ಡಿಕೆಶಿ ಬಣದ 18 ಶಾಸಕರು, ಸಚಿವರಿಂದ ಡಿನ್ನರ್‌ ಪಾರ್ಟಿ

Kannadaprabha News   | Kannada Prabha
Published : Feb 27, 2026, 05:38 AM IST
DK Shivakumar

ಸಾರಾಂಶ

ಮಾಗಡಿ ಶಾಸಕ ಎಚ್‌.ಸಿ.ಬಾಲಕೃಷ್ಣ ಅವರ ಹುಟ್ಟುಹಬ್ಬದ ಆಚರಣೆ ಹೆಸರಲ್ಲಿ ಸುಮಾರು 18 ಶಾಸಕರು ಗುರುವಾರ ಒಂದೆಡೆ ಸೇರಿ ಕುತೂಹಲ ಮೂಡಿಸಿದ್ದಾರೆ. ಇದರಲ್ಲಿ ಕೆಲ ಸಚಿವರೂ ಇದ್ದಾರೆ. ಹುಟ್ಟುಹಬ್ಬದಲ್ಲಿ ಭಾಗಿಯಾಗಿದ್ದ ಬಹುತೇಕ ಎಲ್ಲ ಶಾಸಕರೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಬಣದವರು ಎನ್ನಲಾಗಿದೆ

ಬೆಂಗಳೂರು : ಮಾಗಡಿ ಶಾಸಕ ಎಚ್‌.ಸಿ.ಬಾಲಕೃಷ್ಣ ಅವರ ಹುಟ್ಟುಹಬ್ಬದ ಆಚರಣೆ ಹೆಸರಲ್ಲಿ ಸುಮಾರು 18 ಶಾಸಕರು ಗುರುವಾರ ಒಂದೆಡೆ ಸೇರಿ ಕುತೂಹಲ ಮೂಡಿಸಿದ್ದಾರೆ. ಇದರಲ್ಲಿ ಕೆಲ ಸಚಿವರೂ ಇದ್ದಾರೆ. ಹುಟ್ಟುಹಬ್ಬದಲ್ಲಿ ಭಾಗಿಯಾಗಿದ್ದ ಬಹುತೇಕ ಎಲ್ಲ ಶಾಸಕರೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಬಣದವರು ಎನ್ನಲಾಗಿದ್ದು, ಇದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆದ ಹುಟ್ಟುಹಬ್ಬದ ಕಾರ್ಯಕ್ರಮ

ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆದ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಶಾಸಕರಾದ ಶಿವಗಂಗಾ ಬಸವರಾಜು, ಕುಣಿಗಲ್‌ ಶಾಸಕ ಡಾ। ರಂಗನಾಥ್‌, ಸಚಿವ ಡಿ.ಸುಧಾಕರ್‌, ಸಿ.ಪಿ.ಯೋಗೇಶ್ವರ್‌, ನಯನಾ ಮೋಟಮ್ಮ, ಆನೇಕಲ್‌ ಶಿವಣ್ಣ ಸೇರಿದಂತೆ ಒಟ್ಟು 18 ಶಾಸಕರು ಭಾಗಿಯಾಗಿದ್ದು, ಈ ಸಂಬಂಧ ಫೋಟೋ ಕೂಡ ವೈರಲ್‌ ಆಗಿದೆ. ಇದು, ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಗೊಂದಲ ತೀವ್ರಗೊಳ್ಳುತ್ತಿರುವ ಸಮಯದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಬಣದ ಶಾಸಕರು ಒಟ್ಟಾಗಿ ಶಕ್ತಿ ಪ್ರದರ್ಶನದ ಪ್ರಯತ್ನ ನಡೆಸಿರಬಹುದು ಎಂಬ ಮಾತು ಕೇಳಿ ಬಂದಿದೆ.

ಈ ಮಧ್ಯೆ, ಶಾಸಕರು ಒಂದೆಡೆ ಸೇರಿದ ಕುರಿತು ಪ್ರತಿಕ್ರಿಯೆ ನೀಡಿರುವ ಶಾಸಕ ಸಿ.ಪಿ.ಯೋಗೇಶ್ವರ್‌, ಬಾಲಕೃಷ್ಣ ಅವರ ಹುಟ್ಟುಹಬ್ಬ ಇತ್ತು. ಖಾಸಗಿ ಹೋಟೆಲ್‌ನಲ್ಲಿ ಊಟಕ್ಕೆ ಕರೆದಿದ್ದರು. ಸುಮಾರು 40 ಶಾಸಕರು ಭಾಗಿದ್ದರು. ಬಾಲಕೃಷ್ಣ ಅವರಿಗೆ ಶುಭ ಕೋರಿ, ಊಟ ಮಾಡಿಕೊಂಡು ಬಂದಿದ್ದಾಗಿ ಹೇಳಿದರು.

- ನಾಯಕತ್ವ ಚರ್ಚೆ ಬೆನ್ನಲ್ಲೇ ಮೀಟಿಂಗ್‌

ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಬೆನ್ನಲ್ಲೇ ಡಿಕೆ ಬಣದ ಶಾಸಕರಿಂದ ಮೀಟಿಂಗ್‌

ಶಾಸಕ ಬಾಲಕೃಷ್ಣ ಹುಟ್ಟುಹಬ್ಬದ ನೆಪದಲ್ಲಿ ಬೆಂಗಳೂರಿನ ಖಾಸಗಿ ಹೋಟೆಲ್‌ಲ್ಲಿ ಔತಣಕೂಟ

ಕಾರ್ಯಕ್ರಮದಲ್ಲಿ ಡಿಕೆಶಿ ಬಣದ 18 ಶಾಸಕರು, ಹಲವು ಸಚಿವರು ಭಾಗಿ. ಫೋಟೋ ವೈರಲ್‌

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

Internal Reservation Row: ಸಿಎಂ ನೇತೃತ್ವದಲ್ಲಿ ದಲಿತ ಸಚಿವರ ಮಹತ್ವದ ಸಭೆ, ಮೂರು ಮಹತ್ವದ ನಿರ್ಧಾರ, ರಾಜಭವನಕ್ಕೆ ಸಚಿವರ ನಿಯೋಗ ದೌಡು!
ಪ್ರಧಾನಿ ಮೋದಿ ಅಪಹಾಸ್ಯ ಮಾಡಿದ್ದ ಕೈ ಕಾರ್ಯಕರ್ತೆ ವಿರುದ್ಧ ದೂರು!