
ನವದೆಹಲಿ(ಸೆ.30): ಲೋಕಸಭಾ ಚುನಾವಣೆ, ವಿಧಾನಸಭಾ ಚುನಾವಣೆ, ಸ್ಥಳೀಯ ಸಂಸ್ಥೆ ಚುನಾವಣಗಳಲ್ಲೂ ಕಾಂಗ್ರೆಸ್ ಈ ಮಟ್ಟದ ರಾಜಕೀಯ, ಸವಾಲು, ಸಂಕಷ್ಟಗಳನ್ನು ಎದುರಿಸಿಲ್ಲ. ಆದರೆ ಕಾಂಗ್ರೆಸ್ ಅಧ್ಯಕ್ಷ ಚುನಾವಣೆ ಘೋಷಣೆ ಮಾಡಿದ ಬಳಿಕ ಕಾಂಗ್ರೆಸ್ ಒಂದರ ಮೇಲೊಂದರಂತೆ ಹಿನ್ನಡೆ ಅನುಭವಿಸುತ್ತಿದೆ. ಮುಂದಿನ ಅಧ್ಯಕ್ಷ ಯಾರಾಗಬೇಕು ಅನ್ನೋದು ನಿರ್ಧರಿಸಲು ಚುನಾವಣೆ ನಿಗದಿಪಡಿಸಿದೆ. ಇಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಅಂತಿಮ ದಿನ ಗಾಂಧಿ ಕುಟುಂಬ ಹೊಸ ದಾಳ ಉರುಳಿಸಿದೆ. ಕಾಂಗ್ರೆಸ್ ಹಿರಿಯ ನಾಯಕ, ಗಾಂಧಿ ಕುಟುಂಬದ ಆಪ್ತ ಮಲ್ಲಿಕಾರ್ಜುನ ಖರ್ಗೆಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಸೂಚಿಸಿದೆ. ಖರ್ಗೆ ಹೆಸರು ಅಧ್ಯಕ್ಷ ಚುನಾವಣೆ ರೇಸ್‌ನಲ್ಲಿ ಕಾಣಿಸಿಕೊಂಡ ಬೆನ್ನಲ್ಲೇ ಈಗಾಗಲೇ ನಾಮಪತ್ರ ಸಲ್ಲಿಸಲು ಮುಂದಾಗಿರುವ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ರೇಸ್‌ನಿಂದ ಹೊರಗುಳಿಯುವುದಾಗಿ ಹೇಳಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷ ಚುನಾವಣೆಗೆ(Congress President Election) ಸ್ಪರ್ಧಿಸುವಂತೆ ಕಾಂಗ್ರೆಸ್ ಹೈಕಮಾಂಡ್(Congress) ನಿನ್ನೆ ತಡರಾತ್ರಿ ಸೂಚನೆ ನೀಡಿದೆ. ಈ ಮೂಲಕ ಅಧಿಕಾರವನ್ನು ಗಾಂಧಿ(Gandhi family) ಕುಟುಂಬದ ಬಳಿ ಇರಿಸಿಕೊಳ್ಳಲು ಮಾಸ್ಟರ್ ಪ್ಲಾನ್ ಮಾಡಿದೆ. ಈಗಾಗಲೇ ಜಿ23 ನಾಯಕ ಶಶಿ ತರೂರ್(Shashi Tharoor) ಅಧ್ಯಕ್ಷ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ. ಅಶೋಕ್ ಗೆಹ್ಲೋಟ್ ಕಣದಿಂದ ಹಿಂದೆ ಸರಿದ ಬೆನ್ನಲ್ಲೇ ದಿಗ್ವಿಜಯ್ ಸಿಂಗ್(Digvijay Singh) ಅಧ್ಯಕ್ಷ ಚುನಾವಣೆ ರೇಸ್‌ಗೆ ಧುಮುಕಿದ್ದರು. ನಾಪತ್ರ ಪಡೆದುಕೊಂಡಿರುವ ದಿಗ್ವಿಜಯ್ ಸಿಂಗ್ ಇಂದು ನಾಪಪತ್ರ(Nomination) ಸಲ್ಲಿಸಲು ಎಲ್ಲಾ ತಯಾರಿ ಮಾಡಿಕೊಂಡಿದ್ದಾರೆ. ನಿನ್ನೆ ಸಂಜೆ ಮಲ್ಲಿಕಾರ್ಜುನ ಖರ್ಗೆ(Mallikarjun Kharge) ಭೇಟಿ ಮಾಡಿದ ದಿಗ್ವಿಜಯ್ ಸಿಂಗ್, ಅಧ್ಯಕ್ಷ ಚುನಾವಣೆಗೆ ಸ್ಪರ್ಧಿಸುತ್ತಿರುವುದಾಗಿ ಹೇಳಿದ್ದಾರೆ. ಈ ವೇಳೆ ತಾವು ಸ್ಪರ್ಧಿಸುತ್ತಿಲ್ಲ ಎಂದು ಖರ್ಗೆ ಪ್ರತಿಕ್ರಿಯಿಸಿದ್ದರು. ಇಂದು ಬೆಳಗ್ಗೆ ಪ್ಲಾನ್ ಉಲ್ಟಾ ಆಗಿದೆ. ಮಲ್ಲಿಕಾರ್ಜುನ ಖರ್ಗೆ ಸ್ಪರ್ಧಿಸುವುದಾದರೆ ನಾನು ನಾಮಪತ್ರ ಸಲ್ಲಿಸುವುದಿಲ್ಲ ಎಂದು ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷ ಚುನಾವಣೆಯಲ್ಲಿ ಟ್ವಿಸ್ಟ್, ಗಾಂಧಿ ಕುಟುಂಬದ ಅಭ್ಯರ್ಥಿಯಾಗಿ ಖರ್ಗೆ?
ಮಲ್ಲಿಕಾರ್ಜುನ ಖರ್ಗೆ ಹಿರಿಯರು. ಅವರು ಕಾಂಗ್ರೆಸ್ ಅಧ್ಯಕ್ಷ ಚುನಾವಣೆಗೆ ಸ್ಪರ್ಧಿಸಿದರೆ ನಾನು ನಾಮಪತ್ರ ಸಲ್ಲಿಸುವುದಿಲ್ಲ. ಕಣದಿಂದ ಹಿಂದೆ ಸರಿಯುತ್ತೇನೆ ಎಂದು ದಿಗ್ವಿಜಯ್ ಸಿಂಗ್ ಹೇಳಿದ್ದಾರೆ. ನಾನು ಮುಂದೆಯೂ ಕಾಂಗ್ರೆಸ್ ಪಕ್ಷಕ್ಕಾಗಿ ದುಡಿಯುತ್ತೇನೆ ಎಂದು ದಿಗ್ವಿಜಯ್ ಸಿಂಗ್ ಹೇಳಿದ್ದಾರೆ. ಗಾಂಧಿ ಕುಟುಂಬ ಅಭ್ಯರ್ಥಿ ಖರ್ಗೆ ಸ್ಪರ್ಧಿಸಿದರೆ ಗೆಲುವು ಖಚಿತ. ಹೀಗಾಗಿ ದಿಗ್ವಿಜಯ್ ಸಿಂಗ್ ಕಣದಿಂದ ಹಿಂದೆ ಸರಿಯವು ನಿರ್ಧಾರ ಮಾಡಿದ್ದಾರೆ.
ಕಾಂಗ್ರೆಸ್ ಆಪ್ತನಾಗಿ ಗುರುತಿಸಿಕೊಂಡಿದ್ದ ಅಶೋಕ್ ಗೆಹ್ಲೋಟ್ ಸಿಎಂ ಸ್ಥಾನಕ್ಕೆ ಕುತ್ತು ಬರುತ್ತಿದ್ದಂತೆ ಅತೀ ದೊಡ್ಡ ಹೈಡ್ರಾಮ ಮೂಲಕ ಅಧ್ಯಕ್ಷ ಸ್ಥಾನದಿಂದ ಹಿಂದೆ ಸರಿದಿದ್ದಾರೆ. ಇಷ್ಟೇ ಅಲ್ಲ ಕಾಂಗ್ರೆಸ್ ಹಾಗೂ ಗಾಂಧಿ ಕುಟುಂಬದ ವಿರುದ್ಧವೇ ತಿರುಗಿಬಿದ್ದಿದರು. ಹೀಗಾಗಿ ಕಾಂಗ್ರೆಸ್ ಹೈಕಮಾಂಡ್ ತಮ್ಮ ಆಪ್ತ ಮಲ್ಲಿಕಾರ್ಜುನ ಖರ್ಗೆಗೆ ಸ್ಪರ್ಧಿಸುವಂತೆ ಸೂಚನೆ ನೀಡಿದೆ. ಈ ಮೂಲಕ ಪಕ್ಷದ ಸಂಪೂರ್ಣ ಅಧಿಕಾರ ಗಾಂಧಿ ಕುಟುಂಬದ ಬಳಿ ಉಳಿಸಿಕೊಳ್ಳಲು ಕಾಂಗ್ರೆಸ್ ಹೈಕಮಾಂಡ್ ಪ್ಲಾನ್ ಮಾಡಿತ್ತು. ಇಂದು ಮಧ್ಯಾಹ್ನ 3 ಗಂಟೆ ಒಳಗೆ ಖರ್ಗೆ ನಾಪತ್ರ ಸಲ್ಲಿಸುವ ಸಾಧ್ಯತೆ ಇದೆ.
ಕಾಂಗ್ರೆಸ್ ಅಧ್ಯಕ್ಷ ಚುನಾವಣೆಗೆ ಬಿಜೆಪಿ ಮಾಜಿ ನಾಯಕ ಸ್ಪರ್ಧೆ, ಗೆಹ್ಲೋಟ್ ಪ್ಲಾನ್ ಸಕ್ಸಸ್!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.