ಲೆಗಳ ಪೈಕಿ ಭೌಗೋಳಿಕವಾಗಿ ಬೆಳ್ತಂಗಡಿ ಹಾಗೂ ಸುಳ್ಯ ದೊಡ್ಡ ವಿಧಾನ ಸಭಾ ಕ್ಷೇತ್ರ. ಈ ಬಾರಿ ಶಾಸಕ ಹರೀಶ್‌ ಪೂಂಜ 50 ರಿಂದ 60 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಸಚಿವ ಸುನಿಲ್‌ ಕುಮಾರ್‌ ತಿಳಿಸಿದರು.

click me!