ಬಾದಾಮಿ: ಚಿಮ್ಮನಕಟ್ಟಿಗೆ ಟಿಕೆಟ್‌, ಕಾಂಗ್ರೆಸ್‌ನಲ್ಲಿ ಅಸಮಾಧಾನ ಸ್ಫೋಟ

By Kannadaprabha News  |  First Published Apr 7, 2023, 10:00 PM IST

2018ರ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಬಾದಾಮಿಯಿಂದ ಸ್ಪರ್ಧೆ ಮಾಡಿದ್ದರು. ಆಗ ಶಾಸಕರಾಗಿದ್ದ ಬಿ.ಬಿ.ಚಿಮ್ಮನಕಟ್ಟಿ ಅವರು ತಮ್ಮ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದರು. ಈಗ ಬಿ.ಬಿ.ಚಿಮ್ಮನಕಟ್ಟಿ ಅವರು ತಮ್ಮ ಪುತ್ರನಿಗೆ ಟಿಕೆಟ್‌ ನೀಡಲು ಮನವಿ ಮಾಡಿದ್ದರು. ಆದಕಾರಣ ಪುತ್ರ ಭೀಮಸೇನ ಚಿಮ್ಮನಕಟ್ಟಿ ಅವರಿಗೆ ಟಿಕೆಟ್‌ ಘೋಷಣೆ ಮಾಡಲಾಗಿದೆ.  


ಬಾದಾಮಿ(ಏ.07):  ಎಐಸಿಸಿ ವತಿಯಿಂದ ಗುರುವಾರ 42 ಅಭ್ಯರ್ಥಿಗಳ ಪಟ್ಟಿಪ್ರಕಟಿಸಿದ್ದು, ಬಾದಾಮಿ ಮತಕ್ಷೇತ್ರದಿಂದ ಮಾಜಿ ಸಚಿವ ಬಿ.ಬಿ.ಚಿಮ್ಮನಕಟ್ಟಿ ಅವರ ಪುತ್ರ ಭೀಮಸೇನ ಚಿಮ್ಮನಕಟ್ಟಿ ಅವರಿಗೆ ಟಿಕೆಟ್‌ ಘೋಷಣೆ ಮಾಡಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್‌ನ ಪ್ರಬಲ ಟಿಕೆಟ್‌ ಆಕಾಂಕ್ಷಿಯಾಗಿದ್ದ ಮಹೇಶ ಹೊಸಗೌಡ್ರ ಅಸಮಾಧಾನಗೊಂಡಿದ್ದಾರೆ. ಇತ್ತ ಟಿಕೆಟ್‌ ಘೋಷಣೆಯಾದರೂ ಸಿದ್ದರಾಮಯ್ಯ ಸ್ಫರ್ಧೆ ಮಾಡಬೇಕು ಎಂದು ಅವರ ಅಭಿಮಾನಿಗಳು ಏ.7ರಂದು ಸಭೆ ಕರೆದಿದ್ದಾರೆ. ಇದು ತೀವ್ರ ಕುತೂಹಲ ಕೆರಳಿಸುವಂತೆ ಮಾಡಿದೆ.

2018ರ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಬಾದಾಮಿಯಿಂದ ಸ್ಪರ್ಧೆ ಮಾಡಿದ್ದರು. ಆಗ ಶಾಸಕರಾಗಿದ್ದ ಬಿ.ಬಿ.ಚಿಮ್ಮನಕಟ್ಟಿ ಅವರು ತಮ್ಮ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದರು. ಈಗ ಬಿ.ಬಿ.ಚಿಮ್ಮನಕಟ್ಟಿ ಅವರು ತಮ್ಮ ಪುತ್ರನಿಗೆ ಟಿಕೆಟ್‌ ನೀಡಲು ಮನವಿ ಮಾಡಿದ್ದರು. ಆದಕಾರಣ ಪುತ್ರ ಭೀಮಸೇನ ಚಿಮ್ಮನಕಟ್ಟಿ ಅವರಿಗೆ ಟಿಕೆಟ್‌ ಘೋಷಣೆ ಮಾಡಲಾಗಿದೆ. ಈಗಾಗಲೇ ಆಪ್ತ ಸಮಾಲೋಚನೆ ಮೂಲಕ ಮತಕ್ಷೇತ್ರದ ಎಲ್ಲ ಗ್ರಾಮಗಳಿಗೆ ತೆರಳಿ, ಜನರ ಸಂಪರ್ಕ ಮಾಡಿದ್ದಾರೆ. 40 ವರ್ಷದ ಭೀಮಸೇನ ಚಿಮ್ಮನಕಟ್ಟಿಯುವ ಮುಖಂಡರಾಗಿದ್ದು, ಪಕ್ಷದಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಚುನಾವಣೆ ಎದುರಿಸಬೇಕಾಗಿದೆ. ಈಗಾಗಲೇ ಜೆಡಿಎಸ್‌ ಪಕ್ಷದಿಂದ ಹಣಮಂತ ಮಾವಿನಮರದ ಹೆಸರು ಘೋಷಣೆಯಾಗಿದ್ದು, ಬಿಡುವಿಲ್ಲದೇ ಕ್ಷೇತ್ರದಾದ್ಯಂತ ಪ್ರಚಾರದಲ್ಲಿ ತೊಡಗಿದ್ದಾರೆ. ಬಿಜೆಪಿಯಿಂದ ಇನ್ನೂ ಟಿಕೆಟ್‌ ಅಂತಿಮವಾಗಿಲ್ಲ. ಬಿಜೆಪಿಯಲ್ಲಿಲ್ಲಿ ಮಾಜಿ ಶಾಸಕ ಎಂ.ಕೆ.ಪಟ್ಟಣಶೆಟ್ಟಿಮತ್ತು ಮಹಾಂತೇಶ ಮಮದಾಪೂರ, ಶಾಂತಗೌಡ ಪಾಟೀಲ ಪ್ರಬಲ ಆಕಾಂಕ್ಷಿಗಳಾಗಿದ್ದು, ಯಾರಿಗೆ ಟಿಕೇಟ್‌ ಸಿಗುತ್ತದೆ ಎಂಬುದನ್ನು ಕಾಯ್ದು ನೋಡಬೇಕಿದೆ.

Tap to resize

Latest Videos

undefined

ಬಾಗಲಕೋಟೆ: ರಹಸ್ಯ ಕಾಯ್ದುಕೊಂಡ ‘ತೇರದಾಳ’ ಕಾಂಗ್ರೆಸ್‌ ಟಿಕೆಟ್‌..!

ಹೊಸಗೌಡ್ರ ಅಸಮಾಧಾನ:

ಬಾದಾಮಿ ಮತಕ್ಷೇತ್ರಕ್ಕೆ ಕಾಂಗ್ರೆಸ್‌ ಟಿಕೇಟ್‌ ಘೋಷಣೆ ಬೆನ್ನಲ್ಲೆ ಕೈ ಪಾಳೆಯದಲ್ಲಿ ಅಸಮಾಧಾನ, ಬಂಡಾಯದ ಭೀತಿ ಶುರುವಾಗಿದೆ. ಮತ್ತೋರ್ವ ಟಿಕೆಟ್‌ ಆಕಾಂಕ್ಷಿ ಮಹೇಶ ಹೊಸಗೌಡ್ರ ಅವರು ಟಿಕೆಟ್‌ ಘೋಷಣೆಯಿಂದ ಅಸಮಾಧಾನಗೊಂಡಿದ್ದು, ಟಿಕೆಟ್‌ ನೀಡುವಂತೆ ಮತ್ತೆ ಒತ್ತಾಯ ಮಾಡಿದ್ದಾರೆ. ಬರುವ ಎರಡ್ಮೂರು ದಿನದಲ್ಲಿ ಸಭೆ ಕರೆದು ಮುಂದಿನ ನಿರ್ಧಾರ ಕೈಗೊಳ್ಳಲು ನಿರ್ಧರಿಸಿದ್ದಾರೆ. ಸಿದ್ದರಾಮಯ್ಯನವರಿಂದ ಟಿಕೆಟ್‌ ನಿರೀಕ್ಷಿಸಿದ್ದೇ ಎಂದ ಮಹೇಶ ಹೊಸಗೌಡರ ಪಕ್ಷಕ್ಕಾಗಿ ಕಳೆದ 15 ವರ್ಷಗಳಿಂದ ದುಡಿದಿದ್ದೇನೆ. ಈ ಬಾರಿ ಕಾಂಗ್ರೆಸ್‌ ಟಿಕೆಟ್‌ ಸಿಗುತ್ತೇ ಎಂಬ ನಂಬಿಕೆ ಇತ್ತು. ಆದರೆ ಇಂದು ಟಿಕೆಟ್‌ ಸಿಗದೇ ಇರುವುದಕ್ಕೆ ತೀವ್ರ ಅಸಮಾಧಾನವಾಗಿದೆ. ನಮ್ಮೆಲ್ಲ ಬೆಂಬಲಿಗರು ಅಸಮಾಧಾನಗೊಂಡಿದ್ದಾರೆ. ಹೀಗಾಗಿ ಬೆಂಬಲಿಗರೊಂದಿಗೆ ಸಭೆ ನಡೆಸಿ ಮುಂದಿನ ನಿರ್ಧಾರ ಮಾಡುತ್ತೇವೆ. ಟಿಕೆಟ್‌ ನೀಡದಿರಲು ಕಾರಣವೇನೆಂದು ಕಾಂಗ್ರೆಸ್‌ ಮುಖಂಡರು ತಿಳಿಸಬೇಕೆಂದು ಮನವಿ ಮಾಡಿದ್ದಾರೆ.

ಸಿದ್ದು ಅಭಿಮಾನಿಗಳ ಸಭೆ

2023ರ ಚುನಾವಣೆಗೆ ಬಾದಾಮಿಯಿಂದಲೇ ಸ್ಫರ್ಧೆ ಮಾಡುವಂತೆ ಆಗ್ರಹಿಸಲು ಸಿದ್ದು ಅಭಿಮಾನಿಗಳು ಏ.7ರಂದು ಬೆಳಗ್ಗೆ 11 ಗಂಟೆಗೆ ಪಟ್ಟಣದ ಅಕ್ಕಮಹಾದೇವಿ ಅನುಭವ ಮಂಟಪದಲ್ಲಿ ಸಭೆ ಕರೆದಿದ್ದರು. ಅತ್ತ ಟಿಕೆಟ್‌ ಘೋಷÜಣೆ ಮಾಡಿದ ಬೆನ್ನಲ್ಲೆ ಇತ್ತ ಸಿದ್ದು ಅಭಿಮಾನಿಗಳಿಂದ ಸಭೆ ಕರೆದಿದ್ದರು. ಬಾದಾಮಿಯಿಂದ ಟಿಕೆಟ್‌ ಘೋಷಣೆಯಾಗಿದ್ದರೂ ಸಹಿತ ಸಿದ್ದರಾಮಯ್ಯ ಸ್ಪರ್ಧೆಗೆ ಬೇಡಿಕೆ ಮುಂದುವರೆದಿದೆ. ಇಂದಿನ ಸಿದ್ದು ಅಭಿಮಾನಿಗಳು ಸಭೆ ಕುತೂಹಲ ಮೂಡಿಸಿತ್ತು. 

ಬೀಳಗಿ ಕ್ಷೇತ್ರ ಕರ್ನಾಟಕದಲ್ಲೇ ಮಾದರಿ ಗುರಿ: ಸಚಿವ ನಿರಾಣಿ

ಬಾದಾಮಿ ವಿಧಾನಸಭೆ ಮತಕ್ಷೇತ್ರದಿಂದ ನನಗೆ ಸ್ಪರ್ಧಿಸಲು ಅವಕಾಶ ನೀಡಿದ ಕಾಂಗ್ರೆಸ್‌ ಪಕ್ಷದ ಎಲ್ಲ ನಾಯಕರಿಗೆ, ಕಾರ್ಯಕರ್ತರಿಗೆ, ಬಾದಾಮಿಯ ಜನತೆಗೆ ಧನ್ಯವಾದಗಳು. ಬಾದಾಮಿ ಮತಕ್ಷೇತ್ರದ ಎಲ್ಲರ ಆಶೀರ್ವಾದ ಸದಾ ನನ್ನ ಮೇಲಿರಲಿ ಅಂತ ಬಾದಾಮಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ಭೀಮಸೇನ ಚಿಮ್ಮನಕಟ್ಟಿ ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.

click me!