ಧರ್ಮಸ್ಥಳ ಪ್ರಕರಣ ಎಸ್‌ಐಟಿ ತನಿಖೆ ಆಧರಿಸಿ ಕ್ರಮ: ಸಚಿವ ಎನ್‌.ಎಸ್‌.ಬೋಸರಾಜು

Published : Aug 25, 2025, 10:57 AM IST
NS Boseraju

ಸಾರಾಂಶ

ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರು ಅವರ ವಿರುದ್ಧ ಕಾನೂನು ಕ್ರಮವಾಗಲಿದೆ. ದೂರು ಬಂದ ತಕ್ಷಣವೇ ಸರ್ಕಾರ ಎಸ್‌ಐಟಿಗೆ ವಹಿಸಿ ಪ್ರಕರಣದ ಸತ್ಯಾಸತ್ಯತೆಯನ್ನು ಪರಿಶೀಲಿಸಲು ಮುಂದಾಗಿತ್ತು.

ರಾಯಚೂರು (ಆ.25): ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ತನಿಖೆ ನಡೆಸುತ್ತಿದ್ದು, ಅದು ನೀಡುವ ವರದಿಯನ್ನಾಧರಿಸಿ ಮುಂದಿನ ಕ್ರಮ ವಹಿಸಲಾಗುವುದು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್‌.ಎಸ್‌.ಬೋಸರಾಜು ತಿಳಿಸಿದರು. ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರು ಅವರ ವಿರುದ್ಧ ಕಾನೂನು ಕ್ರಮವಾಗಲಿದೆ. ದೂರು ಬಂದ ತಕ್ಷಣವೇ ಸರ್ಕಾರ ಎಸ್‌ಐಟಿಗೆ ವಹಿಸಿ ಪ್ರಕರಣದ ಸತ್ಯಾಸತ್ಯತೆಯನ್ನು ಪರಿಶೀಲಿಸಲು ಮುಂದಾಗಿತ್ತು. ಇದೀಗ ತನಿಖೆ ಸಾಗಿದ್ದು ವರದಿ ಬಂದ ಬಳಿಕ ಸೂಕ್ತ ಕ್ರಮವಾಗಲಿದೆ ಎಂದರು.

ಧರ್ಮಗಳ ಆಧಾರದಡಿ ಬಿಜೆಪಿಗರು ರಾಜಕೀಯ ಮಾಡುತ್ತಾರೆ. ವಿನಾಕಾರಣಕ್ಕೆ ಎಲ್ಲದರಲ್ಲಿಯೂ ಧರ್ಮವನ್ನು ತಂದು ಆ ಮುಖಾಂತರ ಜನರ ನಡುವೆ ದ್ವೇಷ, ಅಸೂಹೆ, ಅಶಾಂತಿಯನ್ನು ಸೃಷ್ಠಿಸುವ ಕೆಲಸವನ್ನು ಮಾಡುತ್ತಾರೆಯೇ ಹೊರತು ಅಭಿವೃದ್ಧಿ ಪರವಾದ ಚರ್ಚೆಗಳನ್ನು ಮಾಡುವುದಿಲ್ಲ, ಕೇಂದ್ರ ಸರ್ಕಾರ ರಾಜ್ಯಕ್ಕೆ ಅನುದಾನ ನೀಡುವ ಬಗ್ಗೆ, ಕೇಂದ್ರದ ಯೋಜನೆಗಳ ಬಗ್ಗೆ ಚರ್ಚಿಸುವ ಕಾಳಜಿ ಅವರಲ್ಲಿಲ್ಲ ಎಂದು ದೂರಿದರು.

ಪ್ರತಿಪಕ್ಷಗಳಿಗೆ ಬೇರೆ ಕೆಲಸ ಇಲ್ಲ: ಯಾರೋ ಒಂದಿಬ್ಬರು ಶಾಸಕರು ಹೇಳಿದ್ದನ್ನೇ ಮುಂದಿಟ್ಟುಕೊಂಡು ನಮ್ಮ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ. ಎಲ್ಲಾ ಶಾಸಕರು ಸಮಾಧಾನದಿಂದಿದ್ದರೂ ಒಂದಿಬ್ಬರಿಗೆ ಮಾತ್ರ ತೊಂದರೆ ಎಂದರೆ ಅದು ಸ್ಥಳೀಯ ಸಮಸ್ಯೆ ಅಷ್ಟೆ ಎಂದು ಹೇಳಿದ್ದಾರೆ. ಅನುದಾನ ಹಂಚಿಕೆ ಸೇರಿದಂತೆ ಸರ್ಕಾರದಲ್ಲಿ ಎಲ್ಲಾ ಕಾರ್ಯಕ್ರಮಗಳು ಸುಸೂತ್ರವಾಗಿ ನಡೆಯುತ್ತಿದ್ದು, ಒಂದಿಬ್ಬರು ಶಾಸಕರು ಹೇಳಿದ್ದನ್ನೇ ಸತ್ಯ ಎಂದು ಆರೋಪ ಮಾಡುತ್ತಿರುವ ಪ್ರತಿಪಕ್ಷಗಳಿಗೆ ಮಾಡಲು ಬೇರೆ ಕೆಲಸ ಇಲ್ಲ ಎಂದು ಕೊಡಗು ಜಿಲ್ಲಾ ಉಸ್ತುವಾರಿಯೂ ಆಗಿರುವ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು ಇತ್ತೀಚಿನ ರಾಜಕೀಯ ಬೆಳವಣಿಗೆ ಬಗ್ಗೆ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.

ಸರ್ಕಾರದ ಮೇಲೆ ವಿನಾ ಕಾರಣ ಆರೋಪ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಹಾರಂಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನುದಾನ ಹಂಚಿಕೆ, ವಸತಿ ಯೋಜನೆಗಳಿಗೆ ಸಂಬಂಧಿಸಿದಂತೆ ಒಂದಿಬ್ಬರು ಶಾಸಕರು ಮಾತನಾಡಿದ್ದಾರೆ. ಉಳಿದೆಲ್ಲಾ ಶಾಸಕರಿಗೆ ಯಾವುದೇ ಸಮಸ್ಯೆ ಆಗುತ್ತಿಲ್ಲ. ಹೀಗಿರುವಾಗ ಸರ್ಕಾರದ ಮೇಲೆ ವಿನಾ ಕಾರಣ ಆರೋಪ ಮಾಡಲಾಗುತ್ತಿದೆ. ಸರ್ಕಾರದಲ್ಲಿ ಸಾಕಷ್ಟು ಹಣ ಇದ್ದು, ಯೋಜನೆಗಳ ಅನುಷ್ಠಾನಕ್ಕೆ ಯಾವುದೇ ಸಮಸ್ಯೆ ಇಲ್ಲ ಎಂದರು. ವಸತಿ ಯೋಜನೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲ್ ಮಾಡಿದ ಆರೋಪಕ್ಕೆ ಪ್ರತಿಕ್ರಿಯಿಸಿದ ಸಚಿವರು, ಸಚಿವರಿಂದ ಸಮಸ್ಯೆಯಾಗಿದೆ ಎಂದು ಅವರು ಹೇಳಿಲ್ಲ.

ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಆಗುತ್ತಿರುವುದನ್ನು ಹೇಳಿದ್ದಾರೆ. ಮುಖ್ಯಮಂತ್ರಿಯವರು ಬಿ.ಆರ್.ಪಾಟೀಲ್ ಅವರನ್ನು ಕರೆಸಿ ಮಾತನಾಡಿದ್ದಾರೆ. ಸಮಸ್ಯೆ ಇತ್ಯರ್ಥವಾಗಿದೆ ಎಂದು ಹೇಳಿದರು. ಕಾಂಗ್ರೆಸ್ ನ ರಾಜು ಕಾಗೆ ಅವರ ಆರೋಪದ ಬಗ್ಗೆ ಪ್ರತಿಕ್ರಿಯೆ ವ್ಯಕ್ತಪಡಿಸಿದ ಸಚಿವರು, ರಾಜು ಕಾಗೆ ಅವರು ಭಾವನಾತ್ಮಕ ವ್ಯಕ್ತಿ. ಸ್ಥಳೀಯವಾಗಿ ಆಗಿರುವ ಸಮಸ್ಯೆಯನ್ನು ಅವರು ಹೇಳಿಕೊಂಡಿದ್ದಾರೆ. ರಾಜ್ಯಾದ್ಯಂತ ಎಲ್ಲಾ ಕಡೆ ಕೆಲಸ ಆಗುತ್ತಿದ್ದರೂ ಅವರ ಕ್ಷೇತ್ರದಲ್ಲಿ ಆಗುತ್ತಿಲ್ಲ ಎಂದಾದರೆ ಅದು ಅಧಿಕಾರಿಗಳ ನಿರ್ಲಕ್ಷದಿಂದ ಆಗಿರಬಹುದು. ಈ ಬಗ್ಗೆ ಮುಖ್ಯಮಂತ್ರಿಗಳು ಮಾತನಾಡಿದ್ದಾರೆ. ಸಂಬಂಧಿಸಿದ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನಗಳನ್ನು ನೀಡಿದ್ದಾರೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಐಷಾರಾಮಿ ಕಾರ್ಟಿಯರ್ ವಾಚ್‌: ಲೋಕಾಯುಕ್ತ ಅಫಿಡವಿಟ್ ರಿವೀಲ್ ಮಾಡಿದ ಡಿ.ಕೆ. ಶಿವಕುಮಾರ್!
'ನಿಮಗೆ ಧಮ್ ಇದ್ರೆ..; ದ್ವೇಷ ಭಾಷಣ ಮಸೂದೆ ಜಾರಿಗೆ ಮುಂದಾಗಿರೋ ಕಾಂಗ್ರೆಸ್ ಸರ್ಕಾರಕ್ಕೆ ಸಿಟಿ ರವಿ ನೇರ ಸವಾಲು!