ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ವಿಚಾರವೇ ಹೊರತು ಬೇರೆ ಯಾವ ಚರ್ಚೆ ಮಾಡಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಬೆಂಗಳೂರು (ಆ.21): ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ವಿಚಾರವೇ ಹೊರತು ಬೇರೆ ಯಾವ ಚರ್ಚೆ ಮಾಡಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಜಿಲ್ಲೆಯ ಚಿಕ್ಕೋಡಿ, ಬೆಳಗಾವಿ, ಬೆಳಗಾವಿ ಗ್ರಾಮಾಂತರ ಡಿಸಿಸಿ ಅಧ್ಯಕ್ಷರ ನೇಮಕ ವಿಚಾರ ಹಾಗೂ ಪಕ್ಷ ಸಂಘಟನೆ ವಿಚಾರವಾಗಿ ಚರ್ಚಿಸಿದ್ದೇವೆ.
ಈಗಾಗಲೇ ಹೆಸರುಗಳನ್ನು ಶಿಫಾರಸು ಮಾಡಲಾಗಿತ್ತು. ಈ ಬಗ್ಗೆ ಚರ್ಚಿಸಿದ್ದೇವೆಯೇ ಹೊರತು ಬೇರೇನೂ ಇಲ್ಲ ಎಂದು ಹೇಳಿದರು. ‘ಇನ್ನು ಪ್ರಾಸಿಕ್ಯೂಷನ್ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬದಲಾವಣೆ ಸಾಧ್ಯವೇ ಇಲ್ಲ. ನೂರಕ್ಕೆ ನೂರು ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ. ಬಿಜೆಪಿಗೆ ಉತ್ತರ ನೀಡಲು ಹೈಕಮಾಂಡ್ ಕೂಡ ಸಿದ್ದರಾಮಯ್ಯ ಅವರ ಬೆನ್ನಿಗೆ ಗಟ್ಟಿಯಾಗಿ ನಿಲ್ಲಬೇಕು’ ಎಂದು ಹೇಳಿದರು.
ಮುಡಾ ತನಿಖೆ ಬಳಿಕ ಸಿದ್ದರಾಮಯ್ಯ ದೋಷಮುಕ್ತರಾದರೆ ಅವರ ಪಾದ ತೊಳೆವೆ: ಶಾಸಕ ಚನ್ನಬಸಪ್ಪ
ಕಿತ್ತೂರು ನಾಡಿಗೆ ಭರ್ಜರಿ ಕೊಡುಗೆ ನೀಡಿದ ರಾಜ್ಯ ಸರ್ಕಾರ: ಐತಿಹಾಸಿಕ ಕಿತ್ತೂರು ವಿಜಯೋತ್ಸವಕ್ಕೆ ಈ ಬಾರಿ 2 ಶತಮಾನಗಳು ತುಂಬಲಿರುವ ಹಿನ್ನೆಲೆಯಲ್ಲಿ ಕಿತ್ತೂರು ಉತ್ಸವವನ್ನು ವಿಜೃಂಭಣೆಯಿಂದ ಆಚರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಉತ್ಸವಕ್ಕೆ ₹ ೫ ಕೋಟಿ ಹಾಗೂ ಥೀಮ್ ಪಾರ್ಕ್ ನಿರ್ಮಾಣಕ್ಕೆ ₹೩೫ ಕೋಟಿ ಅನುದಾನ ಬಿಡುಗಡೆಗೊಳಿಸುವ ಮೂಲಕ ಕಿತ್ತೂರು ನಾಡಿನ ಜನತೆಯ ಖುಷಿ ಹೆಚ್ಚಿಸಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಕಿತ್ತೂರು ಉತ್ಸವ ಪೂರ್ವಭಾವಿ ಸಭೆಯಲ್ಲಿ ಕಂದಾಯ ಸಚಿವ ಕೃಷ್ಣೇಬೈರೆಗೌಡ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ಶಾಸಕ ಬಾಬಾಸಾಹೇಬ ಪಾಟೀಲ ಕಿತ್ತೂರು ನಾಡಿನ ಜನತೆಯ ಬೇಡಿಕೆಗೆ ಸ್ಪಂದಿಸುವ ಮೂಲಕ ಈ ಬಾರಿಯ ಉತ್ಸವ ಆಚರಣೆ ವಿಶೇಷ ಮೆರಗು ಹೆಚ್ಚಿಸಿದ್ದಾರೆ.
ಕಿತ್ತೂರು ನಾಡಿನ ಜನರ ಧ್ವನಿಯಾಗಿ ಶಾಸಕ ಬಾಬಾಸಾಹೇಬ ಪಾಟೀಲ ಉತ್ಸವಕ್ಕೆ ಹಾಗೂ ಥೀಮ್ ಪಾರ್ಕ್ ನಿರ್ಮಿಸಲು ಅನುದಾನ ಬಿಡುಗಡೆಗೊಳಿಸುವಂತೆ ಸರ್ಕಾರಕ್ಕೆ ಮನವಿ ಮಾಡುತ್ತಲೇ ಬಂದಿದ್ದರು. ಇದೀಗ ಕಂದಾಯ ಸಚಿವ ಹಾಗೂ ಕಿತ್ತೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೃಷ್ಣಬೈರೇಗೌಡ ಅವರು ಅಭಿವೃದ್ಧಿ ಪ್ರಾಧಿಕಾರದಿಂದ ಉತ್ಸವ ಆಚರಣೆಗೆ ₹೫ ಕೋಟಿ, ಕೋಟೆಯ 7 ಎಕರೆ ಜಾಗದಲ್ಲಿ ಭವ್ಯವಾದ ಥೀಮ್ ಪಾರ್ಕ್ ನಿರ್ಮಾಣಕ್ಕಾಗಿ ₹೩೫ ಕೋಟಿ ಅನುದಾನ ಬಿಡುಗಡೆಗೊಳಿಸಿದ್ದಾರೆ.
ಇದು ಕೊಲೆ ಆರೋಪಿ ದರ್ಶನ್ ಕೈ ಕಡಗದ ರಹಸ್ಯ: ನಾಲ್ಕು ದಶಕದಿಂದ ಕೈಯಿಂದ ಕಳಚಿರಲಿಲ್ಲ ಈ ಕಡಗ!
ಈ ಸಂದರ್ಭದಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ಮಹಮ್ಮದ್ ರೋಷನ್, ಬೆಳಗಾವಿ ಜಿಪಂ ಸಿಇಒ, ಬೈಲಹೊಂಗಲ ಉಪವಿಭಾಗಾಧಿಕಾರಿ ಪ್ರಭಾವತಿ ಫಕ್ಕಿರಪೂರ, ಸರ್ಕಾರದ ಪ್ರಧಾನ ಕಾರ್ಯದರ್ಶಿ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳು ಹಾಗೂ ಕಿತ್ತೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಇದ್ದರು.