ವಾಲ್ಮೀಕಿ ಹಗರಣ ರಾಜ್ಯದ ಅತ್ಯಂತ ದೊಡ್ಡ ಹಗರಣವಾಗಿದೆ. ನಿಷ್ಪಕ್ಷಪಾತ ತನಿಖೆಗೆ ಆಗ್ರಹಿಸಿ ನಾನು ಮತ್ತು ವಿಜಯಪುರ ಶಾಸಕ ಬಸವರಾಜ ಪಾಟೀಲ ಯತ್ನಾಳ ಕೂಡಲಸಂಗಮದಿಂದ ಬಳ್ಳಾರಿಗೆ ಪಾದಯಾತ್ರೆ ನಡೆಸಲು ನಿರ್ಧರಿಸಿದ್ದೇವೆ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು.
ಗೋಕಾಕ (ಜು.29): ವಾಲ್ಮೀಕಿ ಹಗರಣ ರಾಜ್ಯದ ಅತ್ಯಂತ ದೊಡ್ಡ ಹಗರಣವಾಗಿದೆ. ನಿಷ್ಪಕ್ಷಪಾತ ತನಿಖೆಗೆ ಆಗ್ರಹಿಸಿ ನಾನು ಮತ್ತು ವಿಜಯಪುರ ಶಾಸಕ ಬಸವರಾಜ ಪಾಟೀಲ ಯತ್ನಾಳ ಕೂಡಲಸಂಗಮದಿಂದ ಬಳ್ಳಾರಿಗೆ ಪಾದಯಾತ್ರೆ ನಡೆಸಲು ನಿರ್ಧರಿಸಿದ್ದೇವೆ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಭಾನುವಾರ ನಗರದ ತಮ್ಮ ಗೃಹ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಒಂದಿಲ್ಲೊಂದು ಹಗರಣಗಳು ಸಂಭವಿಸುತ್ತಲೇ ಇವೆ.
ಅದರಲ್ಲಿ ಅತ್ಯಂತ ದೊಡ್ಡ ಹಗರಣ ವಾಲ್ಮೀಕಿ ಹಗರಣವಾಗಿದ್ದು, ವಾಲ್ಮೀಕಿ ನಿಗಮದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ಬೇರೆ, ಬೇರೆ ನಕಲಿ ಖಾತೆಗಳಿಗೆ ವರ್ಗಾವಣೆ ಮಾಡಿ ದೊಡ್ಡ ಮಟ್ಟದಲ್ಲಿ ಹಗರಣ ನಡೆಸಲಾಗಿದೆ. ಇದನ್ನು ಪ್ರತಿಭಟಿಸಿ ನಾನು ಮತ್ತು ಶಾಸಕ ಬಸನಗೌಡಪಾಟೀಲ ಯತ್ನಾಳ ಬಳ್ಳಾರಿವರೆಗೆ ಪಾದಯಾತ್ರೆ ನಡೆಸಲು ನಿರ್ಧರಿಸಿದ್ದು, ಆದಷ್ಟು ಬೇಗ ಹೈಕಮಾಂಡ್ ಅನುಮತಿ ಪಡೆದು ದಿನಾಂಕ ಪ್ರಕಟಿಸಲಾಗುವುದು ಎಂದರು.
undefined
ಮಹಾನಾಯಕ ಇನ್ಮುಂದೆ ಸಿಡಿ.ಶಿವು: ಪದೇಪದೇ ಮಹಾನಾಯಕ ಎಂದು ಸಂಭೋದಿಸಿದರೆ ಮಹಾ ನಾಯಕರಿಗೆ ಅಪಮಾನ ಮಾಡಿದಂತಾಗುತ್ತದೆ ಎಂದು ಭಾವಿಸಿ ನಾನು ಮತ್ತು ಎಚ್.ಡಿ. ಕುಮಾರಸ್ವಾಮಿ ಮಹಾನಾಯಕನಿಗೆ ಮರುನಾಮಕರಣ ಮಾಡಿದ್ದು, ಇನ್ಮುಂದೆ ಅವನು ಮಹಾನಾಯಕ ಅಲ್ಲ, ಬದಲಾಗಿ ಸಿ.ಡಿ. ಶಿವು ಎಂದು ಉಪಮುಖ್ಯಮಂತ್ರಿ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ಗೆ ರಮೇಶ ಜಾರಕಿಹೊಳಿ ಟಾಂಗ್ ನೀಡಿದರು.
ರಾಜ್ಯದಲ್ಲಿ ಹೂಡಿಕೆಗೆ ಭಯದ ವಾತಾವರಣ: ಸಚಿವೆ ನಿರ್ಮಲಾ ಸೀತಾರಾಮನ್ ಕಿಡಿ
ರಾಜ್ಯಾಧ್ಯಕ್ಷ ಸ್ಥಾನವನ್ನು ನಾವು ಇನ್ನೂ ಒಪ್ಪಿಲ್ಲ: ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ವಿಜಯೇಂದ್ರ ಅವರನ್ನು ನಾವು ಇನ್ನೂ ಒಪ್ಪಿಲ್ಲ. ನಮಗೇನಿದ್ದರೂ ಹೈಕಮಾಂಡ್, ಹೈಕಮಾಂಡ್ ಅಪ್ಪಣೆ ಮೇರೆಗೆ ನಾನು ಕಾರ್ಯನಿರ್ವಹಿಸುತ್ತೇನೆ ವಿನಃ ರಾಜ್ಯ ನಾಯಕರ ಅಪ್ಪಣೆ ಮೇರೆಗೆ ಅಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದರು.