ರಾಜ್ಯದಲ್ಲಿ ಕಾಂಗ್ರೆಸ್‌ನ ಹಿಂದಿನ ಅಭಿವೃದ್ಧಿ ಕಾರ್ಯಗಳ ಮೆಚ್ಚಿ ಪಕ್ಷಕ್ಕೆ ಇತರ ಪಕ್ಷಗಳಿಂದ ಹಲವಾರು ನಾಯಕರು ಸೇರ್ಪಡೆಯಾಗುತ್ತಿದ್ದಾರೆ. ಅದೇ ರೀತಿ ಮಾಜಿ ಶಾಸಕರು ಹಾಗೂ ಹಿರಿಯ ಬಿಜೆಪಿ ಮುಖಂಡರಾದ ಗಂಗಹನುಮಯ್ಯ ಕಾಂಗ್ರೆಸ್ ಪಕ್ಷಕ್ಕೆ ಸೇರಿರುವುದು ಕೊರಟಗೆರೆ ವಿಧಾನಸಭಾ ಕ್ಷೇತ್ರಕ್ಕೆ ಹಾಗೂ ತುಮಕೂರು ಜಿಲ್ಲೆಗೆ ಮತ್ತಷ್ಟು ಶಕ್ತಿ ಬಂದಿದೆ.
ಕೊರಟಗೆರೆ (ಏ.28): ರಾಜ್ಯದಲ್ಲಿ ಕಾಂಗ್ರೆಸ್‌ನ ಹಿಂದಿನ ಅಭಿವೃದ್ಧಿ ಕಾರ್ಯಗಳ ಮೆಚ್ಚಿ ಪಕ್ಷಕ್ಕೆ ಇತರ ಪಕ್ಷಗಳಿಂದ ಹಲವಾರು ನಾಯಕರು ಸೇರ್ಪಡೆಯಾಗುತ್ತಿದ್ದಾರೆ. ಅದೇ ರೀತಿ ಮಾಜಿ ಶಾಸಕರು ಹಾಗೂ ಹಿರಿಯ ಬಿಜೆಪಿ ಮುಖಂಡರಾದ ಗಂಗಹನುಮಯ್ಯ ಕಾಂಗ್ರೆಸ್ ಪಕ್ಷಕ್ಕೆ ಸೇರಿರುವುದು ಕೊರಟಗೆರೆ ವಿಧಾನಸಭಾ ಕ್ಷೇತ್ರಕ್ಕೆ ಹಾಗೂ ತುಮಕೂರು ಜಿಲ್ಲೆಗೆ ಮತ್ತಷ್ಟು ಶಕ್ತಿ ಬಂದಿದೆ. ನಮ್ಮ ಪಕ್ಷದ ಹಿಂದಿನ ಅಭಿವೃದ್ಧಿಗಳೇ ನಾಳೆಯ ಅಧಿಕಾರಕ್ಕೆ ದಾರಿಯಾಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ, ಶಾಸಕ ಡಾ.ಜಿ.ಪರಮೇಶ್ವರ ತಿಳಿಸಿದರು.
ಅವರು ಕೊರಟಗೆರೆ ಪಟ್ಟಣದ ರಾಜೀವ್ ಭವನದಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಾಜಿ ಶಾಸಕ ಗಂಗಹನುಮಯ್ಯ, ಮಾಜಿ.ಜಿ.ಪಂ.ಅಧ್ಯಕ್ಷೆ ಕಮಲ ಗಂಗಹನುಮಯ್ಯ, ಬಿಜೆಪಿ ಜಿಲ್ಲಾ ಎಸ್ಸಿ ಮೋರ್ಚಾ ಅಧ್ಯಕ್ಷ ಮಾರುತಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಗಂಗಹನುಮಯ್ಯ ಮೂಲ ಕಾಂಗ್ರೆಸ್ ಪಕ್ಷದವರಾಗಿದ್ದು, ಮತ್ತೆ ಮರಳಿ ಮನೆಗೆ ಬಂದಿದ್ದಾರೆ. ಈ ಹಿಂದೆ ಬಿಜೆಪಿ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಕೊರಟಗೆರೆ ಮಂಡಲದ ಬಿಜೆಪಿ ಪಕ್ಷದ ಅಧ್ಯಕ್ಷರಾಗಿದ್ದ ತುಂಬಾಡಿಯ ತಿಮ್ಮಜ್ಜರವರು ಕೆಲವು ದಿನಗಳ ಹಿಂದೆ ಕಾಂಗ್ರೆಸ್ ಸೇರಿದ್ದಾರೆ.
ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ 150 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ
ಇದರೊಂದಿಗೆ ಬಿಜೆಪಿ ಪಕ್ಷದ ಮಹಿಳಾ ಮುಖಂಡರಾಗಿದ್ದ ಹಾಗೂ ಬಗರ್ ಹಕುಂ ಸಮತಿ ಸದಸ್ಯೆ ಹೇಮಲತಾ ಸೇರಿದಂತೆ ನೂರಾರು ಬಿಜೆಪಿ ಕಾರ್ಯತರ್ಕರು ಕಾಂಗ್ರೆಸ್ ಪಕ್ಷವನ್ನು ಕೊರಟಗೆರೆ ವಿಧಾನಸಭಾ ವ್ಯಾಪ್ತಿಯಲ್ಲಿ ಸೇರಿದ್ದಾರೆ ಹಾಗೂ ಇಂದು ಹಲವಾಗು ಮುಸ್ಲಿಂ ಸ್ನೇಹಿತರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿರುವುದು ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ ವೃದ್ಧಿಯಾಗುತ್ತಿದ್ದು, ನಮ್ಮೆಲ್ಲಾ ಕಾರ್ಯಕರ್ತರು, ಮುಖಂಡರು ಸೇರಿ ಶ್ರಮವಹಿಸಿ ನನ್ನನ್ನು ಗೆಲ್ಲಿಸಲ್ಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮಾಜಿ ಶಾಸಕ ಗಂಗಹನುಮಯ್ಯ ಮಾತನಾಡಿ, ನಾನು ಮೂಲ ಕಾಂಗ್ರೆಸ್ ಪಕ್ಷದಲ್ಲಿದ್ದು ಮಧುಗಿರಿಯಲ್ಲಿ ಶಾಸಕನಾಗಿದ್ದೆ. ನಂತರ ಜೆಡಿಎಸ್ ಪಕ್ಷವನ್ನು ಸೇರಿ ಮತ್ತೊಮ್ಮೆ ಮಧುಗಿರಿಯಲ್ಲಿ ಶಾಸಕನಾಗಿದ್ದೆ. ಬದಲಾದ ಪರಿಸ್ಥಿತಿಯಲ್ಲಿ ಬಿಜೆಪಿ ಸೇರಿದ್ದೆ. ಆದರೆ ಆ ಪಕ್ಷದಲ್ಲಿ 20 ವರ್ಷಗಳ ಕಾಲ ಪಕ್ಷ ಸಂಘಟನೆ ಮಾಡಿದರೂ ಹಿರಿಯರಿಗೆ ಮತ್ತು ಹಿರಿತನಕ್ಕೆ ಬೆಲೆಯಿಲ್ಲ. ಪಕ್ಷ ಸಂಘಟಿಸಿದವರಿಗೆ ಮಾನ್ಯತೆ ಇಲ್ಲ. ಹಣ ಮತ್ತು ಹೊಸಬರಿಗೆ ಮಾತ್ರ ಮಣೆ. ಇದರಿಂದ ಬೇಸತ್ತು ಯಾವುದೇ ಷರತ್ತುಗಳಿಲ್ಲದೆ ಡಾ.ಜಿ.ಪರಮೇಶ್ವರ್‌ರವರ ಕರೆಯ ಮೇರೆಗೆ ಮಾತೃ ಪಕ್ಷಕ್ಕೆ ಹಿಂದಿರಿಗಿದ್ದೇನೆ ಎಂದರು.
ಪತ್ರಿಕಾ ಗೋಷ್ಠಿಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರುಗಳಾದ ಮಾರುತಿ, ಎ.ಡಿ.ಬಲರಾಮಯ್ಯ, ರಾಮಕೃಷ್ಣಯ್ಯ, ತಿಮ್ಮಜ್ಜ, ರಾಯಸಂದ್ರ ರವಿಕುಮರ್, ಹೇಮಲತಾ, ವೆಂಕಟೇಶ್, ನರಸಿಂಹಮೂರ್ತಿ, ಅಬ್ದಲ್ ರಜಾಕ್, ಮಕ್ತಿಯಾರ್, ಪ್ರೋಟ್ ಇರ್ಷಾದ್, ದಾವುದ್‌ಖಾನ್, ಫಯೂ ಸೇರಿದಂತೆ ಇನ್ನಿತರು ಹಾಜರಿದ್ದರು. ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಾಗಿತ್ತು.
ಮೈಸೂರು ಮಹಾರಾಜರ ಸ್ಫೂರ್ತಿಯಿಂದ ವರುಣ ಮಾದರಿ ಕ್ಷೇತ್ರ ಮಾಡುವೆ: ಸಚಿವ ವಿ.ಸೋಮಣ್ಣ
ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ ವೃದ್ಧಿಯಾಗುತ್ತಿದ್ದು, ಅನ್ಯ ಪಕ್ಷಗಳ ಪ್ರಭಾವಿಗಳ ಸಹಿತ ಅನೇಕ ಕಾರ್ಯಕರ್ತರು ಕಾಂಗ್ರೆಸ್ ಕಾರ್ಯವೈಖರಿ ಮೆಚ್ಚಿ ಸೇರ್ಪಡೆಯಾಗುತ್ತಿದ್ದಾರೆ. ನಮ್ಮೆಲ್ಲಾ ಕಾರ್ಯಕರ್ತರು, ಮುಖಂಡರು ಸೇರಿ ಶ್ರಮವಹಿಸಿ ನನ್ನನ್ನು ಗೆಲ್ಲಿಸಲ್ಲಿದ್ದಾರೆ. ಅಭಿವೃದ್ಧಿ ಮಾಡಿದ ಇತಿಹಾಸ ಇರುವುದು ಕಾಂಗ್ರೆಸಿಗೆ ಮಾತ್ರ
-ಡಾ. ಜಿ. ಪರಮೇಶ್ವರ್, ಶಾಸಕ, ಮಾಜಿ ಡಿಸಿಎಂ