
ಬೆಂಗಳೂರು (ಜು.01): ಬಸವನಗುಡಿಯ ನಿಜಗುಣ ಕಲ್ಯಾಣ ಮಂಟಪದಲ್ಲಿ ಜುಲೈ 16ರಂದು ಆರ್‌ಎಸ್‌ಎಸ್ ಆಯೋಜಿಸಿರುವ ಶ್ರೀ ಗುರುಪೂಜಾ ಉತ್ಸವದಲ್ಲಿ ತಾವು ಪಾಲ್ಗೊಳ್ಳುತ್ತಿಲ್ಲ ಎಂದು ಚಲನಚಿತ್ರ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಸ್ಪಷ್ಟಪಡಿಸಿದ್ದಾರೆ. ಆಮಂತ್ರಣ ಪತ್ರಿಕೆಯಲ್ಲಿ ನಾಗತಿಹಳ್ಳಿ ಹೆಸರಿರುವುದಕ್ಕೆ ಹಲವರು ಆಕ್ಷೇಪ ವ್ಯಕ್ತಪಡಿಸಿದ್ದರು. ಇದಕ್ಕೆ ಸ್ಪಷ್ಟನೆ ನೀಡಿರುವ ಅವರು, ಕಾರ್ಯಕ್ರಮದಲ್ಲಿ ನಾನು ಪಾಲ್ಗೊಳ್ಳುತ್ತಿಲ್ಲ. ಅದನ್ನು ನಾನು ಆಯೋಜಕರಿಗೂ ತಿಳಿಸಿದ್ದೆ.
ಆದರೆ, ಆಕಸ್ಮಿಕವಾಗಿ ಆಮಂತ್ರಣ ಪತ್ರಿಕೆಯಲ್ಲಿ ಹೆಸರು ಮುದ್ರಣವಾಗಿದೆ ಎಂದು ಆಯೋಜಕರು ತಿಳಿಸಿದ್ದು, ಅದಕ್ಕೆ ಕ್ಷಮೆಯನ್ನೂ ಕೋರಿದ್ದಾರೆ. ಕಾರ್ಯಕ್ರಮ ನಡೆಯುವ ದಿನದಂದು ನಾನು ವಿದೇಶದಲ್ಲಿ ಚಲನಚಿತ್ರವೊಂದರ ಚಿತ್ರೀಕರಣದಲ್ಲಿ ಪಾಲ್ಗೊಳ್ಳುತ್ತಿದ್ದೇನೆ ಎಂದು ತಿಳಿಸಿದ್ದಾರೆ. ಚಂದ್ರಶೇಖರ್ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ನಮೂದಿಸಲಾಗಿತ್ತು. ಆದರೆ, ನಾಗತಿಹಳ್ಳಿ ಚಂದ್ರಶೇಖರ್ ಅವರು ಆರ್‌ಎಸ್‌ಎಸ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿರುವುದರ ಕುರಿತಂತೆ ಕೆಲವರು ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪ ವ್ಯಕ್ತಪಡಿಸಿದ್ದರು.
ಪಕ್ಷದ ವಿರುದ್ಧ ಬಹಿರಂಗ ಟೀಕೆ ಸರಿಯಲ್ಲ: ರೇಣುಕಾಚಾರ್ಯಗೆ ಆರಗ ಜ್ಞಾನೇಂದ್ರ ಸಲಹೆ
ಈ ಕುರಿತಂತೆ ಸಾಮಾಜಿಕ ಜಾಲತಾಣದ ಮೂಲಕವೇ ಸ್ಪಷ್ಟನೆ ನೀಡಿರುವ ನಾಗತಿಹಳ್ಳಿ ಚಂದ್ರಶೇಖರ್, ಆರ್‌ಎಸ್‌ಎಸ್ ಆಯೋಜಿಸಿರುವ ಶ್ರೀ ಗುರುಪೂಜಾ ಉತ್ಸವ ಕಾರ್ಯಕ್ರಮದಲ್ಲಿ ನಾನು ಪಾಲ್ಗೊಳ್ಳುತ್ತಿಲ್ಲ. ಅದನ್ನು ನಾನು ಆಯೋಜಕರಿಗೂ ತಿಳಿಸಿದ್ದೆ. ಆದರೆ, ಆಕಸ್ಮಿಕವಾಗಿ ಆಮಂತ್ರಣ ಪತ್ರಿಕೆಯಲ್ಲಿ ಹೆಸರು ಮುದ್ರಣವಾಗಿದೆ ಎಂದು ಆಯೋಜಕರು ತಿಳಿಸಿದ್ದು, ಅದಕ್ಕೆ ಕ್ಷಮೆಯನ್ನೂ ಕೋರಿದ್ದಾರೆ. ಕಾರ್ಯಕ್ರಮ ನಡೆಯುವ ದಿನದಂದು ನಾನು ವಿದೇಶದಲ್ಲಿ ಚಲನಚಿತ್ರವೊಂದರ ಚಿತ್ರೀಕರಣದಲ್ಲಿ ಪಾಲ್ಗೊಳ್ಳುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ಪ್ರಧಾನಿ ಮೋದಿ ಪರಿಶ್ರಮದಿಂದ ಭಾರತಕ್ಕೆ ಜಾಗತಿಕ ಅಗ್ರ ಸ್ಥಾನ: ಸಂಸದ ಅಣ್ಣಾಸಾಹೇಬ ಜೊಲ್ಲೆ
ನಾನು ಏನಾಗಿದ್ದೇನೋ ಅದೇ ಆಗಿ ಇರುತ್ತೇನೆ. ನಾನು ಏನು ಮಾಡುತ್ತಿದ್ದೇನೋ ಅದು ಸರಿಯಿದೆ. ಅದನ್ನೇ ಮುಂದುವರಿಸುತ್ತೇನೆ ಎಂದು ನನ್ನನ್ನು ಹತ್ತಿರದಿಂದ ಬಲ್ಲ, ನಂಬುವ, ಪ್ರೀತಿಸುವ, ಬೆಳೆಸಿರುವ, ನನ್ನೊಂದಿಗೆ ಹಳ್ಳಿಯ ಕೆಲಸದಲ್ಲಿ ಕೈ ಜೋಡಿಸಿರುವ ಎಲ್ಲರಿಗೂ ಹೇಳಲು ಬಯಸುತ್ತೇನೆ. ನನ್ನ ಬಗ್ಗೆ ತಪ್ಪು ತಿಳಿಯಲು, ತಪ್ಪು ಹರಡಲು ಕೆಲವರು ತುದಿಗಾಲಲ್ಲಿ ನಿಂತಿದ್ದು, ಅವರನ್ನು ಮನ್ನಿಸಿ ಮುಂದಕ್ಕೆ ಹೋಗೋಣ. ನಾವೆಲ್ಲ ಮಾಡಬೇಕಾದ ಜನಪರ ಕೆಲಸ ಸಾಕಷ್ಟಿವೆ. ಅದನ್ನು ಮಾಡೋಣ, ಇನ್ನು ಮಾತು ಸಾಕು ಎಂದು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.