ಇತಿಹಾಸದಲ್ಲೇ ಆಗದ ಕೆಲಸ ಬಿಜೆಪಿ ಸರ್ಕಾರದಲ್ಲಿ ಆಗುತ್ತಿದೆ: ರೂಪಾಲಿ ನಾಯ್ಕ್

Published : Mar 02, 2023, 09:34 AM IST
ಇತಿಹಾಸದಲ್ಲೇ ಆಗದ ಕೆಲಸ ಬಿಜೆಪಿ ಸರ್ಕಾರದಲ್ಲಿ  ಆಗುತ್ತಿದೆ: ರೂಪಾಲಿ ನಾಯ್ಕ್

ಸಾರಾಂಶ

ಇತಿಹಾಸದಲ್ಲಿ ಆಗದ ಅಭಿವೃದ್ಧಿ ಕಾಮಗಾರಿಗಳು ಈಗ ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದಲ್ಲಿ ನಡೆಯುತ್ತಿದೆ. ಇಂದು ಶಿಲಾನ್ಯಾಸ ನೆರವೇರಿಸಿದ ಕಾಮಗಾರಿಗಳು ಪೂರ್ಣಗೊಂಡಾಗ ನಗರದ ಚಿತ್ರಣವೇ ಬದಲಾಗಲಿದೆ ಎಂದು ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದ ಶಾಸಕಿ ರೂಪಾಲಿ ಎಸ್‌. ನಾಯ್ಕ ಹೇಳಿದರು.

ಕಾರವಾರ (ಮಾ.2) : ಇತಿಹಾಸದಲ್ಲಿ ಆಗದ ಅಭಿವೃದ್ಧಿ ಕಾಮಗಾರಿಗಳು ಈಗ ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದಲ್ಲಿ ನಡೆಯುತ್ತಿದೆ. ಇಂದು ಶಿಲಾನ್ಯಾಸ ನೆರವೇರಿಸಿದ ಕಾಮಗಾರಿಗಳು ಪೂರ್ಣಗೊಂಡಾಗ ನಗರದ ಚಿತ್ರಣವೇ ಬದಲಾಗಲಿದೆ ಎಂದು ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದ ಶಾಸಕಿ ರೂಪಾಲಿ ಎಸ್‌. ನಾಯ್ಕ ಹೇಳಿದರು.

ಮುಖ್ಯಮಂತ್ರಿ ವಿಶೇಷ ಅನುದಾನ(Chief Minister's Special Grant)ದಲ್ಲಿ ಕಾರವಾರ(Karwar) ನಗರದ ಅಭಿವೃದ್ಧಿ, ಪ್ರಯಾಣಿಕರಿಗೆ ಅನುಕೂಲ ಕಲ್ಪಿಸಲು ಹಾಗೂ ನಗರದ ಸೌಂದರ್ಯ ವೃದ್ಧಿಗಾಗಿ ಆರೂವರೆ ಕೋಟಿ ರು. ವೆಚ್ಚದಲ್ಲಿ ನಗರದಾದ್ಯಂತ 23 ಕಡೆಗಳಲ್ಲಿ ರಸ್ತೆ ನಿರ್ಮಾಣ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು.

ಉತ್ತರ ಕನ್ನಡ: ಮಳಗಿ ಮಾರಿಕಾಂಬಾ ದೇವಿಯ ಸಂಭ್ರಮದ ರಥೋತ್ಸವ

ಕಾರವಾರದ ಶಾಸಕರ ಮಾದರಿ ಶಾಲೆ, ಸರ್ಕಾರಿ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯ, ಮಾಲಾದೇವಿ ಕ್ರೀಡಾಂಗಣ, ನೂತನ ಗುರುಭವನ ಸುಸಜ್ಜಿತವಾಗಿ ನಿರ್ಮಾಣವಾಗಲಿದೆ. ಕ್ಷೇತ್ರಾದ್ಯಂತ ರಸ್ತೆ, ಸೇತುವೆ, ಕುಡಿಯುವ ನೀರು, ಅಗತ್ಯ ಯೋಜನೆಗಳನ್ನು ಜಾರಿಗೊಳಿಸಿದ್ದು ಕಾರವಾರ ಅಂಕೋಲಾದ ಚಿತ್ರಣವೇ ಬದಲಾಗಿದೆ. ಬದಲಾಗುತ್ತಿದೆ ಎಂದು ಅವರು ಹೇಳಿದರು.

ವಿಧಾನ ಪರಿಷತ್‌ ಸದಸ್ಯ ಗಣಪತಿ ಉಳ್ವೇಕರ ಮಾತನಾಡಿ, ನಗರಸಭೆಯಲ್ಲಿ ಕೆಲಸ ಮಾಡಲು ಆಗುತ್ತಿರಲಿಲ್ಲ. ಮುಖ್ಯಮಂತ್ರಿ ವಿಶೇಷ ಅನುದಾನವೂ ಸೇರಿದಂತೆ ಇದುವರೆಗೆ ಸುಮಾರು .60 ಕೋಟಿ ಕಾಮಗಾರಿಗಳನ್ನು ಶಾಸಕರು ನಗರ ಪ್ರದೇಶಕ್ಕೆ ತಂದಿದ್ದಾರೆ. ಇದುವರೆಗೆ ಯಾವ ಶಾಸಕರೂ ತರದಷ್ಟುಅನುದಾನವನ್ನು ಶಾಸಕರಾದ ರೂಪಾಲಿ ಎಸ್‌. ನಾಯ್ಕ ತಂದಿದ್ದಾರೆ ಎಂದು ಶ್ಲಾಘಿಸಿದರು.

ನಗರಸಭೆ ಅಧ್ಯಕ್ಷ ಡಾ.ನಿತಿನ್‌ ಪಿಕಳೆ ಮಾತನಾಡಿ, ಶಾಸಕರ ಪ್ರಯತ್ನದಿಂದ ನಗರದಲ್ಲಿ ಮೂಲಭೂತ ಸೌಲಭ್ಯ ದೊರೆಯುವಂತಾಗಿದೆ. ನಗರದ ಸೌಂದರ್ಯಕ್ಕೂ ಕಾರಣವಾಗಿದೆ ಎಂದು ಅಭಿಪ್ರಾಯಪಟ್ಟರು.

Assembly election: ಚುನಾವಣೆ ಬಂದಾಗ ಮಾತ್ರ ಬಿಜೆಪಿಗೆ ಮಠ, ಮಂದಿರ ನೆನಪು: ಕಾಂಗ್ರೆಸ್ ಕಿಡಿ

ಉಪಾಧ್ಯಕ್ಷರು, ಸ್ಥಾಯಿ ಸಮಿತಿ ಅಧ್ಯಕ್ಷರು, ನಗರಸಭೆಯ ಆಯಾ ವಾರ್ಡಿನ ಹಾಗೂ ಎಲ್ಲ ಸದಸ್ಯರು ಪಾಲ್ಗೊಂಡಿದ್ದು ವಿಶೇಷವಾಗಿತ್ತು. ಪ್ರಮುಖವಾಗಿ ನಗರದ ದೈವಜ್ಞ ಭವನ ರಸ್ತೆ ಸುಮಾರು ಒಂದೂವರೆ ಕೋಟಿ ರು. ವೆಚ್ಚದಲ್ಲಿ ಡಿವೈಡರ್‌ ಅಳವಡಿಕೆಯೊಂದಿಗೆ ಚತುಷ್ಪಥ ರಸ್ತೆಯಾಗಿ ನಿರ್ಮಾಣಗೊಳ್ಳಲಿದೆ. ಇದಲ್ಲದೆ ನಗರದ ವಿವಿಧ ವಾರ್ಡ್‌ಗಳಲ್ಲಿ ಇನ್ನೂ 22 ಕಾಮಗಾರಿಗಳಿಗೆ ಗುದ್ದಲಿಪೂಜೆ ನೆರವೇರಿಸಲಾಯಿತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ವಸತಿ ಯೋಜನೆಗಳಿಗೆ ಸಹಾಯಧನ ಹೆಚ್ಚಳಕ್ಕೆ ಚಿಂತನೆ: ಸಚಿವ ಜಮೀರ್‌ ಅಹಮದ್‌
ವಿದೇಶದಲ್ಲಿ ಇರುವವರಿಗೂ ಗ್ಯಾರಂಟಿ ಲಾಭ ಬಗ್ಗೆ ಸಿಎಲ್ಪೀಲಿ ಪ್ರಸ್ತಾಪ: ಸಚಿವ ಮಧು ಬಂಗಾರಪ್ಪ